Breaking; ಬೆಂಗಳೂರು ಏರ್‌ಪೋರ್ಟ್ ಬಳಿ ಸರಣಿ ಅಪಘಾತ, 7 ಜನರಿಗೆ ಗಾಯ
ಬೆಂಗಳೂರು, ಜನವರಿ 06; ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪ ಸರಣಿ ಅಪಘಾತವಾಗಿದೆ. 7 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ವಿವಿಧ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬೆಂಗಳೂರು ವಿಮಾನ ನಿಲ್ದಾಣದ ಸಮೀಪವೇ ನಡೆದ ಅಪಘಾತದಲ್ಲಿ 9 ವಾಹನಗಳು ಜಖಂಗೊಂಡಿವೆ.

ಈ ಸರಣಿ ಅಪಘಾತದಲ್ಲಿ 7 ಜನರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
ಕಲ್ಲು, ಮಣ್ಣು ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಮೊದಲು ಕಾರಿಗೆ ಡಿಕ್ಕಿ ಹೊಡೆದಿದೆ. ಆ ಕಾರು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಇದರಿಂದಾಗಿ ಸರಣಿ ಅಪಘಾತ ನಡೆದಿದೆ.
ಲಾರಿ ಕಾರಿಗೆ, ಕಾರು ಬೈಕ್‌ಗಳಿಗೆ ಡಿಕ್ಕಿಯಾಗಿದೆ. ಲಾರಿಯ ಚಾಲಕ ಸ್ಥಳದಲ್ಲೇ ಇದ್ದು, ವಾಹನ ಸವಾರರು ಆತನನ್ನು ತರಾಟೆಗೆ ತೆಗೆದುಕೊಂಡರು. ಸರಣಿ ಅಪಘಾತದಿಂದಾಗಿ ಹಲವು ವಾಹನಗಳು ರಸ್ತೆಯಲ್ಲಿ ನಿಂತಿದ್ದು, ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
ಬೆಂಗಳೂರು ಏರ್‌ಪೋರ್ಟ್ ರಸ್ತೆಯಲ್ಲಿ ಪ್ರತಿದಿನ ಲಕ್ಷಾಂತರ ವಾಹನಗಳು ಸಂಚಾರ ನಡೆಸುತ್ತವೆ. ಅತಿ ವೇಗ, ಜಾಲಿ ರೈಡ್ ರಸ್ತೆಯಲ್ಲಿನ ಅಪಘಾತಗಳಿಗೆ ಕಾರಣ ಎಂದು ಅಂದಾಜಿಸಲಾಗಿದೆ. ಹಲವು ಬಾರಿ ವಾಹನಗಳು ಚಾಲಕನ ನಿಯಂತ್ರಣ ಕಳೆದುಕೊಂಡು ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ಇತರ ವಾಹನಗಳಿಗೆ ಡಿಕ್ಕಿಯಾಗುತ್ತದೆ.
ಲಘುವಾಹನಗಳು, ಭಾರೀ ವಾಹನಗಳು, ಬೈಕ್‌ಗಳು ವಿಮಾನ ನಿಲ್ದಾಣದ ರಸ್ತೆಯಲ್ಲಿ ಒಟ್ಟಿಗೆ ಸಂಚಾರ ನಡೆಸುತ್ತವೆ. ಭಾರೀ, ದ್ವಿ ಚಕ್ರವಾಹನಗಳಿಗೆ ಬೇರೆ ಪಥ ಮಾಡಿದರೆ ಅಪಘಾತ ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ.












Click it and Unblock the Notifications