'ಶೀಘ್ರದಲ್ಲಿಯೇ ರಾಜ್ಯದ ಹೋಟೆಲ್, ರೆಸ್ಟೋರೆಂಟ್ ಸೇವಾ ಶುಲ್ಕ ರದ್ದು'

ಬೆಂಗಳೂರು, ಏಪ್ರಿಲ್ 25 : ಕೇಂದ್ರ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಸೇವಾ ಶುಲ್ಕ ರದ್ದುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಆಹಾರ ಸಚಿವ ಯುಟಿ ಖಾದರ್ ತಿಳಿಸಿದರು.

ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, :ಸೇವಾ ಶುಲ್ಕ ರದ್ದುಗೊಳಿಸುವ ಕುರಿತು ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶ ನಮ್ಮ ಕೈಸೇರಿದೆ ಈ ಬಗ್ಗೆ ಮುಂದಿನ ವಾರದಲ್ಲಿ ಚರ್ಚೆ ನಡೆಸಲಾಗುವುದು" ಎಂದರು.

Service charge in hotels restaurants not mandatory in karnataka says minister u t khadar

ಮುಂದಿನ ವಾರ ಹೋಟೆಲ್, ರೆಸ್ಟೋರೆಂಟ್ ಮಾಲೀಕರ ಸಭೆ ನಡೆಸಲಿದ್ದೇವೆ. ಸಭೆಯ ಬಳಿಕ ರಾಜ್ಯದಲ್ಲಿಯೂ ಸೇವಾ ಶುಲ್ಕವನ್ನು ರದ್ದು ಮಾಡಲಾಗುವುದು ಎಂದು ತಿಳಿಸಿದರು.

ಒಂದು ವೇಳೆ ಆದೇಶ ಜಾರಿ ಬಳಿಕ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಶುಲ್ಕ ವಸೂಲಿ ಮಾಡಿದರೆ ದಂಡ ವಿಧಿಸುತ್ತೇವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+