ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೂಲಭೂತ ಹಕ್ಕುಗಳಿಂದಾಗಿ ದಲಿತರ ಹಕ್ಕು ರಕ್ಷಣೆ: ಜಸ್ಟೀಸ್ ಗೋಪಾಲಗೌಡ

|
Google Oneindia Kannada News

ಬೆಂಗಳೂರು, ಜೂ.10: ಕಾನೂನು ಮತ್ತು ಸಮಾಜ ಸೇವೆಗಾಗಿ ಕರ್ನಾಟಕದ ಹೈಕೋರ್ಟ್ ಹಿರಿಯ ವಕೀಲ ಶಂಕರಪ್ಪ ಅವರಿಗೆ 'ಭಾರತದ ಹೆಮ್ಮೆಯ ಪುತ್ರ' ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇಂಡಿಯನ್ ಕಾನ್ಪರೆನ್ಸ್ ಆಫ್ ಇಂಟಲೆಕ್ಷ್ಯುಲ್ ಸಂಸ್ಥೆ ಆಯೋಜಿಸಿದ್ದ "ಮೂಲಭೂತ ಹಕ್ಕುಗಳು - ನ್ಯಾಯಾಂಗದ ಪಾತ್ರ" ಕುರಿತ ಸಮ್ಮೇಳನದಲ್ಲಿ ಶಂಕರಪ್ಪ ಅವರಿಗೆ ಪ್ರಶಸ್ತಿ ನಿಡಲಾಯಿತು. ಆಂಧ್ರ ಪ್ರದೇಶದ ರಾಜ್ಯಪಾಲ ಬಿಸ್ವ ಭೂಷಣ್ ಹರಿಚಂದನ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಆಂಧ್ರ ಪ್ರದೇಶ ರಾಜ್ಯಪಾಲ ಬಿಸ್ವ ಭೂಷಣ್ ಹರಿಚಂದನ್, ಸಂವಿಧಾನದ ನೀಡಿರುವ ಮೂಲಭೂತ ಹಕ್ಕುಗಳು ಸೂಕ್ತ ರೀತಿಯಲ್ಲಿ ಬಳಕೆಯಾಗಬೇಕು. ಯಾವುದೇ ಕಾರಣಕ್ಕೂ ಈ ವಲಯದಲ್ಲಿ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಾರದು ಎಂದರು.

Senior lawyer Sankarappa honored with Proud Son of India award

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಕಾನೂನು ರಕ್ಷಣೆ ಮಾಡಬೇಕು ಮತ್ತು ಜೊತೆಯಲ್ಲಿ ವಾಕ್ ಸ್ವಾತಂತ್ರ್ಯವನ್ನೂ ಸಹ ಸಂರಕ್ಷಿಸಬೇಕು. ಸಂವಿಧಾನ ನಮಗೆ ನೀಡಿರುವ ನೀಡಿರುವ ವಾಕ್ ಸ್ವಾತಂತ್ರ್ಯ ವಿಚಾರದಲ್ಲಿ ದೇಶದ ಸಾರ್ವಭೌಮತೆ, ಏಕತೆಗೆ ಧಕ್ಕೆ ಬಂದಾಗ ಮಾತ್ರ ನಿರ್ಬಂಧಗಳನ್ನು ವಿಧಿಸಬೇಕು ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟರು.

"ಕಾನೂನು ಸದಾ ಸಮಾಜದ ಪರವಾಗಿರಬೇಕು. ಕಾನೂನಿಗೆ ಮಾನವೀಯ ಮುಖವಿರಬೇಕು. ಮೊದಲು ದೇಶ, ನಂತರ ನಾಗರೀಕರು ಎನ್ನುವ ತತ್ವ ಪರಿಪಾಲನೆಯಾಗಬೇಕು. ಇಂತಹ ವಾತಾವರಣವಿದ್ದರೆ ಸೌಹಾರ್ದತೆ ಮನೆ ಮಾಡುತ್ತದೆ. ಕೇಶವಾನಂದ ಭಾರತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಅತ್ಯಂತ ಮಹತ್ವದ್ದಾಗಿದ್ದು, ಸಂವಿಧಾನದ ಮೂಲ ರಚನೆ, ಸ್ವರೂಪಕ್ಕೆ ಧಕ್ಕೆಯಾಗದಂತೆ ಸಂವಿಧಾನಕ್ಕೆ ತಿದ್ದುಪಡಿಗಳನ್ನು ಮಾಡಬಹುದು ಎಂದು ಹೇಳಿದೆ. ಈ ತೀರ್ಪು ಎಲ್ಲಾ ಕಾಲಕ್ಕೂ ಸಲ್ಲುವಂತಹದ್ದು," ಎಂದು ಬಿಸ್ವ ಭೂಷಣ್ ಹರಿಚಂದನ್ ಅಭಿಪ್ರಾಯಪಟ್ಟರು.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಮಾತನಾಡಿ, "ಡಾ. ಬಿ.ಆರ್. ಅಂಬೇಡ್ಕರ್ ಅವರು ಮೂಲಭೂತ ಹಕ್ಕುಗಳ ಬಗ್ಗೆ ವ್ಯಾಪಕ ಪರಿಶೀಲನೆ ನಡೆಸಿದ ನಂತರ ಇದಕ್ಕೆ ಸ್ಪಷ್ಟ ಸ್ವರೂಪ ನೀಡಿದರು. ಮೂಲಭೂತ ಹಕ್ಕುಗಳಿಂದಾಗಿ ಶೇ 50 ರಷ್ಟಿರುವ ಮಹಿಳೆಯರು, ಎಸ್.ಸಿ, ಎಸ್.ಟಿ ಸಮುದಾಯದ ಹಕ್ಕುಗಳ ರಕ್ಷಣೆಯಾಗುತ್ತಿದೆ," ಎಂದರು.

ಮೂಲಭೂತ ಹಕ್ಕುಗಳ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದು, ತನ್ನ ಪಾತ್ರವನ್ನು ಮಹತ್ವದಿಂದ ನಿರ್ವಹಿಸುತ್ತಿದೆ. ಶಾಸಕಾಂಗ ಸಹ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಸದೀಯ ಪಟುಗಳು ಇಂತಹ ವಿಚಾರದಲ್ಲಿ ಸುಮ್ಮನೆ ಕುಳಿತಿಲ್ಲ. ಎಲ್ಲರ ಪರಿಶ್ರಮದಿಂದ ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿವರಿಗೆ ವಿವಿಧ ವಲಯಗಳಲ್ಲಿ ಮೀಸಲಾತಿ ಮತ್ತಿತರ ಸೌಲಭ್ಯಗಳು ದೊರೆಯುತ್ತಿವೆ ಎಂದು ಹೇಳಿದರು.

ಸಮ್ಮೇಳನದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ನಟರಾಜನ್, ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್, ನ್ಯಾಯಮೂರ್ತಿ ಕೆ. ಭಕ್ತ ವತ್ಸಲ, ನ್ಯಾಯಮೂರ್ತಿ ಸಂಜೀವ್ ಕುಮಾರ್ ಪಾಣಿ ಗ್ರಾಹಿ, ಆದಾಯ ತೆರಿಗೆ ಇಲಾಖೆಯ ಮುಖ್ಯ ಆಯುಕ್ತ ಜಿ.ಆರ್. ರೆಡ್ಡಿ, ಏರೋನಾಟಿಕಲ್ ಸಿಸ್ಟಮ್ಸ್ ನ ಪ್ರಧಾನ ನಿರ್ದೇಶಕರಾದ ಕ್ಷಿಪಣಿ ಮಹಿಳೆ ಎಂದೇ ಖ್ಯಾತರಾದ ತೆಸ್ಸಾ ಥಾಮಸ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಮತ್ತಿತರ ಗಣ್ಯರು ಸಮ್ಮೇಳನದಲ್ಲಿ ಪಾಲ್ಗೊಂಡರು.

English summary
Karnataka High Court Senior lawyer Sankarappa honored with Proud Son of India award. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X