ಹಿರಿಯ ಆರೆಸ್ಸೆಸ್ ಪ್ರಚಾರಕ ಮೈಚ ಜಯದೇವ್ ನಿಧನ
ಹಿರಿಯ ಆರೆಸ್ಸೆಸ್ ಪ್ರಚಾರಕ್ ಮೈಚ ಜಯದೇವ್ (1934-2017) ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ಮಧಾಹ್ನ 12.30ರ ನಂತರ ಚಾಮರಾಜಪೇಟೆಯ ಕೇಶವ ಕೃಪಾದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ
ಬೆಂಗಳೂರು, ಫೆಬ್ರವರಿ 20: ಹಿರಿಯ ಆರೆಸ್ಸೆಸ್ ಪ್ರಚಾರಕ್ ಎಂಸಿ ಜಯದೇವ್ (83) ಸೋಮವಾರ ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳಿಂದ ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಸೋಮವಾರ ಬೆಳಗ್ಗೆ 9ಕ್ಕೆ ಸಾಗರ್ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ.
ಜಯದೇವ್ ಅವರ ಪಾರ್ಥಿವ ಶರೀರವನ್ನು ಸೋಮವಾರ (ಫೆಬ್ರವರಿ 20) ರಾತ್ರಿ 7.30ರವರೆಗೆ ಅಂತಿಮ ದರ್ಶನಕ್ಕಾಗಿ ಕೇಶವಕೃಪಾದಲ್ಲಿ ಇಡಲಾಗುವುದು. ಫೆ.21ರಂದು ಮಧ್ಯಾಹ್ನ ಮೈಸೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಜಯದೇವ್ ಅವರು ಮೈಸೂರಿನಲ್ಲಿ ಫೆಬ್ರವರಿ 9, 1934ರಲ್ಲಿ ಜನಿಸಿದ್ದರು. ಅವರ ತಂದೆ ಹೆಸರು ಚನ್ನಬಸಪ್ಪ.[ಕಮ್ಯೂನಿಸ್ಟರ ರಕ್ತದಾಹ: ಕೇರಳದಲ್ಲಿ ಸಂಘ ಪರಿವಾರದ 'ತಲೆ' ಗಳಿಗೆ ಬೆಲೆಯಿಲ್ಲ ಕಾಂತಾ!]

ವಾಣಿಜ್ಯ ಪದವೀಧರರಾಗಿದ್ದ ಅವರು, ನಂತರ ಕಾನೂನು ವ್ಯಾಸಂಗ ಮಾಡಿದ್ದರು. ಕಾಲೇಜು ದಿನಗಳಲ್ಲಿ ಅವರು ಆರ್ ಎಸ್ ಎಸ್ ನ ಸ್ವಯಂಸೇವಕರಾದರು. ಆ ನಂತರ ಸಂಘಟನೆಯ ಸಕ್ರಿಯ ಸದಸ್ಯರಾದರು. ಬೆಂಗಳೂರಿನ ಹಿಂದೂಸ್ತಾನ್ ಗ್ಯಾರೇಜ್ ಮೋಟಾರ್ಸ್ ನಲ್ಲಿ ಕೆಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದರು.
1960ರಲ್ಲಿ ಜಯದೇವ್ ಅವರು ಆರ್ ಎಸ್ ಎಸ್ ನ ಬೆಂಗಳೂರು ಮಹಾನಗರ್ ಕಾರ್ಯನಿರ್ವಾಹ್ ಆದರು. 1975ರವರೆಗೆ ಈ ಜವಾಬ್ದಾರು ನಿರ್ವಹಿಸಿದರು. ತುರ್ತು ಪರಿಸ್ಥಿತಿ ವೇಳೆಯಲ್ಲಿ ಅವರು ಎರಡು ವರ್ಷಗಳ ಕಾಲ ಜೈಲುವಾಸ ಅನುಭವಿಸಿದರು. ರಾಷ್ಟ್ರೋತ್ಥಾನ ಪರಿಷತ್ ನ ಸ್ಥಾಪಕರ ಪೈಕಿ ಅವರೂ ಒಬ್ಬರಾಗಿದ್ದರು.[ತುಮಕೂರಿನಲ್ಲಿ ಆರ್ ಎಸ್ ಎಸ್ ಪಥ ಸಂಚಲನ ತಡೆದ ಪೊಲೀಸರು ]
1961ರಿಂದ 1995ರವರೆಗೆ ರಾಷ್ಟ್ರೋತ್ಥಾನ ಪರಿಷತ್ ನ ಪ್ರಧಾನ ನಿರ್ವಾಹಕರಾಗಿ ಕಾರ್ಯ ನಿರ್ವಹಿಸಿದರು. 2002ರಲ್ಲಿ ಸಹ್ ಕ್ಷೇತ್ರಿಯ್ ಪ್ರಚಾರಕ್, 2004ರಲ್ಲಿ ಕ್ಷೇತ್ರಿಯ್ ಪ್ರಚಾರಕ್, 2012ರಲ್ಲಿ ಅಖಿಲ್ ಭಾರತೀಯ ಕಾರ್ಯಕಾರಿಣಿ ಸದಸ್ಯ, 2015ರ ಮಾರ್ಚ್ ನಿಂದ ಹಿರಿಯ ಪ್ರಚಾರಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಆರ್ ಎಸ್ ಎಸ್ ಸರಸಂಘಚಾಲಕ್ ಮೋಹನ್ ಭಾಗ್ವತ್, ದತ್ತಾತ್ರೇಯ ಹೊಸಬಾಳೆ, ಮಂಗೇಶ್ ಭಿಂಡೆ, ಸಿಆರ್ ಮುಕುಂದ ಸೇರಿದಂತೆ ಸಂಘಟನೆಯ ಹಲವು ಮುಖಂಡರು ಜಯದೇವ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ











Click it and Unblock the Notifications