ಕಾನೂನು ವಿಷಯ ಸಾರ್ವತ್ರಿಕವಾಗಿದೆ: ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರವಿಂದ್ ಕಾಮತ್

ಭಾರತದಲ್ಲಿ ಕಾನೂನು ಅಭ್ಯಾಸ ಮಾಡುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಹಾಗೇ ಕಾನೂನಿನ ಬಗ್ಗೆ ಜ್ಞಾನ ಕೂಡ ಬೆಳೆಯುತ್ತಿದೆ. ಹೀಗಿದ್ದಾಗ ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರವಿಂದ್ ಕಾಮತ್ ಅವರು ವಿದ್ಯಾರ್ಥಿಗಳಿಗೆ ಕಾನೂನು ವಿಷಯದ ಮಹತ್ವದ ಬಗ್ಗೆ ತಿಳಿಸಿದ್ದಾರೆ. ಅಲ್ಲದೆ ಕಾನೂನಿನ ಅಭ್ಯಾಸ ಎಷ್ಟು ಮುಖ್ಯ ಎಂಬ ವಿಚಾರವನ್ನೂ ಇಂದಿನ ಕಾನೂನು ವಿದ್ಯಾರ್ಥಿಗಳಿಗೆ ಬಿಡಿಸಿ ಹೇಳಿದ್ದಾರೆ.

ಬೆಂಗಳೂರಿನ ಶ್ರೀ ಜಗದ್ಗುರು ರೇಣುಕಾಚಾರ್ಯ ಕಾನೂನು ಕಾಲೇಜಲ್ಲಿ ನಡೆದ ವಾರ್ಷಿಕೋತ್ಸವ ಮತ್ತು ಪದವಿ ಪ್ರಧಾನ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಹೈಕೋರ್ಟ್‌ನ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರವಿಂದ್ ಕಾಮತ್ ಕಾನೂನು ವಿದ್ಯಾರ್ಥಿಗಳಿಗೆ ಹಲವು ಸಲಹೆ ನೀಡಿದರು. ಇಂದು ಕಾನೂನು ವಿಷಯವನ್ನು ಇಡೀ ಪ್ರಪಂಚ ಒಪ್ಪಿಕೊಂಡಿದೆ. ನೀವು ಉತ್ತಮ ಪಠ್ಯ ವಿಷಯವನ್ನ ಆಯ್ಕೆ ಮಾಡಿಕೊಂಡಿದ್ದೀರಿ ವಿದ್ಯಾರ್ಥಿಗಳು ಪ್ರತಿದಿನ ಕಲಿಕೆಯಲ್ಲಿ ನಿರತರರಾಗಿ ಇರಬೇಕು. ಬೇರೆ ಬೇರೆ ನ್ಯಾಯಾಲಯಗಳಲ್ಲಿ ಪ್ರಕಟವಾಗುವ ತೀರ್ಪಿನ ಬಗ್ಗೆಯೂ ಅರಿವು ಮೂಡಿಸಿಕೊಳ್ಳಿ ಎಂದು ಹೈಕೋರ್ಟ್ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರವಿಂದ್ ಕಾಮತ್ ಸಲಹೆ ನೀಡಿದರು.

Senior Advocate Arvind Kamath Said This To The LLB Students

ಮಾನವೀಯ ಮೌಲ್ಯಗಳಿಗೂ ಆದ್ಯತೆ ನೀಡಿ

ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿಕೊಂಡಿದ್ದ ಹಿರಿಯ ವಕೀಲರು ಹಾಗೂ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಟಿ.ಎ. ರಾಜಶೇಖರ್, ವಿದ್ಯಾರ್ಥಿಗಳು ನ್ಯಾಯಾಲಯದ ಭಾಷೆ ಬಗ್ಗೆ ಜ್ಞಾನ ಬೆಳೆಸಿಕೊಳ್ಳಿ. ಹಿರಿಯ ವಕೀಲರ ಜೊತೆಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಿ. ಆ ಮೂಲಕ ನಿಮಗೆ ಹೆಚ್ಚಿನ ಜ್ಞಾನ ಬೆಳೆಯಲಿದೆ. ಪ್ರತಿನಿತ್ಯ ನಡೆಯುವ ಬೆಳವಣಿಗೆ ಬಗ್ಗೆ ಜ್ಞಾನ ಪಡೆದುಕೊಳ್ಳಿ. ಹಾಗೇ ಮಾನವೀಯ ಮೌಲ್ಯಗಳಿಗೂ ಆದ್ಯತೆ ನೀಡಿ ಕಾಲೇಜಿನ ಕೀರ್ತಿ ಬೆಳಗಿ ಎಂದು ಶುಭ ಹಾರೈಸಿದರು. ಕಾನೂನು ಕಲಿಕೆ ಎಷ್ಟು ಮುಖ್ಯ ಎಂಬ ವಿಚಾರವನ್ನು, ಈ ಸಮಯದಲ್ಲಿ ಹಿರಿಯ ವಕೀಲರಾದ ಟಿ.ಎ. ರಾಜಶೇಖರ್ ಅವರು ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು.

ಅತ್ಯುತ್ತಮ ವಿದ್ಯಾರ್ಥಿಗಳಿಗೆ ಸನ್ಮಾನ

ಇದೇ ವೇಳೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನದ ಜತೆ ಪಾರಿತೋಷಕ ನೀಡಿ ಪ್ರೋತ್ಸಾಹಿಸಲಾಯಿತು. ಹಲವು ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿದ್ದ ವಿದ್ಯಾರ್ಥಿಗಳನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಹಾಗೇ ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಜಯಶ್ರೀ ಆರ್. ಸಾಲಿಮಠ್, ಸಂಸ್ಥೆಯ ಉಪಾಧ್ಯಕ್ಷ ಎಂ. ಕೋಟ್ರೇಶಪ್ಪ, ಖಜಾಂಜಿ ಎಸ್.ಆರ್. ವೀರಭದ್ರಯ್ಯ, ಪ್ರಭು ಅಣ್ಣಿಗೇರಿ ಇದ್ದರು. ವಿದ್ಯಾರ್ಥಿಗಳು ಕಾನೂನು ಪದವಿ ಪಡೆದ ಸಂಭ್ರಮದಲ್ಲಿ ತಮ್ಮ ಸಂತಸ ಹಂಚಿಕೊಂಡರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+