ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿಯಲ್ಲಿ ಆ. 16ರ ತನಕ ನಿಷೇಧಾಜ್ಞೆ

ಬೆಂಗಳೂರು, ಆಗಸ್ಟ್ 14 : ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 16ರ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳವಾರ ರಾತ್ರಿ ಗಲಭೆ ನಡೆದ ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ.

Recommended Video

      ಅಂಬೇಡ್ಕರ್ ಯಾರೆಂದು ಗೊತ್ತಿಲ್ಲ ಈ ಸಚಿವೆಗೆ | Oneindia Kannada

      ಶುಕ್ರವಾರ ಬೆಂಗಳೂರು ಪೊಲೀಸರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ, ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

      ಬೆಂಗಳೂರಿನ ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.

      Section 144 Imposed In DJ Halli KG Halli Police Station Limits

      ಡಿ. ಜೆ. ಹಳ್ಳಿ ಮತ್ತು ಕೆ. ಜೆ. ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಗಲಭೆ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದಾಗ ಮೂವರು ಮೃತಪಟ್ಟಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

      ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ 206 ಜನರನ್ನು ಇದುವರೆಗೂ ಬಂಧಿಸಲಾಗಿದೆ. ಹಲವು ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಕಳಿಸಲಾಗಿದೆ. 22 ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗಿದ್ದು, ತನಿಖೆ ಮುಂದುವರೆದಿದೆ.

      ಗಲಭೆಗಳ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆಗೆ ಕರ್ನಾಟಕ ಸರ್ಕಾರ ಆದೇಶ ನೀಡಿದೆ. ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಲಾಗಿದ್ದು, ಭಾರಿ ಹಾನಿಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+