ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ, ಮೇ 30ರಂದು ತೀರ್ಪು
ಬೆಂಗಳೂರು, ಮೇ 29 : ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಷನ್ಸ್ ನ್ಯಾಯಾಲಯ ಪೂರ್ಣಗೊಳಿಸಿದೆ. ಬುಧವಾರ ಮಧ್ಯಾಹ್ನ 3 ಗಂಟೆಗೆ ಕೋರ್ಟ್ ತೀರ್ಪನ್ನು ಪ್ರಕಟಿಸಲಿದೆ. ಫೆಬ್ರವರಿಯಿಂದ ಮೊಹಮ್ಮದ್ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಮಂಗಳವಾರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಶ್ಯಾಂ ಸುಂದರ್ ವಾದ ಮಂಡನೆ ಮಾಡಿದರು. ವಾದ ಆಲಿಸಿದ ಬಿ.ಪರಮೇಶ್ವರ ಪ್ರಸನ್ನ ಅವರು ಬುಧವಾರಕ್ಕೆ ತೀರ್ಪು ಕಾಯ್ದಿರಿಸಿದರು.

ಫೆ.17ರಂದು ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಹಲ್ಲೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಆರೋಪಿಗಳು. ಎಲ್ಲರೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ವಿದ್ವತ್ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಿದ್ದಾರೆ. 600 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ಆರೋಪಿಗಳಾಗಿದ್ದಾರೆ.












Click it and Unblock the Notifications