ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಸರಣಿ ಸಾವು
ಬೆಂಗಳೂರು, ಜನವರಿ 30: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದ 18 ದಿನಗಳಲ್ಲಿ 5 ಕೈದಿಗಳು ಮೃತಪಟ್ಟಿದ್ದಾರೆ.
Recommended Video
ಕೊಲೆ, ಕೊಲೆ ಯತ್ನ ಹಾಗೂ ದರೋಡೆ ಸೇರಿದಂತೆ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಗಳು ಅನಾರೋಗ್ಯದಿಂದ ಬಳಲುತ್ತಿದ್ದರು.
ಈ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಕೈದಿಗಳಿಗೆ ಜೈಲಿನ ಆಸ್ಪತ್ರೆಯಲ್ಲಿ ಪ್ರಾಥಮಿಕ ವೈದ್ಯೋಪಾಚಾರ ನೀಡಿದ ಅಧಿಕಾರಿಗಳು , ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡ ಕೂಡಲೇ ಕೈದಿಗಳಿಗೆ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಯಿತು. ಕೆಂಚಮ್ಮ ಮತ್ತು ಕಲ್ಲಪ್ಪ ಅವರು 75 ವರ್ಷ ವಯಸ್ಸಿನವರಾಗಿದ್ದು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೃದಯ ಸಂಬಂಧಿ ಕಾಯಿಲೆಯೂ ಕೂಡ ಅವರಿಗಿತ್ತು.
ಇನ್ನುಳಿದಂತೆ ವೀರೇಶ್ ಮತ್ತು ಮೊಹಮ್ಮದ್ ರಂಜಾನ್ ಸಹ ಮಧುಮೇಹ ಕಾಯಿಲೆಗೆ ತುತ್ತಾಗಿದ್ದರು. ಹಲವು ವರ್ಷಗಳಿಂದ ಅಬ್ದುಲ್ ಹಮೀದ್ ಅವರು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದರು.
ಕಾಯಿಲೆಗಳಿಂದ ಬಳಲುತ್ತಿದ್ದ ಕೈದಿಗಳು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬೇರೆ ಕಾರಾಗೃಹಗಳಿಂದ ವರ್ಗಾವಣೆಯಾಗಿ ಬಂದಿದ್ದವರು ಎಂದು ಕಾರಾಗೃಹದ ಮುಖ್ಯ ಅಧೀಕ್ಷರು ತಿಳಿಸಿದ್ದಾರೆ.
-ವೀರೇಶ್-ದರೋಡೆ-ವಿಜಯಪುರ-ಜ.11
-ಮಹಮ್ಮದ್ ರಂಜಾನ್-ದರೋಡೆ-ರಾಮನಗರ-ಜ.22
-ಅಬ್ದುಲ್ ಹಮೀದ್-ಕೊಲೆ-ವಿಜಯಪುರ-ಜ.28
-ಕಲ್ಲಪ್ಪ-ಕೊಲೆ ಯತ್ನ-ವಿಜಯಪುರ-ಜ.25
-ಕೆಂಚಮ್ಮ-ಕೊಲೆ-ಚಿಕ್ಕಮಗಳೂರು-ಜ.27
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications