ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌, ರೈಲ್ವೆ ನಿಲ್ದಾಣದಲ್ಲಿ ಕಟ್ಟೆಚ್ಚರ

|
Google Oneindia Kannada News

ಬೆಂಗಳೂರು, ಫೆಬ್ರವರಿ 27: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ಪಾಕಿಸ್ತಾನದಲ್ಲಿರುವ ಉಗ್ರರ ಅಡಗುದಾಣ ಬಾಲಾಕೋಟ್‌ ಮೇಲೆ ಭಾರತ ವಾಯುದಳ ದಾಳಿ ನಡೆಸಿದೆ. ಇದರಿಂದ ಭಾರತ್ ಹಾಗೂ ಪಾಕ್ ನಡುವಿನ ಸಂಬಂಧ ಬಿಗಡಾಯಿಸಿದೆ ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗಿದೆ.

ದಿನದ ಮುಖ್ಯ ಸುದ್ದಿ: ಭಾರತದ ಪ್ರತೀಕಾರ ಹೇಗಿತ್ತು? ಪಾಕ್ ಪ್ರತಿಕ್ರಿಯೆ ಹೇಗಿತ್ತು?ದಿನದ ಮುಖ್ಯ ಸುದ್ದಿ: ಭಾರತದ ಪ್ರತೀಕಾರ ಹೇಗಿತ್ತು? ಪಾಕ್ ಪ್ರತಿಕ್ರಿಯೆ ಹೇಗಿತ್ತು?

ಕರ್ನಾಟಕದ ವಿವಿಧ ರಕ್ಷಣಾ ಕೇಂದ್ರಗಳು ಮತ್ತು ತರಬೇತಿ ಶಿಬಿರಗಳಲ್ಲಿ ತೀವ್ರ ಎಚ್ಚರಿಕೆ ಮತ್ತು ಬಿಗಿ ಭದ್ರತೆ ಕಲ್ಪಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತು ನಗರದ ರೈಲು, ಪ್ರಮುಖ ಬಸ್ ನಿಲ್ದಾಣಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

Security beefed up at Kempegowda International Airport, railway stations

ಜೈಷ್ ಎ ಮೊಹಮ್ಮದ್ ಸಂಘಟನೆಯ ತಾಣಗಳ ಮೇಲೆ ಭಾರತೀಯ ವಾಯುಪಡೆಯ ದಾಳಿಯ ನಂತರ ಕಾರವಾರದಲ್ಲಿರುವ ನೌಕಾಪಡೆ ದುರಸ್ತಿ ಕೇಂದ್ರದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.

ಉಗ್ರನೆಲೆ ಧ್ವಂಸ LIVE: ಭಾರತ-ಪಾಕ್ ಗಡಿಯಲ್ಲಿ ಯುದ್ಧದ ವಾತಾವರಣಉಗ್ರನೆಲೆ ಧ್ವಂಸ LIVE: ಭಾರತ-ಪಾಕ್ ಗಡಿಯಲ್ಲಿ ಯುದ್ಧದ ವಾತಾವರಣ

ವಿಮಾನ ನಿಲ್ದಾಣ, ರೈಲು ನಿಲ್ದಾಣ ಇತ್ಯಾದಿ ಕಡೆಗಳಲ್ಲಿ ಜನರ ತಪಾಸಣೆ, ವಸ್ತುಗಳ ತಪಾಸಣೆ ತೀವ್ರವಾಗಿ ನಡೆಯುತ್ತಿದೆ. ಭದ್ರತೆಯ ಭಾಗವಾಗಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ನ ಉನ್ನತ ಮಟ್ಟದ ಅಧಿಕಾರಿಗಳು ತಿಳಿಸಿದ್ದಾರೆ.

'ಈಗ ನಿಮ್ಮ ಸರದಿ, ನಮ್ಮ ಅಚ್ಚರಿ ಎದುರಿಸಲು ಸಿದ್ಧರಾಗಿ' : ಪಾಕಿಸ್ತಾನ'ಈಗ ನಿಮ್ಮ ಸರದಿ, ನಮ್ಮ ಅಚ್ಚರಿ ಎದುರಿಸಲು ಸಿದ್ಧರಾಗಿ' : ಪಾಕಿಸ್ತಾನ

ಈ ಮಧ್ಯೆ ರಜೆಯ ಮೇಲೆ ತಮ್ಮ ಊರುಗಳಿಗೆ ತೆರಳಿರುವ ಸೇನಾಪಡೆ ಯೋಧರಿಗೆ ಮತ್ತು ಇತರ ಸಿಬ್ಬಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

English summary
Following India’s retaliatory strikes on terror camps and launch pads in Pakistan on Tuesday, security has been tightened in public places in the city such as railway stations and Kempegowda International Airport.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X