ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ನಿಧನ; ಸಿಎಂ ಸಿದ್ದರಾಮಯ್ಯ ಕಂಬನಿ
ಕನ್ನಡ ಮಾಧ್ಯಮ ಲೋಕದ ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಹಿರಿಯ ಪತ್ರಕರ್ತರಾಗಿದ್ದ ಅವರು ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. ಕನ್ನಡ ಡಿಜಿಟಲ್ ಮಾಧ್ಯಮಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. 72 ವರ್ಷದ ಹಿರಿಯ ಪತ್ರಕರ್ತ ಹೃದಯಾಘಾತದಿಂದ ನಿಧನರಾಗಿದ್ದಾರೆ. ಒನ್ ಇಂಡಿಯಾ ಕನ್ನಡದ ಮೊದಲ ಸಂಪಾದಕರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.
ಕನ್ನಡ ಪತ್ರಿಕೋದ್ಯಮದಲ್ಲಿ ಸುಮಾರು 39 ವರ್ಷಗಳಿಗೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ದಿಗ್ವಿಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆರೋಗ್ಯ ಕ್ಷೀಣಿಸಿದ್ದರಿಂದ ಅವರು ಕೋಮಾಗೆ ಜಾರಿದ್ದರು. ಸತತವಾಗಿ ಚಿಕಿತ್ಸೆ ನೀಡಿದ್ದರೂ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ, ಸೋಮವಾರ ಅವರಿಗೆ ಹೃದಯಾಘಾತವಾಗಿದ್ದು ನಿಧನರಾಗಿದ್ದಾರೆ.

ಎಸ್.ಕೆ. ಶ್ಯಾಮಸುಂದರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, "ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘಕಾಲ ಪತ್ರಕರ್ತರಾಗಿ ದುಡಿದವರು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ." ಎಂದಿದ್ದಾರೆ.












Click it and Unblock the Notifications