ಬೆಂಗಳೂರು: ಜೆಜೆ ನಗರದಲ್ಲಿ 5ರ ಬಾಲೆ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು, ಜುಲೈ 9: ತಿಂಡಿ ಆಸೆ ತೋರಿಸಿ 5 ವರ್ಷದ ಪುಟ್ಟ ಕಂದಮ್ಮನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಮಾನುಷ ಘಟನೆ ಬೆಂಗಳೂರಿನ ಜೆ.ಜೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

ಜಗಜೀವನರಾಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪಾದರಾಯನಪುರದಲ್ಲಿ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಪಕ್ಕದ ಮನೆಯಲ್ಲಿ ಆಟವಾಡುತ್ತಿದ್ದ ಮಗುವಿಗೆ ಸಿಹಿ ತಿಂಡಿ ನೀಡುವ ಆಸೆ ತೋರಿಸಿ ತನ್ನ ಮನೆಗೆ ಕರೆದುಕೊಂಡು ಹೋದ ಮೊಹಮ್ಮದ್ ರೋಷನ್ (40) ಎಂಬಾತ ಮುಗ್ಧ ಬಾಲೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

sexual assault on 5 year old baby in jj nagar

ಘಟನೆ ಕುರಿತು ಮಗುವಿನ ಪೋಷಕರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ಮೊಹಮ್ಮದ್ ರೋಷನ್‌ನನ್ನು ಬಂಧಿಸಿದ್ದಾರೆ. ಪಾಪದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ವೈದ್ಯಕೀಯ ತಪಾಸಣೆ ನಡೆಸಿದ ವೈದ್ಯರು ಖಚಿತಪಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಯ ವಿರುದ್ಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+