Shankar Nag Birthday: ಸರ್ಕಾರವೇ ಚಾಲಕರ ದಿನಾಚರಣೆ ಆಚರಿಸಲಿ, ನಟಿ ರಚಿತಾ ರಾಮ್ ರಾಯಭಾರಿ
ಬೆಂಗಳೂರು, ನವೆಂಬರ್ 07: ಮೇರುನಟ ದಿ. ಶಂಕರ್‌ನಾಗ್ ಅವರೆಂದರೆ ಅವರ ಆಟೋ ರಾಜ ಸಿನಿಮಾ, ಗಲ್ಲಿ ಗಲ್ಲಿಗಳಲ್ಲಿ ಆಟೋಗಳ ಮೇಲಿನ ಶಂಕ್ರಣ್ಣ ಫೋಟೋ ಕಣ್ತುಂದೆ ಬರುತ್ತದೆ. ಅವರ ಜನ್ಮದಿನದ ಪ್ರಯುಕ್ತ ಆಟೋ ಚಾಲಕರ ಸಂಘಟನೆಗಳ ನೇತೃತ್ವದಲ್ಲಿ 12ನೇ ವರ್ಷದ "ಚಾಲಕರ ದಿನಾಚರಣೆ"ಯನ್ನು ನವೆಂಬರ್ 9ರಂದು ಜಯನಗರ 5ನೇ ಬ್ಲಾಕ್, ಶಾಲಿನಿ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ. ಆದಿಚುಂಚನಗಿರಿ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಶುಕ್ರವಾರ ಪ್ರೆಸ್‌ಕ್ಲಬ್‌ನಲ್ಲಿ ಪೀಸ್ ಆಟೋ ಮತ್ತು ವಿಷ್ಣುಸೇನಾ ಸಮಿತಿ ಹಾಗೂ ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘವು ಸುದ್ದಿಗೋಷ್ಠಿ ನಡೆಸಿತು. ಪೀಸ್ ಆಟೋ ಮತ್ತು ಟ್ಯಾಕ್ಸಿ ಡ್ರೈವರ್ಸ್ ಯೂನಿಯನ್ ಅಧ್ಯಕ್ಷ ರಘು ಎನ್. ನಾರಾಯಣ್ ಗೌಡ ಅವರು ಮಾತನಾಡಿ, ಈ ಬಾರಿಯ ಚಾಲಕರ ದಿನಾಚರಣೆಗೆ "ಆಟೋ ರಾಯಭಾರಿ"ಯಾಗಿ ಡಿಂಪಲ್ ಕ್ವೀನ್ ನಟಿ ರಚಿತರಾಮ್ ಆಯ್ಕೆಯಾಗಿದ್ದಾರೆ ಎಂದರು. ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎಸ್. ಅಶ್ವತ್ಥನಾರಾಯಣ್, ಸಾರಿಗೆ ಆಯುಕ್ತ ಎ.ಎಂ. ಯೋಗೇಶ್, ಆರಕ್ಷಕ ಮಹಾನಿರೀಕ್ಷರಾದ ಡಾ.ಎಂ.ಎ.ಸಲೀಂ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.

ಪ್ರತಿವರ್ಷದಂತೆ ಈ ವರ್ಷವೂ ಶಂಕರ್‌ನಾಗ್ ಅವರ ಜನ್ಮದಿನವನ್ನು ಚಾಲಕರ ದಿನವನ್ನಾಗಿ ಸಮಸ್ತ ಆಟೋ ಚಾಲಕರ ಸಮ್ಮುಖದಲ್ಲಿ ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ 07 ಪ್ರಾಮಾಣಿಕ ಚಾಲಕರು, ಹಿರಿಯ ಹಾಗೂ ಮಹಿಳಾ ಆಟೋಚಾಲಕರಿಗೆ ತಮ್ಮ ಸೇವೆಯನ್ನು ಗೌರವಿಸಿ ಚಿನ್ನದ ಪದಕವನ್ನು ವಿತರಣೆ ಮಾಡಲಾಗುತ್ತಿದೆ. ಈ ಮೂಲಕ ಪ್ರಾಮಾಣಿಕ ಆಟೋ ಚಾಲಕರಿಗೆ ಇನ್ನಷ್ಟು ಹುರಿದುಂಬಿಸುವ ಕೆಲಸ ಮಾಡಲಿದ್ದೇವೆ ಎಂದರು.
ಆದರ್ಶ ಆಟೋ ಮತ್ತು ಟ್ಯಾಕ್ಸಿ ಡ್ರೈವರ್ಸ್‌ಯೂನಿಯನ್ ಅಧ್ಯಕ್ಷ ಎಂ. ಮಂಜುನಾಥ್ ಗೌಡ ಅವರು, ಶಂಕರ್‌ನಾಗ್ ಅವರ ದಿನಾಚರಣೆ ಎಲ್ಲಾ ಚಾಲರಕರಿಗೂ ಹಬ್ಬದ ದಿನದಂತೆ, ಹೀಗಾಗಿ ಹಬ್ಬದಂತೆಯೇ ಸಂಭ್ರಮಿಸಲು ಎಲ್ಲಾ ಆಟೋ ಮತ್ತು ಟ್ಯಾಕ್ಸಿ ಚಾಲಕರು ಸೇರಲಿದ್ದಾರೆ. ಆಗಮಿಸುವ ಸುಮಾರು 4 ಸಾವಿರ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಲಾಗುತ್ತದೆ. ನಟ ಅಜಯ್ ರಾವ್ ಅವರು ಇಬ್ಬರು ಚಾಲಕರಿಗೆ ಧನಸಹಾಯ ಮಾಡಲಿದ್ದಾರೆ ಎಂದು ಹೇಳಿದರು.

ಸರ್ಕಾರವೇ ಚಾಲಕರ ದಿನ ಆಚರಿಸಬೇಕು..!
ಆಟೋ ಮತ್ತು ಟ್ಯಾಕ್ಸಿ ಚಾಲಕರಿಲ್ಲದೇ ಸಾರಿಗೆ ವ್ಯವಸ್ಥೆಯೇ ಇಲ್ಲ. ಚಾಲಕರನ್ನು ಗೌರವಿಸಲು ಪ್ರತಿವರ್ಷ ನಡೆಸುತ್ತಿರುವ ಚಾಲಕರ ದಿನಾಚರಣೆಯನ್ನು ಸರ್ಕಾರವೇ ಜವಾಬ್ದಾರಿ ಹೊತ್ತು ಆಚರಿಸಬೇಕು, ಜೊತೆಗೆ, ಈ ದಿನವನ್ನು ಸರ್ಕಾರ ಅಧಿಕೃತವಾಗಿ "ಚಾಲಕರ ದಿನ"ವನ್ನಾಗಿ ಘೋಷಿಸಬೇಕು ಎಂದು ಆಗ್ರಮಿಸಿದರು.
ಬಿ.ಪ್ಯಾಕ್ ಸದಸ್ಯ ರಾಘವೇಂದ್ರ ಪೂಜಾರಿ ಮಾತನಾಡಿ, ಸಾಹಸಸಿಂಹ ದಿ. ಡಾ. ವಿಷ್ಣುವರ್ಧನ್ ಅವರಿಗೆ "ಕರ್ನಾಟಕ ರತ್ನ" ಗೌರವ ಸಂಧಿರುವ ಹಿನ್ನೆಲೆಯಲ್ಲಿ ಚಾಲಕರ ದಿನಾಚರಣೆ ವೇಳೆ ಎಲ್ಲಾ ಆಟೋ ಚಾಲಕರು "ವಿಷ್ಣು ನಮನ" ಸಲ್ಲಿಸಲಿದ್ದೇವೆ ಎಂದರು.
ಹಂಪಿ ರಂಥದಂತೆ ಸಿಂಗಾರಗೊಂಡ ಆಟೋಗೆ ಚಾಲನೆ
ಶಂಕರ್‌ನಾಗ್ ಅವರ ಜನ್ಮದಿನದ ಪ್ರಯುಕ್ತ "ಹಂಪಿ ರಥ"ದಂತೆ ಸಿಂಗಾರಗೊಂಡ ಆಟೋಗೆ ಚಾಲನೆ ನೀಡಲಾಗಿದೆ. ಶಂಕರ್‌ನಾಗ್ ಹಾಗೂ ಡಾ. ವಿಷ್ಣವರ್ಧನ್ ಫೋಟೋ ಹೊತ್ತ ಈ ರಥ ಬೆಂಗಳೂರಿನಾದ್ಯಂತ ಎಲ್ಲೆಡೆ ಮೆರವಣಿಗೆ ಮಾಡಲಿದ್ದೇವೆ ಎಂದು ತಿಳಿಸಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications