ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಕಚೇರಿಗಳಿಗೆ ಬೀಗ!

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಆಗಸ್ಟ್ 18 : ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿರುದ್ಧ ರಾಜದ್ರೋಹ ಪ್ರಕರಣ ದಾಖಲಾಗುತ್ತಿದ್ದಂತೆ ಬೆಂಗಳೂರು, ಮುಂಬೈ, ದೆಹಲಿಯ ಕಚೇರಿಗಳಿಗೆ ಬೀಗ ಜಡಿಯಲಾಗಿದೆ. ಶುಕ್ರವಾರದ ನಂತರ ಕಚೇರಿಗಳು ಬಾಗಿಲು ತೆರೆಯುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿರುವ ಕಚೇರಿಯನ್ನು ಪೊಲೀಸರ ಸಲಹೆಯ ನಂತರ ಮುಚ್ಚಲಾಗಿದೆ. ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾದ ಸದಸ್ಯರನ್ನು ಬಂಧಿಸುವಂತೆ ಎಬಿವಿಪಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ, ಕಚೇರಿಗೆ ಬೀಗ ಹಾಕುವಂತೆ ಪೊಲೀಸರು ಸಲಹೆ ಕೊಟ್ಟಿದ್ದರು.[Amnesty International ಬಗ್ಗೆ ತಿಳಿಯಿರಿ]

Sedition row : Amnesty International temporarily shuts down offices

ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾದ ಕಾರ್ಯಕರ್ತರ ಮೇಲೆ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ಕಚೇರಿಗಳನ್ನು ಮುಚ್ಚಲಾಗಿದೆ. ಮುಂಬೈ, ದೆಹಲಿಯಲ್ಲಿ ಸಂಸ್ಥೆ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳನ್ನು ಒಂದು ವಾರಗಳ ಕಾಲ ಮುಂದೂಡಲಾಗಿದೆ.[ರಾಜದ್ರೋಹದ ಆರೋಪದಲ್ಲಿ ವಿಡಿಯೋ ಪ್ರಮುಖ ಸಾಕ್ಷಿ]

ಬೆಂಗಳೂರಿನ ಜೆ.ಸಿ.ನಗರ ಪೊಲೀಸರು ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿರುದ್ಧ ರಾಜದ್ರೋಹದ ಪ್ರಕರಣ ದಾಖಲು ಮಾಡಿದ್ದಾರೆ. ಯುನೈಟೆಡ್‌ ಥಿಯಾಲಾಜಿಕಲ್‌ ಕಾಲೇಜಿನಲ್ಲಿ ಸಂಸ್ಥೆ ಆಗಸ್ಟ್ 13ರಂದು 'ಬ್ರೋಕನ್‌ ಫ್ಯಾಮಿಲೀಸ್‌' ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆ ಕೂಗಲಾಗಿದೆ ಎಂಬುದು ಆರೋಪವಾಗಿದೆ.[ರಾಜದ್ರೋಹದ ಆರೋಪ, ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸ್ಪಷ್ಟನೆಗಳು]

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಗಳೂರು ಉತ್ತರ ವಿಭಾಗದ ಸಂಘಟನಾ ಕಾರ್ಯದರ್ಶಿ ಟಿ.ಜಯಪ್ರಕಾಶ್ ಅವರು ಸಲ್ಲಿಸಿದ್ದ ದೂರಿನ ಅನ್ವಯ ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಸಂಸ್ಥೆ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.

English summary
Amnesty International which has been in the eye of the storm after a case of sedition was filed against them has temporarily closed down its offices in Bengaluru, Delhi and Mumbai. The offices will re-open on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X