ಶಾಮನೂರು ಶಿವಶಂಕರಪ್ಪ ಪುತ್ರರಿದ್ದ ಕಾರು ಅಪಘಾತ
ಬೆಂಗಳೂರು, ನವೆಂಬರ್ 20: ಶಾಮನೂರು ಶಿವಶಂಕರಪ್ಪ ಪುತ್ರರಿದ್ದ ಕಾರು ಅಪಘಾತಕ್ಕೀಡಾಗಿ ಓರ್ವ ಬೈಕ್ ಸವಾರ ಮೃತಪಟ್ಟಿರುವ ಘಟನೆ ಡಾಬಸ್ ಪೇಟೆಯಲ್ಲಿ ಬುಧವಾರ ನಡೆದಿದೆ.
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಪ್ರಯಾಣಿಸುತ್ತಿದ್ದ ಕಾರು ಡಾಬ್ ಪೇಟೆಯಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ತುತ್ತಾಗಿರುವ ಕಾರು ದಾವಣಗೆರೆ ಶುಗರ್ಸ್ ಕಂಪನಿ ಹೆಸರಿನಲ್ಲಿ ನೋಂದಣಿಯಾಗಿದೆ. ನೆಲಮಂಗಲ ಸಂಚಾರಿ ಪೊಲೀಸರು ಪರಿಶೀಲನೆ ದೂರು ದಾಖಲಿಸಿದ್ದಾರೆ.

ಬೆಂಗಳೂರಿನ ಪ್ರಕಾಶ ನಗರ ನಿವಾಸಿ (50) ಮೃತಪಟ್ಟ ಬೈಕ್ ಸವಾರ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶಾಮನೂರು ಶಿವಶಂಕರಪ್ಪ ಪುತ್ರ ಗಣೇಶ್, ವೀರೇಶ್ ಹಾಗೂ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.












Click it and Unblock the Notifications