ಗಾಲಿ ಜನಾರ್ದನ ರೆಡ್ಡಿಗೆ ಹಿನ್ನಡೆ, ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು, ಜುಲೈ 20: ಅಕ್ರಮ ಗಣಿಗಾರಿಕೆಯ ಕೇಸೊಂದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಹಿನ್ನಡೆಯಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಲಯವು ಗಾಲಿ ಜನಾರ್ದನ ರೆಡ್ಡಿ ಹಾಗೂ ಇನ್ನಿತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.

ಇಂಡಿಯನ್ ಮೈನಿಂಗ್ ಕಂಪನಿಯ ಹೆಸರಿನಲ್ಲಿ ನಡೆಸಿದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿ, ಮೆಹಫೂಜ್ ಅಲಿ ಖಾನ್ ಹಾಗೂ ಶ್ರೀನಿವಾಸ್ ರೆಡ್ಡಿ ಅವರು ಆರೋಪಿಗಳಾಗಿದ್ದಾರೆ.

Setback for Gali Janardhan Reddy in a Mining Scam

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಗಳನ್ನು ತೆಗೆದು ಹಾಕುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಮೇಲ್ನೋಟಕ್ಕೆ ಆರೋಪಿಗಳು ಸಂಚು, ಅಕ್ರಮ ವ್ಯವಹಾರದಲ್ಲಿ ತೊಡಗಿರುವುದು ಕಂಡು ಬಂದಿದ್ದು, ಈ ಬಗ್ಗೆ ವಿಚಾರಣೆ ಅಗತ್ಯವಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಎಂ ನಾಸಿಕ್ ಸಾಬ್ ಎಂಬುವವರಿಗೆ ಸೇರಿದ್ದ ಇಂಡಿಯನ್ ಮೈನಿಂಗ್ ಕಂಪನಿ ಹೆಸರಿನಲ್ಲಿ ಅಕ್ರಮವಾಗಿ ಕಬ್ಬಿಣ ಅದಿರನ್ನು ಸಾಗಾಟ ಹಾಗೂ ಮಾರಾಟ ಮಾಡಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ಭಾರಿ ನಷ್ಟವಾಗಿದೆ ಎಂದು 2015ರಲ್ಲಿ ಲೋಕಯುಕ್ತ ಠಾಣೆಯಲ್ಲಿ ಗಾಲಿ ಜನಾರ್ದನ ರೆಡ್ಡಿ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ.

ಅಕ್ರಮ ಗಣಿಗಾರಿಕೆಯ ನಂಬರ್ ಒನ್ ಆರೋಪಿಯಾಗಿರುವ ಜನಾರ್ದನ ರೆಡ್ಡಿ ಅವರು ಮೂರೂವರೆ ವರ್ಷ ಸೆರೆವಾಸ ಅನುಭವಿಸಿದ್ದರು. 2015ರಲ್ಲಿ ಸುಪ್ರೀಂಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದು ಬಿಡುಗಡೆ ಹೊಂದಿದ್ದರು. ಬಳ್ಳಾರಿ ಹಾಗೂ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗಳಿಗೆ ಅವರು ಭೇಟಿ ನೀಡುವಂತಿಲ್ಲ ಮತ್ತು ಸಾಕ್ಷ್ಯ ನಾಶಪಡಿಸಲು ಪ್ರಯತ್ನಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+