ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ನಗರದ ಸುಂಕದಕಟ್ಟೆಯಲ್ಲಿ ಜು.27ರಂದು 7 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದು ಈ ಸಂಬಂಧವಾಗಿ ಕಾಮಾಕ್ಷಿಪಾಳ್ಯ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ಶ್ರೀನಿವಾಸ್ (28) ಬಂಧಿತ ಆರೋಪಿಯಾಗಿದ್ದು, ಈತ ಅತ್ಯಾಚಾರಕ್ಕೊಳಗಾದ ಬಾಲಕಿಯ ಮನೆಕೆಲಸದಾಳು ಲಕ್ಷ್ಮಮ್ಮನ ಪುತ್ರ ನೆಂದು ಹೇಳಲಾಗಿದೆ.
ಬಾಲಕಿಯ ತಾಯಿ ಖಾಸಗಿ ಶಾಲೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆ ದಿನ ಸಂಜೆ ಕಾರ್ಯನಿಮಿತ್ತ ಹೊರಗಡೆ ಹೋಗುವ ಸಂದರ್ಭದಲ್ಲಿ ಮಗಳನ್ನು ತನ್ನ ಮನೆಗೆಲಸಕ್ಕೆ ಬರುತ್ತಿದ್ದ ಲಕ್ಷ್ಮಮ್ಮನ ಮನೆಯಲ್ಲಿ ಬಿಟ್ಟು ಹೋಗಿದ್ದಾರೆ .ಲಕ್ಷ್ಮಮ್ಮ ಮನೆಯಲ್ಲಿ ಮಗುವನ್ನು ಬಿಟ್ಟು ಹೊರ ಹೊಗಿದ್ದಾಗ ಶ್ರೀನಿವಾಸ್ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದೆ.[ವಿಬ್‌ಗಯಾರ್ ಶಾಲೆಯಲ್ಲಿ ನಡೆದದ್ದು ಗ್ಯಾಂಗ್‌ರೇಪ್]
ಬಾಲಕಿಯ ತಾಯಿ ಪ್ರತಿನಿತ್ಯವು ಹೊರಗಡೆ ಹೋಗುವ ಸಂದರ್ಭದಲ್ಲಿ ಮಗಳನ್ನು ಕೆಲಸದಾಕೆಯ ಮನೆಯಲ್ಲಿ ಬಿಟ್ಟು ಹೋಗುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶ್ರೀನಿವಾಸ್‌ನ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ಐಪಿಸಿ ಸೆಕ್ಷನ್ 376, ಪೋಸ್ಕೋ ಅಡಿ ಪ್ರಕರಣ ದಾಖಲಿಸಿದ್ದಾರೆ.












Click it and Unblock the Notifications