ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚನೆ: ಸಿಎಂ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 08: ಬೆಂಗಳೂರು ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನಿಸಲಾಗಿದೆ. ಮುಂದಿನ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ, ಕಾಯ್ದೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಗುರುವಾರ ಬೆಂಗಳೂರಿನಲ್ಲಿ ಕೇಂದ್ರದ ಭೂ ಸಂಪರ್ಕ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಸಿ, ಪ್ರತ್ಯೇಕ ಪ್ರಾಧಿಕಾರ ರಚನೆ ಬಗ್ಗೆ ಅವರು ತಿಳಿಸಿದರು.

ಬೆಂಗಳೂರು ನಮ್ಮದು, ಕನ್ನಡಿಗರಿಂದ #Leavebengaluru ಟ್ವಿಟ್ಟರ್ ಅಭಿಯಾನ ಆರಂಭಬೆಂಗಳೂರು ನಮ್ಮದು, ಕನ್ನಡಿಗರಿಂದ #Leavebengaluru ಟ್ವಿಟ್ಟರ್ ಅಭಿಯಾನ ಆರಂಭ

ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಬಿಬಿಎಂಪಿ, ಬಿಡಿಎ, ಬಿಎಂಆರ್ ಡಿಎ, ಲೋಕೋಪಯೋಗಿ ಇಲಾಖೆ ಗಳಿಂದ ಹಲವು ಕಾಮಗಾರಿಗಳು ನಡೆಯುತ್ತಿವೆ. ಈ ಬಗ್ಗೆ ಸಮಗ್ರ ಮಾಸ್ಟರ್ ಪ್ಲಾನ್ ರೂಪಿಸಿದರೆ ಬಹಳಷ್ಟು ಸಮಸ್ಯೆಗಳು ನಿವಾರಣೆಯಾಗುತ್ತವೆ. ಈ ಎಲ್ಲ ಸಂಸ್ಥೆಗಳ ಜೊತೆಗೆ ರೈಲ್ವೆ , ನಮ್ಮ ಮೆಟ್ರೋ ಅನ್ನು ಒಳಗೊಂಡಂತೆ ಬೆಂಗಳೂರು ಮತ್ತು ಬೆಂಗಳೂರು ಸುತ್ತಮುತ್ತಲಿನ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದರು.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ಇಡೀ ರಾಷ್ಟ್ರದ ರಸ್ತೆ ಸಾರಿಗೆ ವ್ಯವಸ್ಥೆ ಬಗ್ಗೆ 'ಮಂಥನ' ಸಮಾವೇಶವನ್ನು 3 ದಿನಗಳ ಕಾಲ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬೆಂಗಳೂರಿನ ರಸ್ತೆ ಹಾಗೂ ಸಂಚಾರದಟ್ಟಣೆಯ ಬಗ್ಗೆ ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲಾಗಿದ್ದು, ಕೇಂದ್ರದ ಸಹಯೋಗ ಮತ್ತು ಸಹಕಾರವನ್ನು ಕೋರಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳು ಬೆಂಗಳೂರಿನ ಒಳಗೆ ಮತ್ತು ಹೊರಗೆ ಹಾದುಹೋಗುತ್ತವೆ. ಸಂಚಾರ ದಟ್ಟಣೆಯ ನಿವಾರಣೆಗೆ ರಸ್ತೆ ನಿರ್ಮಾಣಗಳು ಬಲು ಮುಖ್ಯವಾಗಿದೆ. ಹಲವು ವಿಚಾರಗಳನ್ನು ಈ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.

ನೂತನ ತಂತ್ರಜ್ಞಾನದಡಿ ಯೋಜನೆ ರೂಪಿಸಲು ತೀರ್ಮಾನ

ನೂತನ ತಂತ್ರಜ್ಞಾನದಡಿ ಯೋಜನೆ ರೂಪಿಸಲು ತೀರ್ಮಾನ

ಮೆಟ್ರೋ, ಫ್ಲೈ ಓವರ್ ಹಾಗೂ ರಸ್ತೆಗೆ ಬಳಕೆಯಾಗುವಂತಹ ಬಹುಪಯೋಗಿ ಪಿಲ್ಲರ್ ನಿರ್ಮಿಸುವ ತಂತ್ರಜ್ಞಾನವನ್ನು ಬಳಸಿ ಬೈಯಪ್ಪನಹಳ್ಳಿಯಲ್ಲಿ ರೈಲು ನಿರ್ಮಾಣ ಯೋಜನೆ ರೂಪಿಸಲಾಗಿದೆ. ಒಂದೇ ಪಿಲ್ಲರ್ ನ್ನು ಬಳಸಿ ಮೂರು ಅಂತಸ್ತುಗಳಲ್ಲಿ ಸಾರಿಗೆ ವ್ಯವಸ್ಥೆಯನ್ನು ನಿರ್ಮಿಸುವ ಈ ಹೊಸ ತಂತ್ರಜ್ಞಾನವನ್ನು ಬಳಸಿಕೊಂಡರೆ ಭೂ ಸ್ವಾಧೀನದ ಪ್ರಮಾಣ ಕಡಿಮೆಯಾಗುವುದು. ಈ ಬಗ್ಗೆ ಅಂತಾರಾಷ್ಟ್ರೀಯ ತಜ್ಞರೊಂದಿಗೆ ಚರ್ಚಿಸಿ ಯೋಜನೆ ರೂಪಿಸಲು ತೀರ್ಮಾನಿಸಲಾಗಿದೆ.


ರಾಷ್ಟ್ರೀಯ ಹೆದ್ದಾರಿಗಳು ಸಾಗುವಲ್ಲಿ ಇರುವ ಅಂತರ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ಹೆದ್ದಾರಿಗಳ ಸಂಪರ್ಕಕ್ಕೆ ಇರುವ ಖಾಲಿ ಸ್ಥಳವನ್ನು ತುಂಬಿಕೊಡಲಾಗುವುದು. ವರ್ತುಲ ರಸ್ತೆಯ ಮಧ್ಯದಲ್ಲಿ ಸಣ್ಣ ರಿಂಗ್ ರಸ್ತೆಯನ್ನು ಮಾಡುವ ಚಿಂತನೆಯನ್ನು ಮಾಡಿದ್ದೇವೆ. ವಿನೂತವಾಗಿ ಹೊಸ ತಂತ್ರಜ್ಞಾನ ಉಪಯೋಗ ಮಾಡಿಕೊಂಡು ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಅತ್ಯಂತ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು, ಪೂಣಾ-ಬೆಂಗಳೂರು ಹೆದ್ದಾರಿ-4ರಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಕೂಡಲೇ ಸರಿಪಡಿಸಲು ಸಭೆಯಲ್ಲಿದ್ದ ರಾಷ್ಟ್ರೀಯ ಹೆದ್ದಾರಿ ಸಚಿವಾಲಯ ಕಾರ್ಯದರ್ಶಿಗಳಿಗೆ ಸಚಿವ ನಿತಿನ್ ಗಡ್ಕರಿ ಅವರು ಸೂಚನೆ ನೀಡಿದ್ದಾರೆ ಎಂದರು.

ಸಮಸ್ಯೆ ಬಗೆಹರಿಸಿ: ನಮಗೂ ಬೆಂಗಳೂರು ಬಿಡುವ ಮನಸ್ಸಿಲ್ಲ ಎಂದ ಐಟಿ ಕಂಪನಿಸಮಸ್ಯೆ ಬಗೆಹರಿಸಿ: ನಮಗೂ ಬೆಂಗಳೂರು ಬಿಡುವ ಮನಸ್ಸಿಲ್ಲ ಎಂದ ಐಟಿ ಕಂಪನಿ

ಬೆಂಗಳೂರು-ಮೈಸೂರು ರಸ್ತೆ: ಒಳಚರಂಡಿ ವ್ಯವಸ್ಥೆಗೆ ಹೊಸ ಯೋಜನೆ

ಬೆಂಗಳೂರು-ಮೈಸೂರು ರಸ್ತೆ: ಒಳಚರಂಡಿ ವ್ಯವಸ್ಥೆಗೆ ಹೊಸ ಯೋಜನೆ

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ ಕಾಮಗಾರಿ ಇನ್ನಷ್ಟು ವೇಗವಾಗಿ ಪೂರ್ಣಗೊಳ್ಳಬೇಕು. ಅಲ್ಲಿನ ಮಳೆ ನೀರು ಚರಂಡಿ ವ್ಯವಸ್ಥೆಗಳ ತೊಡಕುಗಳ ಬಗ್ಗೆ ಇತ್ತೀಚೆಗೆ ಗಮನಕ್ಕೆ ಬಂದಿದೆ. ಎಲ್ಲೆಲ್ಲಿ ನೀರು ನಿಂತಿದೆ ಹಾಗೂ ಎಲ್ಲೆಲ್ಲಿ ನೀರು ನಿಲ್ಲಬಹುದೆಂದು ತಿಳಿದುಕೊಂಡು ಒಳಚರಂಡಿ ವ್ಯವಸ್ಥೆ ನಿರ್ಮಾಣಕ್ಕೆ ಹೊಸ ಯೋಜನೆ ತಯಾರಿಸಲು ಕೇಂದ್ರ ಸಚಿವರು ಸೂಚಿಸಿದ್ದಾರೆ. ಹೊಸ ಯೋಜನೆಗಳು ತಾಂತ್ರಿಕ ಯೋಜನೆಗಳಾಗಿವೆ ಎಂದು ಗಡ್ಕರಿ ತಿಳಿಸಿದ್ದಾರೆ ಎಂದರು.

ರಾಷ್ಟ್ರೀಯ ಹೆದ್ದಾರಿಗಳ ಬಗ್ಗೆ ಉತ್ತಮ ಚರ್ಚೆ

ರಾಷ್ಟ್ರೀಯ ಹೆದ್ದಾರಿಗಳ ಬಗ್ಗೆ ಉತ್ತಮ ಚರ್ಚೆ

ಸ್ಯಾಟ್‌ಲೈಟ್‌ ಟೌನ್ ರಿಂಗ್ ರಸ್ತೆ (ಎಸ್‌ಟಿಆರ್ಆರ್) ಪೂನಾ - ಬೆಂಗಳೂರು ಹೆದ್ದಾರಿಯಿಂದ ಚನ್ನೈ ರಾಷ್ಟ್ರೀಯ ಹೆದ್ದಾರಿ ಬಳಿ ತಮಿಳುನಾಡು ಮೂಲಕ ಹಾದುಹೋಗಿ ವಾಪಸ್ಸು ಬರುತ್ತದೆ. ಈ ಮಧ್ಯೆ 40-50 ಕಿ.ಮೀ. ನೇರವಾಗಿ ಸಂಪರ್ಕ ಮಾಡಲು ಸಾಧ್ಯವಿದೆ. ಹೊಸದಾಗಿ ಈ ಅಂಶವನ್ನೂ ಅಳವಡಿಸಿಕೊಳ್ಳಬೇಕೆಂಬ ವಿಚಾರವನ್ನು ತಿಳಿಸಲಾಗಿದೆ. ಅದನ್ನು ಪರಿಶೀಲಿಸುವುದಾಗಿ ಕೇಂದ್ರ ಸಚಿವರು ಹೇಳಿದ್ದಾರೆ.

ಕೇಂದ್ರ ರಸ್ತೆ ನಿಧಿಯಡಿ ನಿಯಮಿತ ಕಾಮಗಾರಿಗಳು, ಅದಕ್ಕೆ ಪೂರಕವಾದ ಅನುದಾನ, ಹೆಚ್ಚಿನ ಹೆದ್ದಾರಿಗಳನ್ನು ಘೋಷಿಸುವುದರ ಬಗ್ಗೆ ಈಗಾಗಲೇ ಪತ್ರ ರವಾನಿಸಲಾಗಿದೆ. ಸಚಿವರು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಈ ಬಗ್ಗೆ ಮತ್ತೊಮ್ಮೆ ಸಭೆ ನಡೆಸಿ ಕೂಡಲೇ ಏನು ಮಾಡಲು ಸಾಧ್ಯ, ಎಲ್ಲಾ ಏಜೆನ್ಸಿಗಳು, ಸರ್ಕಾರದ ಪ್ರಾಧಿಕಾರಗಳು ಹೇಗೆ ಕೆಲಸ ಮಾಡಲು ಸಾಧ್ಯ? ಎಂಬುದರ ಬಗ್ಗೆ ಸ್ಥೂಲವಾಗಿ ಚರ್ಚಿಸಲಾಗುವುದು ಎಂದು ನಿತಿನ್ ಗಡ್ಕರಿ ಅವರು ಭರವಸೆ ನೀಡಿದ್ದಾರೆ. ಚರ್ಚೆ ಬಹಳಷ್ಟು ಉತ್ತಮ ಪ್ರೋತ್ಸಾಹದಾಯಕವಾಗಿದೆ. ಹಾಲಿ ಅನೇಕ ಸಮಸ್ಯೆಗಳಿಗೆ ಪರಿಹಾರ ರೂಪದಲ್ಲಿ ಚರ್ಚೆ ನಡೆದಿದೆ ಎಂದು ಬೊಮ್ಮಾಯಿ ತಿಳಿಸಿದರು.

ಅವಳಿ ನಗರದ ಬೈಪಾಸ್ ಟೆಂಡರ್ ಖಾಸಗಿಗೆ

ಅವಳಿ ನಗರದ ಬೈಪಾಸ್ ಟೆಂಡರ್ ಖಾಸಗಿಗೆ

ಕಳೆದ ಬಾರಿ ಹುಬ್ಬಳ್ಳಿ-ಧಾರವಾಡದ ಬೈಪಾಸ್ ಖಾಸಗಿಯವರಿಗೆ ಹಸ್ತಾಂತರವಾಗಿ ಟೆಂಡರ್ ಆಗಿದೆ. ವಿವಿಧ ಕಾಮಗಾರಿ, ನಿರ್ವಹಣೆ ಇನ್ನೇನು 2-3 ತಿಂಗಳಲ್ಲಿ ಪ್ರಾರಂಭವಾಗುತ್ತದೆ. ಬೆಂಗಳೂರು- ಮೈಸೂರು ಹೆದ್ದಾರಿಯನ್ನು ಈಗಿರುವ ಯೋಜನೆಯಂತೆ ನಿರ್ಮಿಸಲಾಗುವುದು. ಗ್ರಾಮಸ್ಥರ ಕೋರಿಕೆಯ ಮೇಲೆ ಪ್ರವೇಶ ಮತ್ತು ನಿರ್ಗಮನ ಪಾಯಿಂಟ್ಗಳನ್ನು ಪ್ರಾಧಿಕಾರದವರು ಮಾಡಿಕೊಡಲಿದ್ದಾರೆ ಎಂದರು.

ಮುಖ್ಯವಾಗಿ ರಾಜ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳು, ಶಿರಾಡಿ ಘಾಟ್ ನಿಂದ ಹಿಡಿದು ಪ್ರಮುಖ ಹೆದ್ದಾರಿಗಳ ಬಗ್ಗೆ ಚರ್ಚೆ ಆಗಿದೆ. ಬೆಂಗಳೂರಿನ ಬಗ್ಗೆ ಪ್ರತ್ಯೇಕವಾಗಿ ಚರ್ಚೆಯಾಗಲಿದೆ. ಇಂದು ಮುಖ್ಯವಾಗಿ ಬೆಂಗಳೂರಿನ ಸಂಚಾರ ದಟ್ಟಣೆಯ ಸುಧಾರಣೆಯ ಬಗ್ಗೆ ಚರ್ಚೆಯಾಗಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

English summary
Will form separate Authority to manage traffic in Bengaluru, said Chief Minister Basavaraj Bommai at the Manthana conference where Union minister Nitin Gadkari is participating.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X