Arujun Deva: ಹಿರಿಯ ಪತ್ರಕರ್ತ ಅರ್ಜುನ್ ದೇವ ನಿಧನ: ಗಣ್ಯರ ಸಂತಾಪ
ಬೆಂಗಳೂರು, ಏಪ್ರಿಲ್ 24: ವಿವಿಧ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಹಿರಿಯ ಪತ್ರಕರ್ತರು ಆದ ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಅರ್ಜುನ್ ದೇವ ಅವರು ಇಂದು (ಏಪ್ರಿಲ್ 24) ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಅಗಲಿಕೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದರು.
ಅರ್ಜುನ್ ದೇವ (92) ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಬುಧವಾರ ನಿಧರಾದರು. ಮೃತರಿಗೆ ಮಕ್ಕಳು, ಅಪಾರ ಬಂಧುಗಳು ಇದ್ದಾರೆ.

ಮೃತರು ಕರ್ನಾಟಕ ಮಾಧ್ಯಮ ಅಕಾಡೆಮಿ (ಈ ಹಿಂದೆ ಪತ್ರಕರ್ತರ ಅಕಾಡೆಮಿ) ಯಲ್ಲಿ ಅಧ್ಯಕ್ಷರಾಗಿ ಶ್ರಮಿಸಿದವರು. ತಾಯಿನಾಡು, ಪ್ರಜಾವಾಣಿ, ಸಂಯುಕ್ತ ಕರ್ನಾಟಕದಂತಹ ಖ್ಯಾತ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಹಿರಿಯ ಪತ್ರಕರ್ತರು ಅವರಾಗಿದ್ದರು. ಸೂರ್ಯೋದಯ ಪತ್ರಿಕೆಯಲ್ಲಿ ಸಂಪಾದಕರಾಗಿದ್ದರು.
ಇಂದು ಸಂಜೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ
ಇಂದು ಸಂಜೆ ಮೃತರ ಹುಟ್ಟುರಾದ ಕೋಲಾರದ ಚೌಡದೇವನಹಳ್ಳಿಯಲ್ಲಿ ಅಂತಿಮ ವಿಧಿವಿಧಾನಗಳು, ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ. ಇವರಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮಾಜಿ ಸಿಎಂ ಸಂತಾಪ
ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರಾದ ಎನ್ ಅರ್ಜುನ್ ದೇವ ಅವರು ನಿಧನರಾಗಿರುವ ಸುದ್ದಿ ತಿಳಿದು ಮನಸಿಗೆ ನೋವಾಯಿತು. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅರ್ಜುನ್ ದೇವ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಬಸವರಾಜ ಬೊಮ್ಮಾಯಿ ಪ್ರಾರ್ಥಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ.
ಮೃತರಿಗೆ KUWJ ಸಂತಾಪ
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅವರ ಸೇವೆ ಅನನ್ಯವಾದದ್ದು. ಪತ್ರಕರ್ತ ಸಂಘಟನೆಯಲ್ಲಿ ಅವರಿಗೆ ಇದ್ದ ಬದ್ಧತೆ, ಸಮಾಜ ಮುಖಿ ಪರಿ ನಿಜಕ್ಕೂ ಶ್ಲಾಘನೀಯ. ಅವರು ಹೆಚ್ಚು ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿದ್ದರು. ಅವರ ನಿಧನ ಸುದ್ದಿ ತಿಳಿದು ಆಘಾತವಾಗಿ. ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಸಂತಾಪ ಸೂಚಿಸಿದರು.












Click it and Unblock the Notifications