ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಳೆ ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ

|
Google Oneindia Kannada News

ಬೆಂಗಳೂರು, ಜನವರಿ 16: ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವಾಗ ಗೊಂದಲ ಉಂಟಾಗಬಾರದು ಎಂದು ಗುಪ್ತವಾಗಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ಜನವರಿ 17ರಂದು ಈ ವಿಭಿನ್ನ ಚುನಾವಣೆ ನಡೆಯಲಿದೆ.ಈ ಹಿಂದೆ ವಿವಿಧ ಕಾರಣಗಳಿಗಾಗಿ ಎರಡು ಬಾರಿ ಮುಂದೂಡಿಕೆಯಾಗಿದ್ದ ಸ್ಥಾಯಿಸಮಿತಿ ಅಧ್ಯಕ್ಷರ ಚುನಾವಣೆಗೆ ನಾಳೆ ಮುಹೂರ್ತ ನಿಕ್ಕಿಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.

ಆಸ್ತಿ ತೆರಿಗೆ ಮೋಸ: ಇಸ್ರೋಗೆ ಮೊರೆ ಹೋದ ಬಿಬಿಎಂಪಿ ಆಸ್ತಿ ತೆರಿಗೆ ಮೋಸ: ಇಸ್ರೋಗೆ ಮೊರೆ ಹೋದ ಬಿಬಿಎಂಪಿ

ಮೇಯರ್ ಕೊಠಡಿಯಲ್ಲೇ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಗೆ ನಿರ್ಧರಿಸಲಾಗಿದ್ದು ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

Seperate election for every standing committee

ಸಭಾಂಗಣಕ್ಕೆ ಒಂದೊಂದೇ ಸ್ಥಾಯಿ ಸಮಿತಿಯ 11 ಸದಸ್ಯರನ್ನು ಆಹ್ವಾನಿಸಲಾಗುತ್ತದೆ, ಈ ವೇಳೆ ಮೇಯರ್, ಉಪಮೇಯರ್, ಚುನಾವಣಾ ಅಧಿಕಾರಿಗಳು ಮಾತ್ರ ಹಾಜರಿರುತ್ತಾರೆ.

ಈ ಹಿಂದೆ ಮೇಯರ್ ನೇತೃತ್ವದಲ್ಲಿ ಒಂದೊಂದೇ ಸ್ಥಾಯಿ ಸಮಿತಿ ಸದಸ್ಯರನ್ನು ಕೊಠಡಿಗೆ ಕರೆದು ಚುನಾವಣೆ ನಡೆಸುವ ಪದ್ಧತಿ ಇತ್ತು. ಕ್ರಮೇಣ ಕೌನ್ಸಿಲ್ ಸಭಾಂಗಣದಲ್ಲಿ ಚುನಾವಣೆ ನಡೆಸುವ ಪದ್ಧತಿ ಬೆಳೆಯಿತು.

ಬೆಂಗಳೂರು ಜನರ ಮೇಲೆ ಮತ್ತೊಂದು ಸೆಸ್ ಹೇರಲು ಬಿಬಿಎಂಪಿ ಸಿದ್ಧತೆ ಬೆಂಗಳೂರು ಜನರ ಮೇಲೆ ಮತ್ತೊಂದು ಸೆಸ್ ಹೇರಲು ಬಿಬಿಎಂಪಿ ಸಿದ್ಧತೆ

ನಾಳೆ ನಡೆಯಲಿರುವ ಚುನಾವಣೆಯಲ್ಲೂ ಇದೇ ಪರಿಸ್ಥಿತಿ ಮುಂದುವರೆದರೆ, ಮತ್ತೆ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಹಾಗೇನಾದರೂ ಆದಲ್ಲಿ ಬಿಬಿಎಂಪಿ ಸಧ್ಯದಲ್ಲೇ ಬಜೆಟ್ ಮಂಡನೆ ಮಾಡಬೇಕಿರುವುದರಿಂದ ತೆರಿಗೆ ಸ್ಥಾಯಿ ಸಮಿತಿಗಷ್ಟೇ ಚುನಾವಣೆ ನಡೆಸಿ ಉಳಿದ ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಮತ್ತೆ ಮುಂದೂಡಲಿದೆ.

English summary
BBMP mayor will hold seperate election for every standing committee. Secrete voting will be done Tomorrow.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X