ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೊದಲ ದಿನವೇ ಲಸಿಕೆ ವಿತರಣೆಯಲ್ಲಿ 'ಸೈ' ಎನಿಸಿಕೊಂಡ ಸಿಲಿಕಾನ್ ಸಿಟಿ!

|
Google Oneindia Kannada News

ಬೆಂಗಳೂರು, ಮೇ 22: ಭಾರತದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾವೈರಸ್ ಲಸಿಕೆ ವಿತರಿಸಬೇಕು ಎಂಬ ಹೊಸ ನಿಯಮ ಜಾರಿಗೊಂಡ ಮೊದಲ ದಿನವೇ ರಾಜಧಾನಿ ಬೆಂಗಳೂರಿನಲ್ಲಿ 1.69 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

ಸೋಮವಾರ ಸಂಜೆ 7.43 ಗಂಟೆ ವೇಳೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 1.69 ಲಕ್ಷ ಫಲಾನುಭವಿಗಳು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ವ್ಯಾಪ್ತಿಯಲ್ಲಿ 40,000 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

ಬೆಂಗಳೂರಲ್ಲಿ ಮಕ್ಕಳಿಗಾಗಿಯೇ ನಿರ್ಮಾಣವಾಗಲಿದೆ ಕೋವಿಡ್ ಆಸ್ಪತ್ರೆಬೆಂಗಳೂರಲ್ಲಿ ಮಕ್ಕಳಿಗಾಗಿಯೇ ನಿರ್ಮಾಣವಾಗಲಿದೆ ಕೋವಿಡ್ ಆಸ್ಪತ್ರೆ

ಬಿಬಿಎಂಪಿ ನೀಡಿರುವ ಮಾಹಿತಿ ಪ್ರಕಾರ, "ಜೂನ್ 21ರ ಸಂಜೆ 5.45ರ ಸಮಯಕ್ಕೆ 1,55,753 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.85ರಷ್ಟು ಅಂದರೆ 1,30,034 ಜನರು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಶೇ.15ರಷ್ಟು ಅಂದರೆ 25,719 ಮಂದಿಗೆ ಲಸಿಕೆ ನೀಡಲಾಗಿದೆ. ಒಂದೇ ದಿನ ಇಷ್ಟು ಜನರಿಗೆ ಕೊವಿಡ್-19 ಲಸಿಕೆ ನೀಡುವ ಗುರಿ ಹೊಂದಲಾಗಿತ್ತು," ಎಂದು ಪಾಲಿಕೆ ತಿಳಿಸಿದೆ.

ಬೆಂಗಳೂರಿನಲ್ಲಿ ದಾಖಲೆ ಬರೆದ ಲಸಿಕೆ ವಿತರಣೆ

ಬೆಂಗಳೂರಿನಲ್ಲಿ ದಾಖಲೆ ಬರೆದ ಲಸಿಕೆ ವಿತರಣೆ

"ಪ್ರತಿನಿತ್ಯ ಬೆಂಗಳೂರು ವ್ಯಾಪ್ತಿಯಲ್ಲಿ 1 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡುವ ಗುರಿ ಹೊಂದಲಾಗಿದೆ. ಒಂದು ದಿನದಲ್ಲಿ 1.55 ಲಕ್ಷ ಜನರಿಗೆ ಲಸಿಕೆ ನೀಡುವ ಮೂಲಕ ನಮ್ಮ ಗುರಿಯನ್ನು ಸಾಧಿಸಿದ್ದೇವೆ. ಇದಕ್ಕೂ ಮೊದಲು ಕಳೆದ 2021ರ ಜೂನ್ 4ರಂದು ಅತಿಹೆಚ್ಚು ಎಂದರೆ 1.17 ಲಕ್ಷ ಜನರಿಗೆ ಲಸಿಕೆ ನೀಡಲಾಗಿತ್ತು," ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

ದೇಶದ ಪ್ರಮುಖ ನಗರದಲ್ಲಿ ಲಸಿಕೆ ವಿತರಣೆ ಪ್ರಮಾಣ

ದೇಶದ ಪ್ರಮುಖ ನಗರದಲ್ಲಿ ಲಸಿಕೆ ವಿತರಣೆ ಪ್ರಮಾಣ

ಬೆಂಗಳೂರಿನಲ್ಲಿ ಈವರೆಗೂ ಸುಮಾರು 51.60 ಲಕ್ಷ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ 47.51 ಲಕ್ಷ ಜನರಿಗೆ ಲಸಿಕೆ ನೀಡಲಾಗಿದ್ದು, ದೆಹಲಿಯಲ್ಲಿ 60 ಲಕ್ಷಕ್ಕೂ ಅಧಿಕ ಜನರಿಗೆ ಲಸಿಕೆ ವಿತರಿಸಲಾಗಿದೆ. ಚೆನ್ನೈನಲ್ಲಿ ಇದುವರೆಗೂ 26.99 ಲಕ್ಷ ಮಂದಿ ಲಸಿಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕೊರೊನಾವೈರಸ್ ಲಸಿಕೆ ವಿತರಣೆ ಕೇಂದ್ರಗಳು ಹೆಚ್ಚಳ

ಕೊರೊನಾವೈರಸ್ ಲಸಿಕೆ ವಿತರಣೆ ಕೇಂದ್ರಗಳು ಹೆಚ್ಚಳ

ಕರ್ನಾಟಕದಲ್ಲಿ ಕೊರೊನಾವೈರಸ್ ಲಸಿಕೆ ವೇಗ ಮತ್ತು ಪ್ರಮಾಣವನ್ನು ವೃದ್ಧಿಸುವ ಉದ್ದೇಶದಿಂದ ಹೆಚ್ಚುವರಿ ಲಸಿಕೆ ಕೇಂದ್ರಗಳನ್ನು ಆರಂಭಿಸಲಾಗಿದೆ. ರಾಜ್ಯದಲ್ಲಿ ಲಸಿಕೆ ವಿತರಣೆ ಕೇಂದ್ರಗಳ ಸಂಖ್ಯೆಯನ್ನು 300 ರಿಂದ 528ಕ್ಕೆ ಹೆಚ್ಚಿಸಲಾಗಿದೆ. 160 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಆಸ್ಪತ್ರೆಗಳು ಸೇರಿದಂತೆ 368 ಸ್ಥಳಗಳಲ್ಲಿ ಲಸಿಕೆ ಕೇಂದ್ರಗಳಿವೆ.

ನಾಲ್ಕನೇ ಹಂತದ ಲಸಿಕೆ ವಿತರಣೆ ಪ್ರಾರಂಭ

ನಾಲ್ಕನೇ ಹಂತದ ಲಸಿಕೆ ವಿತರಣೆ ಪ್ರಾರಂಭ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ನಿಯಂತ್ರಣಕ್ಕೆ ನಾಲ್ಕು ಹಂತಗಳಲ್ಲಿ ಲಸಿಕೆ ವಿತರಣೆ ನಡೆಸಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.

ಕಳೆದ ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಜೂನ್ 21ರಿಂದ ನಾಲ್ಕನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆ ಆರಂಭಿಸಲಾಗಿದೆ. ಈ ಪರಿಷ್ಕೃತ ನಿಯಮಗಳ ಪ್ರಕಾರ ರಾಜ್ಯದಲ್ಲಿ ಲಸಿಕೆ ವಿತರಣೆ ನಡೆಸಲಾಗುತ್ತಿದೆ.

ಕರ್ನಾಟಕದಲ್ಲಿ 7 ಲಕ್ಷ ಡೋಸ್ ಲಸಿಕೆ ವಿತರಿಸುವ ಗುರಿ

"ಬೇಸಿಗೆಯ ಅಯನ ಸಂಕ್ರಾಂತಿ ದಿನವೇ "ಲಸಿಕಾ ಮಹಾ ಅಭಿಯಾನ" ನಡೆಸಲಾಗುತ್ತಿದ್ದು, ಜೂನ್ 21ರ ಒಂದೇ ದಿನ 7 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಿಸುವ ಗುರಿಯನ್ನು ಹೊಂದಲಾಗಿದೆ," ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದರು.

Recommended Video

Virat Kohliಗಿಂತ Rohit Sharma ಉತ್ತಮ ನಾಯಕ ಎಂದ ಟ್ವಿಟ್ಟರ್ | Oneindia Kannada

English summary
Bengaluru Set A New Record On 1st Day Of Coronavirus Vaccine Guidelines Revised.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X