Bengaluru: ವಿದ್ಯೆ ಹೇಳಿಕೊಡುವ ಗುರುವಿನಿಂದಲೇ 10 ವರ್ಷದ ಬಾಲಕಿ ಮೇಲೆ ಹೇಯ ಕೃತ್ಯ
ಬೆಂಗಳೂರು, ಆಗಸ್ಟ್ 04: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ವರ್ಷದ ಬಾಲಕಿ ಮೇಲೆ ವಿದ್ಯೆ ಹೇಳಿಕೊಡಬೇಕಾದ ಪ್ರಾಂಶುಪಾಲರಿಂದಲೇ ಅತ್ಯಾಚಾರ ನಡೆದ ಹೀನ ಕೃತ್ಯವೊಂದು ಬೆಳಕಿಗೆ ಬಂದಿದೆ. ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಪ್ರಕರಣ ಸಂಬಂಧ ವರ್ತೂರಿನ ಪೊಲೀಸರು ಆರೋಪಿಯನ್ನು ಶುಕ್ರವಾರ ಬಂಧಿಸಿದ್ದಾರೆ. ವರ್ತೂರಿನ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ.

ಎರಡನೇ ತರಗತಿಯಲ್ಲಿ ಓದುತ್ತಿದ್ದ ಹತ್ತು ವರ್ಷದ ಬಾಲಕಿ ಎಂದಿನಂತೆ ಗುರುವಾರ ಬೆಳಗ್ಗೆ ವರ್ತೂರು ಖಾಸಗಿ ಶಾಲೆಗೆ ತೆರಳಿದ್ದಾಳೆ. ಆಕೆಯನ್ನು ವಿಶ್ರಾಂತಿ ಮಾಡುವಂತೆ ಹೇಳಿದ ಅದೇ ಶಾಲೆಯ ಪ್ರಾಂಶುಪಾರ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರ ನಡೆಸಿ ಬಾಲಕಿಗೆ ಕೇಕ್ ತಿನ್ನಿಸಿ ಆತ ಕಳುಹಿಸಿದ್ದಾನೆ. ಆರೋಪಿ ವಶಕ್ಕೆ ಪಡೆದ ಪೊಲೀಸರು, ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗ್ಗೆ 8.30ಕ್ಕೆ ಶಾಲೆಗೆ ಹೋಗಿದ್ದ ಬಾಲಕಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆಗೆ ಮರಳಿದ್ದಾಳೆ. ಆಕೆಗೆ ತೀವ್ರ ರಕ್ತಸ್ರಾವವಾಗಿದ್ದು, ಘಟನೆಯನ್ನು ತಾಯಿಗೆ ವಿವರಿಸಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಕೂಡಲೇ ಬಾಲಕಿಯನ್ನು ತಾಯಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಸದ್ಯ ಬಾಲಕಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಾಲಕಿ ನರ ದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದರು. ಇಂತಹ ವಿದ್ಯಾರ್ಥಿನಿಯ ಮೇಲೆ ವಿದ್ಯೆ ಹೇಳಿಕೊಡಬೇಕಾದ ಪ್ರಾಂಶುಪಾಲನಿಂದ ಪೈಶಾಚಿಕ ಕೃತ್ಯ ನಡೆದಿದೆ. ಇದು ಒಬ್ಬರಿಂದ ನಡೆದಿದೆಯೇ ಅಥವಾ ಬೇರೆಯವರು ಪ್ರಕರಣದಲ್ಲಿ ಭಾಗಿಯಾಗಿದ್ದಾರಾ? ಎಂಬ ಮಾಹಿತಿ ತಿಳಿಯಬೇಕಿದೆ. ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ಕೈಗೊಂಡಿದ್ದಾರೆ.












Click it and Unblock the Notifications