'ವೀರಶೈವ-ಲಿಂಗಾಯತ' ಧರ್ಮಕ್ಕಾಗಿಯೇ ಹೋರಾಟ: 'ಮಹಾಸಭೆ' ಘೋಷಣೆ
ವೀರಶೈವ-ಲಿಂಗಾಯತ ಧರ್ಮಕ್ಕೇ ಪ್ರತ್ಯೇಕ ಧರ್ಮದ ಸ್ಥಾನಮಾನ ಕೇಳಲು ವೀರಶೈವ ಮಹಾಸಭಾ ಪದಾಧಿಕಾರಿಗಳ ಸಭೆ ನಿರ್ಧಾರ. ವೀರಶೈವರ ವಿರುದ್ಧ ತಿರುಗಿಬಿದ್ದಿರುವ ಲಿಂಗಾಯತ ಪಂಗಡದ ಮುಖಂಡರ ಜತೆಗೆ ಸೌಹಾರ್ದಯುತ ಮಾತುಕತೆ ನಡೆಸಲು ನಿರ್ಧಾರ.
ಬೆಂಗಳೂರು, ಆಗಸ್ಟ್ 2: ನಿರೀಕ್ಷೆಯಂತೆ, ವೀರಶೈವ- ಲಿಂಗಾಯತರು ಎಂಬ ಹೆಸರಿನಲ್ಲೇ ಪ್ರತ್ಯೇಕ ಧರ್ಮದ ಸ್ಥಾನಮಾನಕ್ಕಾಗಿ ಹೋರಾಟ ನಡೆಸಲು ಅಖಿಲ ಭಾರತ ವೀರಶೈವ ಮಹಾಸಭೆ ನಿರ್ಧರಿಸಿದೆ.
ಬೆಂಗಳೂರಿನ ಮಹಾಸಭೆಯ ಕೇಂದ್ರ ಕಚೇರಿಯಲ್ಲಿ ಬುಧವಾರ (ಜುಲೈ 2) ನಡೆದ ಮಹಾಸಭೆಯ ಪದಾಧಿಕಾರಿಗಳ ಸಭೆಯಲ್ಲಿ, ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಮಾತನಾಡಿದ ಪ್ರಮುಖರು, 2013ರ ಜುಲೈ 7ರಂದು ಅಂದಿನ ಯುಪಿಎ ಸರ್ಕಾರದ ಗೃಹ ಸಚಿವರಾಗಿಗ್ದ ಸುಶೀಲ್ ಕುಮಾರ್ ಶಿಂಧೆ ಅವರನ್ನು ಭೇಟಿ ಮಾಡಿದ್ದ ವೀರಶೈವ ಮಹಾಸಭೆಯ ನಿಯೋಗ, ವೀರಶೈವ- ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿತ್ತು.
ಆನಂತರ, 2013ರ ಜುಲೈ 25ರಂದು ಶಾಸಕರಿಗೆ, ಸಂಸದರಿಗೆ ಸಲ್ಲಿಸಲಾದ ಅಭಿನಂದನಾ ಸಮಾರಂಭದಲ್ಲಿ ನಿರ್ಣಯವೊಂದನ್ನು ಅಂಗೀಕರಿಸಿ, ದೇಶದಲ್ಲಿರುವ 4 ಕೋಟಿ ವೀರಶೈವ- ಲಿಂಗಾಯತರನ್ನು ಒಗ್ಗೂಡಿಸುವ ದೃಷ್ಟಿಯಿಂದ ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ, ವೀರಶೈವ-ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಲಾಗಿತ್ತು ಎಂಬುದನ್ನು ನೆನಪಿಸಿಕೊಂಡರು.
ಹೀಗೆ, ಪ್ರತ್ಯೇಕ ಧರ್ಮಕ್ಕಾಗಿ ಹೋರಾಡಿದ ಜತೆಗಾರರನ್ನೇ ನಮ್ಮವರೇ ನಮ್ಮವರಲ್ಲ ಎನ್ನುವುದು ಸರಿಯಲ್ಲ. ವೀರಶೈವರು- ಲಿಂಗಾಯರು ಎಂಬ ವಿಚಾರವೇ ಸತ್ಯಕ್ಕೆ ದೂರವಾದದ್ದು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ, ಸಭೆಯಲ್ಲಿ ನಾಲ್ಕು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದ್ದು, ಅವು ಈ ಕೆಳಗಿನಂತಿವೆ.
ವೀರಶೈವ ಲಿಂಗಾಯತ ಧರ್ಮ ಹಿಂದೂ ಧರ್ಮದ ಭಾಗವಲ್ಲ. ಅಂಗೈಯ್ಯಲ್ಲಿ ಲಿಂಗವಿಡಿದು ಲಿಂಗಪೂಜೆ ಮಾಡುವ ವೀರಶೈವ ಲಿಂಗಾಯತರೆಲ್ಲರೂ ಒಂದೇ.
- ಗುರು, ವಿರಕ್ತ, ಮಠಾಧೀಪತಿಗಳ, ಸಮಾಜದ ಪ್ರತಿನಿಧಿಗಳ, ಮುಖಂಡರ, ವಿಷಯ ತಜ್ಞರ ಸಭೆಯನ್ನು ಸದ್ಯದಲ್ಲೇ ಏರ್ಪಡಿಸಿ ಸರ್ವಾನುಮತದ ನಿರ್ಣಯ ಕೈಗೊಳ್ಳಲು ನಿರ್ಧಾರ.
- ಒಂದು ಕಾಲದಲ್ಲಿ ಮಹಾಸಭೆಯ ಸದಸ್ಯರಾಗಿದ್ದು, ಈಗ ಅದರ ವಿರುದ್ಧ ತಿರುಗಿಬಿದ್ದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೌಹಾರ್ಧಯುತವಾಗಿ ಮಾತುಕತೆ ನಡೆಸಲು ನಿರ್ಧಾರ.
- ಎಲ್ಲರಲ್ಲಿಯೂ ಒಮ್ಮತದ ಅಭಿಪ್ರಾಯ ರೂಪುಗೊಳ್ಳುವವರೆಗೆ ಸಮಾಜದ ಘನತೆ, ಗೌರವಕ್ಕೆ ಧಕ್ಕೆ ಬಾರದಂತೆ ನಡೆದುಕೊಳ್ಳಲು ಹಾಗೂ ತಮ್ಮ ಅಭಿಪ್ರಾಯವನ್ನು ಮಹಾಸಭೆಗೆ ತಿಳಿಸಲು ಮನವಿ ಮಾಡಲು ನಿರ್ಧಾರ.
- ವೀರಶೈವ, ಲಿಂಗಾಯತ ಧರ್ಮದ ಬಗ್ಗೆ ಬಹಿರಂಗ ಹೇಳಿಕೆ ನೀಡವುದು, ಜನರಲ್ಲಿ ಗೊಂದರ ಮೂಡಿಸುವುದನ್ನು ನಿರ್ಬಂಧಿಸುವ ಬಗ್ಗೆ ನಿರ್ಧಾರ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications