Actress Leelavathi : ಮನೆಯಿಂದಲೇ ಮತದಾನ ಮಾಡಿದ ಹಿರಿಯ ನಟಿ ಲೀಲಾವತಿ
ಹಿರಿಯ ನಟಿ ಲೀಲಾವತಿ ಏಪ್ರಿಲ್ 29ರಂದು ಶನಿವಾರ ಮನೆಯಿಂದಲೇ ಮತದಾನ ಮಾಡಿದ್ದಾರೆ. ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಹಕ್ಕನ್ನು ಹೊಂದಿರುವ ಅವರು, ತಮ್ಮ ಮನೆಯಲ್ಲಿ ಮತ ಚಲಾಯಿಸಿದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿದೆ.
ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಮನೆಯಲ್ಲಿ ಮತದಾನ ಮಾಡಿದ್ದಾರೆ. ಮಗ ವಿನೋದ್ ರಾಜ್ ಸಹಾಯದಿಂದ ಲೀಲಾವತಿ ಮನೆಯಲ್ಲಿ ಮತದಾನ ಮಾಡಿದ್ದಾರೆ. ಈ ಮೂಲಕ ಮೊದಲ ಮತದಾನ ಮಾಡಿದ ನಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬ್ಯಾಲೆಟ್ ಪೇಪರ್ ಮೂಲಕ ತಮ್ಮ ನೆಚ್ಚಿನ ಅಭ್ಯರ್ಥಿಗೆ ಮತದಾನ ಮಾಡಿದರು.

ಈ ಬಾರಿ ಚುನಾವಣೆಯಲ್ಲಿ ಹಿರಿಯ ನಾಗರೀಕರು, ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ನೀಡಿದೆ. ಎಂಬತ್ತು ವರ್ಷ ಹೆಚ್ಚಿನ ವಯಸ್ಸಾದವರಿಗೆ, ಅಂಗವಿಕಲರು, ಪತ್ರಕರ್ತರು ಬ್ಯಾಲೆಟ್ ಮೂಲಕ ಮತದಾನ ಮಾಡಲು ಅವಕಾಶ ಮಾಡಿಕೊಟ್ಟಿದ್ದು, ಏಪ್ರಿಲ್ 29ರಿಂದಲೇ ಚುನಾವಣಾ ಆಯೋಗ ಇದಕ್ಕೆ ಚಾಲನೆ ನೀಡಿದೆ.
ವಿಧಾನಸಭೆ ಚುನಾವಣೆ 2023 : ಮೊದಲ ಮತದಾನ ಮಾಡಿದ ನಟಿ ಲೀಲಾವತಿ#Leelavathi #Vinod #Voting #Election #KarnatakaElections2023 pic.twitter.com/P8sfupvByv
— oneindiakannada (@OneindiaKannada) April 29, 2023
ಮತದಾನ ಮಾಡಿದ ಬಳಿಕ ಮಾತನಾಡಿರುವ ಲೀಲಾವತಿಯವರು, " ಚುನಾವಣಾ ಆಯೋಗ ಈ ಅವಕಾಶ ಕಲ್ಪಿಸಿರುವುದು ನನ್ನಂತಹ ಹಿರಿಯರಿಗೆ ಅನುಕೂಲವಾಗಿದೆ. ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಮತದಾನದ ಪ್ರಕ್ರಿಯೆಯಲ್ಲಿ ಎಲ್ಲರೂ ಭಾಗಿಯಾಗಬೇಕು, ಮನೆಯಲ್ಲಿ ಮತದಾನ ಮಾಡಿದ್ದು ಖುಷಿ ನೀಡಿದೆ" ಎಂದು ಹೇಳಿದರು.
ಮನೆಯಿಂದ ಮತದಾನ ಮಾಡಲಿರುವ 99,529 ಮತದಾರರು
ಭಾರತೀಯ ಚುನಾವಣಾ ಆಯೋಗವು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಂತೆಯೇ ವಯಸ್ಸಾದ ಮತ್ತು ವಿಶೇಷಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಹೊಸ ಕ್ರಮವನ್ನು ಕೈಗೊಂಡಿದೆ.
ಹೊಸ ಮತದಾನದ ವ್ಯವಸ್ಥೆಯು ರಾಜ್ಯದಲ್ಲಿ ಸುಮಾರು 5.71 ಲಕ್ಷ ವಿಕಲಚೇತನರು ಮತ್ತು 80 ವರ್ಷಕ್ಕಿಂತ ಮೇಲ್ಪಟ್ಟ 12,15,763 ವೃದ್ಧರು ಇದರ ಪ್ರಯೋಜನ ಪಡೆಯಬಹುದಾಗಿದೆ. 80 ವರ್ಷಕ್ಕಿಂತ ಮೇಲ್ಪಟ್ಟ 80,250 ಹಿರಿಯ ನಾಗರಿಕರು ಮತ್ತು 19,729 ವಿಶೇಷಚೇತನ ಮತದಾರರು ಸೇರಿದಂತೆ ಒಟ್ಟು 99,529 ಜನರು ಮನೆಯಿಂದ ಮತ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ.
"ತಮ್ಮ ಮನೆಗಳಿಗೆ ಸೀಮಿತವಾಗಿರುವ ಅಥವಾ ವಯಸ್ಸಿಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿರುವ" ಜನರಿಗೆ ಮಾತ್ರ ಅನ್ವಯಿಸುತ್ತದೆ ಎಂದು ಕರ್ನಾಟಕದ ಚುನಾವಣಾ ಸಿಇಒ ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 29ರಂದು ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಮೇ 6ರವರೆಗೆ ನಡೆಯಲಿದೆ, ಈ ವೇಳೆ ಪ್ರತ್ಯೇಕ ಮತಗಟ್ಟೆ ಸಿಬ್ಬಂದಿ ಇಬ್ಬರು ಮತಗಟ್ಟೆ ಅಧಿಕಾರಿಗಳು, ಒಬ್ಬ ಪೋಲೀಸ್, ಒಬ್ಬ ವಿಡಿಯೋಗ್ರಾಫರ್ ಸೇರಿದಂತೆ ಐವರು ಸದಸ್ಯರ ತಂಡದೊಂದಿಗೆ ಅರ್ಹ ಮತದಾರರ ಮನೆಗೆ ಭೇಟಿ ನೀಡಲಿದ್ದಾರೆ.
ಮತದಾರರ ಗುರುತಿನ ಚೀಟಿಯನ್ನು ಪರಿಶೀಲಿಸಿ, ಒಪ್ಪಿಗೆ ಪಡೆದುಕೊಳ್ಳಿದ್ದು, ಮತಪತ್ರವನ್ನು ನೀಡಲಿದ್ದಾರೆ. ಮತದಾರರು ತಮ್ಮ ಮತವನ್ನು ರಹಸ್ಯವಾಗಿ ಚಲಾಯಿಸಬೇಕು, ಅದನ್ನು ಮತಪೆಟ್ಟಿಗೆಯಲ್ಲಿ ಹಾಕಬೇಕಾಗುತ್ತದೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications