• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರಲ್ಲಿ ಶೀಘ್ರ ಪ್ರತ್ಯೇಕ ಉಗ್ರ ನಿಗ್ರಹ ಪಡೆ ರಚನೆ

|

ಬೆಂಗಳೂರು, ಅಕ್ಟೋಬರ್ 16: ದೆಹಲಿ, ಮುಂಬೈ, ಚೆನ್ನೈ, ಹೈದರಾಬಾದ್ ನಗರಗಳ ಮಾದರಿಯಲ್ಲಿ ಬೆಂಗಳೂರಲ್ಲಿ ಎಟಿಎಸ್ ರಚನೆ ಮಾಡಲಾಗುತ್ತಿದೆ.

ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಬೇರೂರಿರುವ ಬಾಂಗ್ಲಾ ಉಗ್ರರು

ಬಾಂಗ್ಲಾ ಉಗ್ರರ ಅಡಗುದಾಣ ಬಗ್ಗೆ ಎಚ್ಚರಿಕೆ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ. ಬಾಂಗ್ಲಾದ ಜೆಎಂಬಿ ಉಗ್ರ ಸಂಘಟನೆಯ ಸದಸ್ಯರಿಗೆ ಬೆಂಗಳೂರು ಆಶ್ರಯ ತಾಣವಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಗೃಹ ಸಚಿವರು, ರಾಜಧಾನಿಗೆ ಪ್ರತ್ಯೇಕ ಉಗ್ರ ನಿಗ್ರಹ ಪಡೆ ರಚನೆಗೆ ಸೂಚನೆ ನೀಡಿದ್ದಾರೆ.

 ಎಲ್ಲೆಲ್ಲಿ ಈ ಮಾದರಿಯ ಉಗ್ರ ನಿಗ್ರಹ ಪಡೆ ಇದೆ

ಎಲ್ಲೆಲ್ಲಿ ಈ ಮಾದರಿಯ ಉಗ್ರ ನಿಗ್ರಹ ಪಡೆ ಇದೆ

ದೇಶದ ಬೃಹತ್ ನಗರಗಳಾದ ದೆಹಲಿ, ಚೆನ್ನೈ, ಹೈದರಾಬಾದ್ ಹಾಗೂ ಮುಂಬೈನಲ್ಲಿ ಪ್ರತ್ಯೇಕವಾಗಿ ಉಗ್ರ ನಿಗ್ರಹ ಪಡೆಗಳಿವೆ. ಇದೇ ಮಾದರಿಯಲ್ಲಿ ಬೆಂಗಳೂರಿಗೆ ಸಹ ಪ್ರತ್ಯೇಕ ಎಟಿಎಸ್ ಘಟಕ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದ್ದು, ಈ ಕುರಿತು ಶೀಘ್ರವೇ ರೂಪುರೇಷೆ ಸಿದ್ಧವಾಗಲಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 ಬೆಂಗಳೂರು ಉಗ್ರರ ತಾಣವಾಗುತ್ತಿದೆ

ಬೆಂಗಳೂರು ಉಗ್ರರ ತಾಣವಾಗುತ್ತಿದೆ

ಬೆಂಗಳೂರಿನಲ್ಲಿ ಜೆಎಂಬಿ ಉಗ್ರರ ಆಶ್ರಯ ಕುರಿತು ಎನ್‌ಐಎ ಪ್ರಸ್ತಾಪಿಸಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ನಗರದ ಸೂಕ್ಷ್ಮ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ ಕರಾವಳಿ ಪ್ರದೇಶದಲ್ಲಿ ಕೂಡ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.

 ರಾಜ್ಯ ಹಾಗೂ ಕೇಂದ್ರ ಪರಸ್ಪರ ಸಹಕಾರ ಮನೋಭಾವ ಹೊಂದಿರಬೇಕು

ರಾಜ್ಯ ಹಾಗೂ ಕೇಂದ್ರ ಪರಸ್ಪರ ಸಹಕಾರ ಮನೋಭಾವ ಹೊಂದಿರಬೇಕು

ಭಯೋತ್ಪಾದಕ ಸಂಘಟನೆಗಳನ್ನು ಮಟ್ಟ ಹಾಕಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಸ್ಪರ ಸಹಕಾರ ಮನೋಭಾವನೆಯನ್ನು ಹೊಂದಿರಬೇಕು. ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ಸಂವಹನ ಸಾಧಿಸಿ ಪೊಲೀಸರು ಆತಂಕವಾದಿಗಳ ಕುರಿತು ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ಶಂಕಾಸ್ಪದ ವ್ಯಕ್ತಿಗಳು ಕಂಡ ತಕ್ಷಣವೇ ವಶಕ್ಕೆ ಪಡೆದು ಪೂರ್ವಾಪರ ವಿವರ ಸಂಗ್ರಹಿಸಬೇಕು. ಹಾಗೆಯೇ ಐತಿಹಾಸಿಕ ಸ್ಥಳಗಳು, ವಿಮಾನ, ಏರ್‌ಪೋರ್ಟ್‌, ಮೆಟ್ರೋ ನಿಲ್ದಾಣಗಳು, ಶಾಪಿಂಗ್ ಮಾಲ್, ದೇವಸ್ಥಾನ, ಪ್ರಾರ್ಥನಾ ಮಂದಿರ, ಧಾರ್ಮಿಕ ಕೇಂದ್ರಗಳಿಗೆ ಭದ್ರತೆ ಒದಗಿಸಬೇಕು ಎಂದು ಹೇಳಿದರು.

 ಪೊಲೀಸರ ವೇತನ ಕುರಿತು ಸಿಎಂ ಜೊತೆ ಚರ್ಚೆ

ಪೊಲೀಸರ ವೇತನ ಕುರಿತು ಸಿಎಂ ಜೊತೆ ಚರ್ಚೆ

ಪೊಲೀಸರ ವೇತನ ಪರಿಷ್ಕರಣೆ ಕುರಿತು ಉದ್ಭವಿಸಿರುವ ಗೊಂದಲ ನಿವಾರಣೆಗೆ ಮುಖ್ಯಮಂತ್ರಿಗಳ ಜೊತೆ ಶೀಘ್ರವೇ ಚರ್ಚಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿ ರಾಘವೇಂದ್ರ ಎಚ್‌. ಔರಾದ್ಕರ್ ವರದಿಯನ್ವಯ ಪೊಲೀಸರ ವೇತನ ಶ್ರೇಣಿ ಪರಿಷ್ಕರಣೆಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

English summary
ATS is being set up in Bengaluru in the model of Delhi, Mumbai, Chennai and Hyderabad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X