Get Updates
Get notified of breaking news, exclusive insights, and must-see stories!

ಶ್ಯಾಮನೂರುಗೆ ಕೈತಪ್ಪಿದ ಸಚಿವಗಿರಿ: ಪರಂ ಮನೆ ಮುಂದೆ ಧರಣಿ

ಬೆಂಗಳೂರು, ಜೂನ್ 13: ಜೆಡಿಎಸ್ -ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಶ್ಯಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ನಿವಾಸದ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಮೊದಲ ಸಚಿವ ಸಂಪುಟ ವಿಸ್ತರಣೆಯಲ್ಲಿ ಶ್ಯಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡಲಿಲ್ಲ, ಎರಡನೇ ಬಾರಿಯ ಸಂಪುಟ ವಿಸ್ತರಣೆ ವೇಳೆ ಶ್ಯಾಮನೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಲಾಯಿತು.

ದಾವಣಗೆರೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥ್‌ ಸೇರಿದಂತೆ ಸ್ಥಳೀಯ ನಗರ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸಿದರು. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಒತ್ತಾಯಿಸಿದರು.

Shamnur followers protests in front of DCM residence

ಮಂತ್ರಿ ಸ್ಥಾನ ಕೊಡಿ ಇಲ್ಲ ದಾವಣಗೆರೆ ಯಲ್ಲಿ ಕಾಂಗ್ರೆಸ್ ಮರೆತುಬಿಡಿ, ಇಲ್ಲವಾದಲ್ಲಿ ಬರುವ ಲೋಕಸಭಾ ಚುನಾವಣೆಗೆ ದಾವಣಗೆರೆಯಲ್ಲಿ ಕಾಂಗ್ರೆಸ್‌ಗೆ ಕಷ್ಟವಾಗಲಿದೆ ಎಂದು ಎಚ್ಚರಿಸಿದ ಬಳಿಕ ಶ್ಯಾಮನೂರುಗೆ ಸಚಿವ ಸ್ಥಾನ ನೀಡುವಂತೆ ಡಾ. ಜಿ. ಪರಮೇಶ್ವರ್ ಭರವಸೆ ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಬಳಿಯೂ ತೆರಳಿ ಬೆಂಬಲಿಗರ ನಿಯೋಗ ಶ್ಯಾಮನೂರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+