ಮೊಹಮ್ಮದ್ ನಲಪಾಡ್‌ಗೆ ಸೋಮವಾರವೂ ಜಾಮೀನು ಸಿಗಲಿಲ್ಲ
ಬೆಂಗಳೂರು, ಮೇ 28 : ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಷನ್ಸ್ ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿದೆ. 2018ರ ಫೆಬ್ರವರಿಯಿಂದ ಮೊಹಮ್ಮದ್ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಸೋಮವಾರ ಸೆಷನ್ಸ್ ನ್ಯಾಯಾಲಯದಲ್ಲಿ ಮೊಹಮ್ಮದ್ ನಲಪಾಡ್ ಅರ್ಜಿಯ ವಿಚಾರಣೆ ನಡೆಯಿತು. ನಲಪಾಡ್ ಪರವಾಗಿ ವಕೀಲ ಉಸ್ಮಾನ್ ವಾದ ಮಂಡನೆ ಮಾಡಿದರು. ಆರೋಪಿಗಳಿಗೆ ಕೊಲೆ ಮಾಡುವ ಉದ್ದೇಶವಿರಲಿಲ್ಲ ಎಂದು ವಾದ ಮಂಡಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಪೊಲೀಸರು ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಸಾಕ್ಷಿನಾಶದ ಕಾರಣದಿಂದ ಹಿಂದೆ ಜಾಮೀನು ನೀಡಿರಲಿಲ್ಲ. ಈಗ ತನಿಖೆ ಮುಗಿದಿದ್ದು ಜಾಮೀನು ನೀಡಬೇಕು ಎಂದು ವಾದ ಮಂಡಿಸಿದರು.

ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶಬೇಕೆಂದು ವಿಶೇಷ ಸರ್ಕಾರಿ ಅಭಿಯೋಜಕ ಶ್ಯಾಂ ಸುಂದರ್ ಮನವಿ ಮಾಡಿದ್ದಾರೆ. ಆದ್ದರಿಂದ, ಅರ್ಜಿ ವಿಚಾರಣೆಯನ್ನು ಮಂಗಳವಾರಕ್ಕೆ ಮಂದೂಡಲಾಗಿದೆ.
ಮೊಹಮ್ಮದ್ ನಲಪಾಡ್ ಪರವಾಗಿ ವಕೀಲ ಉಸ್ಮಾನ್ ವಾದ ಮಂಡನೆ ಮುಕ್ತಾಯಗೊಳಿಸಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕರು ಮಂಗಳವಾರ ತಮ್ಮ ಆಕ್ಷೇಪಣೆಯನ್ನು ಸಲ್ಲಿಸುವ ನಿರೀಕ್ಷೆ ಇದೆ.
ಫೆ.17ರಂದು ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಹಲ್ಲೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಆರೋಪಿಗಳು. ಎಲ್ಲರೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಸಿಸಿಬಿ ಪೊಲೀಸರು, 600 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ಆರೋಪಿಗಳಾಗಿದ್ದಾರೆ.












Click it and Unblock the Notifications