ಹೆಗಲ ಮೇಲೆ 'ಕೈ': ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಸೆಲ್ಫಿ ಸಮರ!
ಬಾಗಲಕೋಟೆ, ಜುಲೈ 12: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ(ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಸ್ಪಷ್ಟವಾಗುತ್ತಿದೆ. ಈ ಮಧ್ಯೆ ಸಿದ್ದರಾಮಯ್ಯ ಹೆಗಲ ಮೇಲೆ ಅಭಿಮಾನಿ ಜೊತೆ ಕ್ಲಿಕ್ಕಿಸಿಕೊಂಡ ಫೋಟೋ ಕೆಪಿಸಿಸಿ ಅಧ್ಯಕ್ಷರಿಗೇ ತಿರುಗೇಟು ನೀಡುವ ಧಾಟಿಯಲ್ಲಿದೆ.
Recommended Video

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ ಎಂ ದೊಡ್ಡಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಹೆಗಲ ಮೇಲೆ ಕೈ ಹಾಕಲು ಬಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದರು. ಮೊಬೈಲ್ನಲ್ಲಿ ವಿಡಿಯೋ ಮಾಡುತ್ತಿರುವುದನ್ನು ನೋಡಿ ಹೆಗಲ ಮೇಲೆ ಕೈ ಹಾಕ್ತಿಯಾ, ಕಾಮನ್‌ಸೆನ್ಸ್ ಇಲ್ವಾ ಎಂದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.
ಕಾಂಗ್ರೆಸ್ ಕಾರ್ಯಕರ್ತನ ಕಪಾಳಕ್ಕೆ ಹೊಡದಿರುವ ಬಗ್ಗೆ ಸ್ವತಃ ಡಿ ಕೆ ಶಿವಕುಮಾರ್ ಸ್ಪಷ್ಟನೆಯನ್ನೂ ಕೊಟ್ಟಿದ್ದರು. "ಹೆಗಲ ಮೇಲೆ ಕೈ ಹಾಕೋದು ಅಂದ್ರೆ ಏನ್ ಅರ್ಥ? ಹೆಗಲ ಮೇಲೆ ಕೈ ಹಾಕಿದರೆ ನೋಡುವವರು ಏನು ತಿಳಿದುಕೊಳ್ಳುತ್ತಾರೆ?, ಇಂಥದ್ದಕ್ಕೆಲ್ಲಾ ಅವಕಾಶ ಕೊಡಲು ಆಗುತ್ತಾ?,'' ಎನ್ನುವ ಮೂಲಕ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದರು.

ಸಿದ್ದರಾಮಯ್ಯ ಹೆಗಲ ಮೇಲೆ ಕೈ ಹಾಕಿದ ಅಭಿಮಾನಿ:
ಮಂಡ್ಯದಲ್ಲಿ ಒಂದು ಕಡೆ ಪಕ್ಷದ ಕಾರ್ಯಕರ್ತನೇ ತಮ್ಮ ಹೆಗಲ ಮೇಲೆ ಕೈ ಹಾಕಲು ಮುಂದಾಗಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಪಾಳಮೋಕ್ಷ ಮಾಡುತ್ತಾರೆ. ಇದಕ್ಕೆ ತದ್ವಿರುದ್ಧ ಎನ್ನುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಅಭಿಮಾನಿಯ ಜೊತೆ ಆತ್ಮೀಯವಾಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗುತ್ತಿದೆ. ಈ ಫೋಟೋದಲ್ಲಿ ಅಭಿಮಾನಿಯೊಬ್ಬರು ಸಿದ್ದರಾಮಯ್ಯ ಹೆಗಲ ಮೇಲೆ ಕೈ ಹಾಕಿಕೊಂಡು ಫೋಟೋಗೆ ಫೋಸ್ ಕೊಟ್ಟಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಮರ:
ಕಾಂಗ್ರೆಸ್ ಪಕ್ಷದಲ್ಲಿ ಯಾರು ಮುಂದಿನ ಮುಖ್ಯಮಂತ್ರಿ ಎಂಬ ಚರ್ಚೆಗೆ ಸಂಬಂಧಿಸಿದಂತೆ ಎರಡು ನಾಯಕರ ಬೆಂಬಲಿಗರು ಹಾಗೂ ಕಾರ್ಯಕರ್ತರ ನಡುವೆ ವಾಕ್ಸಮರ ನಡೆಸಿದ್ದು ಆಗಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಇಬ್ಬರು ನಾಯಕರ ನಡುವೆ ಫೋಟೋ ಸಮರ ಶುರುವಾದಂತೆ ಕಾಣುತ್ತಿದೆ. ಇಬ್ಬರು ನಾಯಕರ ಅಭಿಮಾನಿಗಳು ಹಾಗೂ ಕಾರ್ಯಕರ್ತರ ನಡುವಿನ ಈ ಸಮರ ಎಲ್ಲಿಗೆ ಹೋಗಿ ಮುಟ್ಟುತ್ತದೆಯೋ ಏನೋ ಎಂದು ಕಾದುನೋಡಬೇಕಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications