ಬೆಂಗಳೂರು ಗಲಭೆ; ಆಗಸ್ಟ್ 18ರ ತನಕ ನಿಷೇಧಾಜ್ಞೆ ವಿಸ್ತರಣೆ

ಬೆಂಗಳೂರು, ಆಗಸ್ಟ್ 16 : ಬೆಂಗಳೂರು ಪೊಲೀಸರು ಡಿ. ಜೆ. ಹಳ್ಳಿ, ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 18ರ ತನಕ ನಿಷೇಧಾಜ್ಞೆಯನ್ನು ಮುಂದುವರೆಸಿ ಆದೇಶ ಹೊರಡಿಸಿದ್ದಾರೆ. ಮಂಗಳವಾರ ರಾತ್ರಿ ಗಲಭೆ ನಡೆದ ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ.

Recommended Video

      TATA Group ಹೊಸ ವರ್ಷದ ವೇಳೆಗೆ Air India ನಿಯಂತ್ರಣವನ್ನು ತೆಗೆದುಕೊಳ್ಳಬಹುದು.! | Oneindia Kannada

      ಬೆಂಗಳೂರು ನಗರ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಜಂಟಿಯಾಗಿ ನಿಷೇಧಾಜ್ಞೆ ವಿಸ್ತರಣೆ ಮಾಡುವ ತೀರ್ಮಾನ ಕೈಗೊಂಡಿದ್ದಾರೆ. ಸೆಕ್ಷನ್ 144 ಅನ್ವಯ ಆಗಸ್ಟ್ 18ರ ಬೆಳಗ್ಗೆ 6 ಗಂಟೆಯ ತನಕ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ.

      ಆಗಸ್ಟ್ 14ರಂದು ಭಾನುವಾರ ಬೆಳಗ್ಗೆ 6 ಗಂಟೆಯ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇಂದು ನಿಷೇಧಾಜ್ಞೆ ಅವಧಿ ಪೂರ್ಣಗೊಂಡ ಕಾರಣ ಅದನ್ನು ಪುನಃ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

      ಮಂಗಳವಾರ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 340 ಜನರನ್ನು ಬಂಧಿಸಲಾಗಿದೆ. ಗಲಭೆ ಪ್ರಕರಣದ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಗಡೆ ನಗರದಲ್ಲಿರುವ ಎಸ್‌ಡಿಪಿಐ ಕಚೇರಿ ಮೇಲೆಯೂ ದಾಳಿ ನಡೆಸಿದ್ದಾರೆ.

      ಗಲಭೆ ಹಿನ್ನಲೆಯಲ್ಲಿ ನಿಷೇಧಾಜ್ಞೆ

      ಗಲಭೆ ಹಿನ್ನಲೆಯಲ್ಲಿ ನಿಷೇಧಾಜ್ಞೆ

      ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಶಾಸಕರ ಮನೆಗೆ ಬೆಂಕಿ ಹಚ್ಚಲಾಗಿತ್ತು, ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು, ಕಲ್ಲು ತೂರಾಟ ನಡೆದಿತ್ತು. ಆದ್ದರಿಂದ, ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

      340 ಜನರ ಬಂಧನ

      340 ಜನರ ಬಂಧನ

      ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿ ಪ್ರದೇಶಗಳಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ 340 ಆರೋಪಿಗಳನ್ನು ಬಂಧಿಸಲಾಗಿದೆ. 80 ಜನರನ್ನು ಬಳ್ಳಾರಿ ಜೈಲಿಗೆ ಕಳಿಸಲಾಗಿದೆ. ಎಲ್ಲಾ ಆರೋಪಿಗಳಿಗೂ ಕೋವಿಡ್ ಪರೀಕ್ಷೆ ಮಾಡಿದ ಬಳಿಕ ಜೈಲಿಗೆ ಕಳಿಸಲಾಗುತ್ತಿದೆ.

      ಎಸ್‌ಡಿಪಿಐ ಕಚೇರಿ ಮೇಲೆ ದಾಳಿ

      ಎಸ್‌ಡಿಪಿಐ ಕಚೇರಿ ಮೇಲೆ ದಾಳಿ

      ಮಂಗಳವಾರ ರಾತ್ರಿ ನಡೆ ಗಲಭೆಗೆ ಸಂಬಂಧಿಸಿದಂತೆ ಎಸ್‌ಡಿಪಿಐ ಕಚೇರಿ ಮೇಲೆ ಸಿಸಿಬಿ ಪೊಲೀಸರು ಶನಿವಾರ ತಡರಾತ್ರಿ ದಾಳಿ ನಡೆಸಿದ್ದಾರೆ. ಕಚೇರಿಯಲ್ಲಿದ್ದ 8 ಮಂದಿಯನ್ನು ಬಂಧಿಸಿದ್ದಾರೆ. ದಾಳಿ ವೇಳೆ ರಾಡ್, ದೊಣ್ಣೆ ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

      ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

      ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

      ಗಲಭೆ ನಡೆದ ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿ ಪ್ರದೇಶಗಳಿಗೆ ಇಂದು ಬಿಜೆಪಿಯ ಸತ್ಯಶೋಧನಾ ಸಮಿತಿ ಭೇಟಿ ನೀಡಲಿದೆ. ಗಲಭೆ ಕುರಿತು ರಾಜಕೀಯ ಆರೋಪ ಪ್ರತ್ಯಾರೋಪ ಜೋರಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+