ರಾಜದ್ರೋಹದ ಆರೋಪದಲ್ಲಿ ವಿಡಿಯೋ ಪ್ರಮುಖ ಸಾಕ್ಷಿ
ಬೆಂಗಳೂರು, ಆಗಸ್ಟ್ 16 : ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ದಾಖಲಾಗಿರುವ ರಾಜದ್ರೋಹದ ಪ್ರಕರಣದಲ್ಲಿ ಆರೋಪದಲ್ಲಿ ವಿಡಿಯೋಗಳು ಪ್ರಮುಖ ದಾಖಲೆಗಳಾಗಿವೆ. ಜೆ.ಸಿ.ನಗರ ಪೊಲೀಸರು ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.
ಬೆಂಗಳೂರಿನ ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಆಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ಸಂಸ್ಥೆ ಆಗಸ್ಟ್ 13ರಂದು 'ಬ್ರೋಕನ್ ಫ್ಯಾಮಿಲೀಸ್' ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಿತ್ತು.[ರಾಜದ್ರೋಹದ ಆರೋಪ, ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸ್ಪಷ್ಟನೆಗಳು]

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೆಲವು ಯುವಕರು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಎಬಿವಿಪಿ ಬೆಂಗಳೂರು ಉತ್ತರ ವಿಭಾಗದ ಸಂಘಟನಾ ಕಾರ್ಯದರ್ಶಿ ಟಿ.ಜಯಪ್ರಕಾಶ್ ಅವರು ಈ ಕುರಿತು ಸಲ್ಲಿಸಿದ್ದ ದೂರಿನ ಅನ್ವಯ ಜೆ.ಸಿ.ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.[ದೇಶ ವಿರೋಧಿ ಘೋಷಣೆ, ಬೆಂಗಳೂರು ಪೊಲೀಸರಿಂದ FIR]
ಪೊಲೀಸರ ಬಳಿ ಸಿಡಿ ಇದೆ : ಆಗಸ್ಟ್ 13ರಂದು ನಡೆದ 'ಬ್ರೋಕನ್ ಫ್ಯಾಮಿಲೀಸ್' ಕಾರ್ಯಕ್ರಮದ ವಿಡಿಯೋ ಈ ಪ್ರಕರಣದ ತನಿಖೆಗೆ ಪ್ರಮುಖವಾದ ದಾಖಲೆಗಯಾಗಿದೆ. ಪೊಲೀಸರ ಬಳಿ ಕಾರ್ಯಕ್ರಮದ ಸಿಡಿ ಇದ್ದು, ಅದನ್ನು ವಿಧಿವಿಜ್ಞಾನ ಪ್ರಾಯೋಗಾಲಯಕ್ಕೆ ಕಳುಹಿಸಲಾಗಿದೆ.
ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ಐಪಿಸಿ ಸೆಕ್ಷನ್ 142 (ಕಾನೂನು ಬಾಹಿರ ಸಭೆ ಆಯೋಜನೆ), 147 (ಗಲಭೆಗೆ ಪ್ರಚೋದನೆ), 124 (ಎ) ರಾಜದ್ರೋಹ, 153 (ಎ) ಎರಡು ಗುಂಪುಗಳ ನಡುವೆ ಜಾತಿ, ಜನಾಂಗದ ಹೆಸರಿನಲ್ಲಿ ದ್ವೇಷ ಬಿತ್ತುವುದು ಮುಂತಾದ ಆರೋಪಗಳಡಿ ಪ್ರಕರಣ ದಾಖಲಾಗಿದೆ.
ಕಾರ್ಯಕ್ರಮಕ್ಕೆ ಪೊಲೀಸರನ್ನು ಆಹ್ವಾನಿಸಲಾಗಿತ್ತು. ಕಾರ್ಯಕ್ರಮ ನಡೆಯುವಾಗ ಪೊಲೀಸರು ಅಲ್ಲಿದ್ದರು. ಆದರೆ, ಈಗ ನಮ್ಮ ವಿರುದ್ಧ ರಾಜದ್ರೋಹದ ಆರೋಪದಡಿ ಎಫ್ಐಆರ್ ದಾಖಲು ಮಾಡುವುದು ಕಾನೂನು ಪ್ರಕಾರ ಸರಿಯೇ? ಎಂದು ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶ್ನಿಸಿದೆ. ಕಾರ್ಯಕ್ರಮದ ಬಗ್ಗೆ ತನ್ನ ವೆಬ್ಸೈಟ್ನಲ್ಲಿ ಸ್ಪಷ್ಟನೆ ಕೊಟ್ಟಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ










Click it and Unblock the Notifications