ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಭೀಕರ ಅಪಘಾತ; 3 ಸಾವು
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸರಣಿ ಅಪಘಾತ. ಸ್ಕಾರ್ಪಿಯೋ, ಲಾರಿ, ಕ್ಯಾಂಟರ್ ನಡುವೆ ಡಿಕ್ಕಿಯಾಗಿ ಇಬ್ಬರ ದುರ್ಮರಣ.
ಬೆಂಗಳೂರು, ಸೆಪ್ಟಂಬರ್ 1: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸರಣಿ ಅಪಘಾತವಾಗಿದ್ದು ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
'ಬೆಂಗಳೂರು ಉತ್ತರ' ತಾಲೂಕಿನ ಹುಣಸಮಾರನ ಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಈ ಅಪಘಾತಗಳು ನಡೆದಿವೆ.

ಅಪಘಾತದಲ್ಲಿ ಸ್ಕಾರ್ಪಿಯೋ ಕಾರು, ಟೆಂಪೋ ಮತ್ತು ಲಾರಿಯೊಂದು ಪರಸ್ಪರ ಡಿಕ್ಕಿ ಹೊಡೆದುಕೊಂಡಿದ್ದು, ಇದರ ಪರಿಣಾಮವಾಗಿ ಅಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಹುಣಸಮಾರನ ಹಳ್ಳಿ ಬಳಿಯ ಫ್ಲೈ ಓವರ್ ಮೇಲೆ ವೇಗವಾಗಿ ಸಾಗುತ್ತಿದ್ದ ಸ್ಕಾರ್ಪಿಯೋ ಗಾಡಿ, ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಡಿವೈಡರ್ ದಾಟಿ ಈಚೆ ಬಂದಿದ್ದಲ್ಲದೆ, ಎದುರು ಬದಿಯಿಂದ ಬರುತ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.












Click it and Unblock the Notifications