ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಲು ಸೊಂಟದಲ್ಲಿ ಗನ್‌ ಸಿಕ್ಕಿಸಿಕೊಂಡು ಬಂದ ಭೂಪ, ವಿಡಿಯೋ ವೈರಲ್‌

ಬೆಂಗಳೂರು, ಏಪ್ರಿಲ್‌, 09: ಲೋಕಸಭೆ ಚುನಾವಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ (ಏಪ್ರಿಲ್‌ 08) ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಪ್ರಚಾರ ಮಾಡುತ್ತಿದ್ದು, ಈ ವೇಳೆ ವ್ಯಕ್ತಿಯೊಬ್ಬ ಸೊಂಟದಲ್ಲಿ ಗನ್ ಇಟ್ಟುಕೊಂಡು ತೆರೆದ ವಾಹನದಲ್ಲಿ ತೆರಳುತ್ತಿದ್ದ ಸಿದ್ದರಾಮಯ್ಯ, ಅಭ್ಯರ್ಥಿಗೆ ಹಾರ ಹಾಕಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿದ್ದು, ಈ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿವೆ. ಇದಕ್ಕೆ ಬಿಜೆಪಿ ಏನು ಹೇಳುತ್ತಿದೆ ಎಂದು ಇಲ್ಲಿ ತಿಳಿಯಿರಿ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಪ್ರಚಾರ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಇದು ಭಾರೀ ಆತಂಕಕ್ಕೆ ಕಾರಣವಾಗಿತ್ತು. ಇನ್ನು ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವಿರೋಧ ಪಕ್ಷಗಳು ಕಾಂಗ್ರೆಸ್‌ ವಿರುದ್ಧ ಕೆಂಡಕಾರುತ್ತಿವೆ.

Security breach during CM Siddaramaiah campaign video viral

ಇನ್ನು ಇದಕ್ಕೆ ಬಿಜೆಪಿ ಕರ್ನಾಟಕ ಟ್ವೀಟ್‌ ಮಾಡಿದ್ದು, ಮುಖ್ಯಮಂತ್ರಿ ಅವರಿಗೆ ಹಾರ ಹಾಕುವವರು, ಸನ್ಮಾನ ಮಾಡುವವರು ಗೂಂಡಾಗಳು, ರೌಡಿಗಳು, ಬೀದಿ ಪುಂಡರು ಎನ್ನುವುದು ಸಾಬೀತಾಗಿದೆ. ಇಷ್ಟುದಿನ ಹುಟ್ಟುಹಬ್ಬದ ಫ್ಲೆಕ್ಸ್‌ಗಳಲ್ಲಿ ಕಾಣಿಸುತ್ತಿದ್ದ ಗನ್ ಹಿಡಿದ ರೌಡಿಗಳು, ಇದೀಗ ಸಿಎಂ, ಡಿಸಿಎಂ ಅವರ ರ್‍ಯಾಲಿಗಳಲ್ಲಿ ರಾಜಾರೋಷವಾಗಿ ಗನ್ ಹಿಡಿದು ಹಾರ ಹಾಕಿ ಸಮಾಜದ ಮುಂದೆ ಪೋಸ್ ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಗನ್ ಹಿಡಿದು ಈ ರೀತಿ ಪ್ರದರ್ಶನ ಮಾಡುತ್ತಿರುವುದು ಮತದಾರರನ್ನು ಏರಿಯಾದಲ್ಲಿ ಬೆದರಿಸುವುದಕ್ಕೆ ಎಂದು ಟ್ವೀಟ್‌ ಮಾಡುವ ಮೂಲಕ ಬಿಜೆಪಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ ಸಿಎಂ ಹೇಳಿದ್ದೇನು?: ಲೋಕಸಭೆ ಚುನಾವಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅವರ ಪರವಾಗಿ ಭರ್ಜರಿ ಪ್ರಚಾರ ಮಾಡಿದ್ದು, ಈ ವೇಳೆ ಅವರು ಮೇಕೆದಾಟು ಯೋಜನೆ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಹಾಗಾದರೆ ಅದು ಏನು ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.

ಬೆಂಗಳೂರಿಗೆ ಕುಡಿಯುವ ನೀರು ಒದಗಿಸಲು ಮೇಕೆದಾಟು ಯೋಜನೆ ಅನಿವಾರ್ಯ ಆಗಿದ್ದು, ಮೇಕೆದಾಟು ಯೋಜನೆಗೆ ಕೇಂದ್ರದಿಂದ ಅನುಮತಿ ಸಿಗಬೇಕಾದರೆ ಸೌಮ್ಯಾರೆಡ್ಡಿ ಗೆಲ್ಲಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯಾರೆಡ್ಡಿ ಅವರ ಪರವಾಗಿ ಪ್ರಚಾರದ ಎರಡನೇ ದಿನವಾದ ಸೋಮವಾರ (ಏಪ್ರಿಲ್ 8) ಮುಖ್ಯಮಂತ್ರಿಗಳು ಬಿರುಸಿನ ರೋಡ್ ಶೋ ನಡೆಸಿದ್ದು, ಈ ವೇಳೆ ಬಿಜೆಪಿ ಸಂಸದ ತೇಜವಿ ಸೂರ್ಯ ಅವರ ಸರಣಿ ವೈಫಲ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಇನ್ನು "ಬೆಂಗಳೂರು ದಕ್ಷಿಣದಲ್ಲಿ ಕುಡಿಯುವ ನೀರಿಗಾಗಿ ಕಾವೇರಿ ಸಂಪರ್ಕ ಹೆಚ್ಚಿಸಬೇಕಿದೆ. ಈಗ ಶೇಕಡಾ 60ರಷ್ಟು ಮಾತ್ರ ಆಗಿದೆ. ಮೇಕೆದಾಟು ಯೋಜನೆ ಜಾರಿಯಾಗಬೇಕಾದರೆ ಸೌಮ್ಯಾರೆಡ್ಡಿ ಅವರ ಗೆಲುವು ಅತ್ಯಗತ್ಯ," ಎಂದರು.

ಮೇಕೆದಾಟು ಯೋಜನೆಯು ರಾಮನಗರ ಜಿಲ್ಲೆಯ ಕನಕಪುರ ಬಳಿ ಸಮತೋಲನ ಜಲಾಶಯದ ನಿರ್ಮಾಣವನ್ನು ಒಳಗೊಂಡ ಬಹುಪಯೋಗಿ ಯೋಜನೆಯಾಗಿದೆ. ಇದು ಪೂರ್ಣಗೊಂಡ ನಂತರ, ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಉದ್ದೇಶಕ್ಕಾಗಿ 4 ಟಿಎಂಸಿ ನೀರನ್ನು ಪೂರೈಸುವ ನಿರೀಕ್ಷೆಯಿದೆ ಎಂದರು.

"ವಿಧಾನಸಭಾ ಚುನಾವಣೆಯ ಮತ ಎಣಿಕೆ ವೇಳೆ ಸೌಮ್ಯಾ ರೆಡ್ಡಿಗೆ ಅನ್ಯಾಯ ಆಗಿದೆ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ನ್ಯಾಯ ದೊರಕಿಸಿಕೊಡಬೇಕು," ಎಂದು ಜನರಿಗೆ ಮನವಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+