• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಕ್ ಕೊಟ್ಟ ಶಾಸಕ ಎನ್.ಎ. ಹ್ಯಾರಿಸ್!

|

ಬೆಂಗಳೂರು, ಸೆ. 15: ಇದೇ ಸೆ. 21 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಲು ಕಾಂಗ್ರೆಸ್ ಪಕ್ಷ ತಯಾರಿ ಆರಂಭಿಸಿದೆ. ಕೊರೊನಾ ವೈರಸ್, ಲಾಕ್‌ಡೌನ್, ವೈದ್ಯಕೀಯ ಸಲಕರಣೆಗಳ ಖರೀದಿ, ಕೋವಿಡ್ ಕೇರ್ ಕೇಂದ್ರಗಳ ಅವ್ಯವಹಾರ ಆರೋಪ, ಡ್ರಗ್ಸ್, ಲಾಕ್‌ಡೌನ್ ಸಂದರ್ಭದಲ್ಲಿ ಹಲವು ಸುಗ್ರೀವಾಜ್ಞೆಗಳ ಜಾರಿ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡುವುದಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅ ವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಈ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಇವತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿತ್ತು.

ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

ಆ ಸಭೆಯಲ್ಲಿ ಕಾಂಗ್ರೆಸ್ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರು ಅಕ್ಷರಶಃ ಕಾಂಗ್ರೆಸ್ ಉಳಿದ ಶಾಸಕರಿಗೆ ಶಾಕ್ ಕೊಟ್ಟಿದ್ದಾರೆ. ಅದಕ್ಕೆ ಕಾರಣ ಮತ್ತದೆ ಕೊರೊನಾ ವೈರಸ್. ಅನುಮಾನದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಇಂದು ಬೆಳಿಗ್ಗೆ ಶಾಸಕ ಎನ್.ಎ. ಹ್ಯಾರೀಸ್ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರಂತೆ. ಕೋವಿಡ್ ಪರೀಕ್ಷೆ ಫಲಿತಾಂಶ ಬರುವುದು ತಡವಾಗಲಿದೆ ಎಂದಿದ್ದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಬಂದಿದ್ದರು. ಖಾಸಗಿ ಹೊಟೆಲ್‌ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.

ಶಿರಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದ ಡಿಕೆಶಿ!

ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

ಸಭೆಯ ಬಳಿಕ ಮಧ್ಯಾಹ್ನ ಊಟ ಮಾಡುವ ಸಮಯದಲ್ಲಿ ಹ್ಯಾರೀಸ್ ಮೊಬೈಲ್‌ಗೆ ಮಸೇಜ್ ಒಂದು ಬಂದಿದೆ. ಆ ಮೇಸೆಜ್ ನೀಡಿದ ಹ್ಯಾರಿಸ್ ಅವರು ತಕ್ಷಣ ಅಲ್ಲಿಂದ ಹೊರಟಿದ್ದಾರೆ. ಅವರಿಗೆ ಕೋವಿಡ್ ಇರುವುದು ದೃಢಪಟ್ಟಿರುವ ಬಗ್ಗೆ ಮೇಸೆಜ್ ಬಂದಿದೆ ಎನ್ನಲಾಗಿದೆ. ಹೀಗಾಗಿ ತಕ್ಷಣ ಅಲ್ಲಿಂದ ಶಾಸಕ ಹ್ಯಾರಿಸ್ ಅವರು ಮನೆಗೆ ಹೋಗಿ ಹೋಮ್ ಐಸೋಲೇಶನ್ ಆಗಿದ್ದಾರೆ ಎನ್ನಲಾಗಿದೆ.

ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಹ್ಯಾರಿಸ್ ಅವರೊಂದಿಗೆ ಊಟ ಮಾಡಿದ್ದರು. ಈಗ ಅವರೆಲ್ಲರಿಗೂ ಆತಂಕ ಶುರುವಾಗಿದೆ ಎನ್ನಲಾಗಿದೆ.

English summary
Shantinagar Congress MLA N Harris has been diagnosed with Covid-19, who is now undergoing Home Isolation in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X