ವಕೀಲೆ ಮೇಲೆ ಸೆಕ್ಯೂರಿಟಿ ಗಾರ್ಡ್‌ನಿಂದ ಅತ್ಯಾಚಾರಕ್ಕೆ ಯತ್ನ
ಬೆಂಗಳೂರು, ಜನವರಿ 28: ವಕೀಲೆ ಮೇಲೆ ಸೆಕ್ಯುರಿಟಿ ಗಾರ್ಡ್ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ವಕೀಲೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ತಡರಾತ್ರಿ ವಕೀಲೆಯು ಕೆಲಸ ಮುಗಿಸಿ ಕಚೇರಿಯಿಂದ ಹೊರ ಬಂದು ಪಾರ್ಕಿಂಗ್ ಜಾಗಕ್ಕೆ ಬರುತ್ತಿದ್ದಂತೆ ಕೆಳಗೆ ಬೀಳಿಸಿ ಸೆಕ್ಯೂರಿಟಿ ಗಾರ್ಡ್ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಭಯದಿಂದ ವಕೀಲೆ ಕೂಗುತ್ತಿದ್ದನ್ನು ಕಂಡು ಸೆಕ್ಯೂರಿಟಿ ಗಾರ್ಡ್ ಸ್ಥಳದಿಂದಲೇ ಕಾಲು ಕಿತ್ತಿದ್ದಾನೆ. ನಂತರ ವಕೀಲೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ವಕೀಲೆ ಮೇಲೆ ಸೆಕ್ಯುರಿಟಿ ಗಾರ್ಡ್‌ಗೆ ದ್ವೇಷವೇನಾದರು ಇತ್ತೇ ಎನ್ನುವ ಕುರಿತು ಮಾಹಿತಿ ಹೊರ ಬರಬೇಕಿದೆ.












Click it and Unblock the Notifications