ನೆಲಮಂಗಲದಲ್ಲಿ ಮಾಜಿ ಶಾಸಕರ ಕಾರು ಸೇರಿದಂತೆ ಸರಣಿ ಅಪಘಾತ

ಬೆಂಗಳೂರು, ಜನವರಿ 11: ನೆಲಮಂಗಲದಲ್ಲಿ ಮಾಜಿ ಶಾಸಕರ ಕಾರು ಸೇರಿದಂತೆ ಇಂದು ಬೆಳಗಿನ ಜಾವ ಸರಣಿ ಅಪಘಾತ ಸಂಭವಿಸಿದೆ.

ಕೆ.ಎಸ್.ಆರ್.ಟಿ.ಸಿ ಬಸ್, ಇನ್ನೋವಾ ಕಾರ್ ಮತ್ತು ಕ್ಯಾಂಟರ್ ನಡುವೆ ಅಪಘಾತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ, ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ಘಟನೆ ನಡೆದಿದೆ. ಮಾಜಿ ಶಾಸಕ ತುಮಕೂರಿನ ಸೊಗಡು ಶಿವಣ್ಣ ಸಂಬಂಧಿಕರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ಕಾರು ಚಾಲಕ ಸ್ಥಳದಿಂದ ಕಾರು ತೆಗೆದುಕೊಂಡು ಪರಾರಿಯಾಗಿದ್ದಾನೆ. ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ‌ ಸಂಚಾರ ದಟ್ಟಣೆ ಉಂಟಾಗಿತ್ತು. ಕೆ.ಎಸ್.ಆರ್.ಟಿ.ಸಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Series Of Accident In Nelamangala

ನೆಲಮಂಗಲ ಸಂಚಾರಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಕಳೆದ ಒಂದು ವಾರದಲ್ಲಿ ಬೆಂಗಳೂರಲ್ಲಿ ಎರಡು ಬಾರಿ ಬಿಎಂಟಿಸಿ ಬಸ್‌ನಿಂದಾಗಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಶುಕ್ರವಾರವಷ್ಟೇ ಜಯನಗರದ ಪಂಪ್‌ಹೌಸ ಬಳಿ ವೋಲ್ವೋ ಬಸ್‌ಒಂದು ಸಿಗ್ನಲ್ ಬಳಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+