ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕೃಷ್ಣ ಭೈರೇಗೌಡ ಮಹತ್ವದ ಹೇಳಿಕೆ!

|
Google Oneindia Kannada News

ಬೆಂಗಳೂರು, ಫೆ. 18: ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರುವುದು ಯಾವಾಗ ಎಂಬ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಆಗಾಗ ಕಾಡುತ್ತಲೇ ಇದೆ. ಕಾಂಗ್ರೆಸ್ ಪಕ್ಷ ಸೇರುವ ಕುರಿತು ಈಗಾಗಲೇ ಹಲವು ಬಾರಿ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಇಂದು-ನಾಳೆ ಅಂತಾ ಶರತ್ ಬಚ್ಚೇಗೌಡ ಅವರು ಪಕ್ಷ ಸೇರ್ಪಡೆ ಕಾರ್ಯಕ್ರಮ ಮುಂದಕ್ಕೆ ಹೋಗುತ್ತಲೇ ಇದೆ.

Recommended Video

Modi, ಬಿಎಸ್ ವೈ ಸರ್ಕಾರದಿಂದ ಜನರ ಲೂಟಿ'- ಸುರ್ಜೇವಾಲ ಕಿಡಿ | Oneindia Kannada

ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆಯನ್ನೂ ನಡೆಸಿದ್ದಾರೆ. ಶರತ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಜವಾಬ್ದಾರಿಯನ್ನು ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರಿಗೆ ವಹಿಸಲಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ರಾಜ್ಯಕ್ಕೆ ಆಗಮಿಸಿದ್ದು, ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರ್ಪಡೆ ಕುರಿತು ಅವರೊಂದಿಗೆ ಅಂತಿಮ ಚರ್ಚೆ ನಡೆಸಲಿದ್ದಾರೆ. ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರುವ ಬಗ್ಗೆ ಮಾಜಿ ಸಚಿವ, ಬ್ಯಾಟರಾಯನಪುರ ಕಾಂಗ್ರೆಸ್ ಶಾಸಕ ಕೇಷ್ಣ ಭೈರೇಗೌಡ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.

ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ

ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ

ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಹಳಷ್ಟು ಚರ್ಚೆ ನಡೆದಿದೆ ಎಂದು ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರೊಂದಿಗೆ ಚರ್ಚಿಸಿದ ಬಳಿಕ ಹೇಳಿಕೆ ಕೊಟ್ಟಿರುವ ಅವರು, ಈ ಬಗ್ಗೆ ಹೊಸಕೋಟೆ ಕಾಂಗ್ರೆಸ್ ಮುಖಂಡರೊಂದಿಗೂ ಚರ್ಚಿಸಿದ್ದೇವೆ ಎಂದು ಕೃಷ್ಣ ಭೈರೇಗೌಡ ಹೇಳಿದ್ದಾರೆ.

ರಾಜ್ಯ ನಾಯಕರ ಗ್ರೀನ್ ಸಿಗ್ನಲ್!

ರಾಜ್ಯ ನಾಯಕರ ಗ್ರೀನ್ ಸಿಗ್ನಲ್!

ನಮ್ಮ‌ ಪಕ್ಷ ಕಾರ್ಯಕರ್ತರ ಸಲಹೆಯನ್ನೂ ಪಡೆದುಕೊಂಡಿದ್ದೇವೆ. ಶಾಸಕ ಶರತ್ ಕೂಡ ನಮ್ಮ‌ ನಾಯಕರನ್ನು ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿದ್ದಾರೆ. ಇಂದು ರಣದೀಪ್ ಸುರ್ಜೇವಾಲಾ ಅವರನ್ನು ಶರತ್ ಬಚ್ಚೇಗೌಡ ಅವರು ಭೇಟಿ ಮಾಡುತ್ತಾರೆ. ಯಾವಾಗ ಪಕ್ಷ ಸೇರಬೇಕು ಎಂಬುದು ನಂತರ ನಿರ್ಧಾರವಾಗಲಿದೆ. ಈಗಾಗಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಪಕ್ಷ ಸೇರ್ಪಡೆಗೆ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಕೃಷ್ಣಭೈರೇಗೌಡ ಹೇಳಿಕೆ ನೀಡಿದ್ದಾರೆ.

ಸುರ್ಜೆವಾಲಾ ಭೇಟಿ ಬಳಿಕ ನಿಗದಿ

ಸುರ್ಜೆವಾಲಾ ಭೇಟಿ ಬಳಿಕ ನಿಗದಿ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರನ್ನು ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಭೇಟಿ ಮಾಡಲಿದ್ದಾರೆ. ಆ ಬಳಿಕ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂಬ ಮಾಹಿತಿಯಿದೆ. ಈಗಾಗಲೇ ಶರತ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಬೇಕಿತ್ತು. ಕಳೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶರತ್ ಅವರ ಬೆಂಬಲದಿಂದ ಹೊಸಕೋಟೆ ತಾಲೂಕಿನ 26 ಗ್ರಾಮ ಪಂಚಾಯಿತಿಗಳಲ್ಲಿ ಸ್ವಾಭಿಮಾನಿ ಕಾಂಗ್ರೆಸ್ 23 ಗ್ರಾಮ ಪಂಚಾಯಿತಿಗಳಲ್ಲಿ ಜಯಭೇರಿ ಬಾರಿಸಿದೆ. ಹೀಗಾಗಿ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಪಕ್ಷಕ್ಕೂ ಅನಿವಾರ್ಯವಾಗಿದ್ದಾರೆ ಎಂಬಂತಹ ಸ್ಥಿತಿ ನಿರ್ಮಾಣವಾಗಿದೆ.

ಫೆ. 22ರಂದು ಕಾಂಗ್ರೆಸ್ ಸೇರ್ಪಡೆ?

ಫೆ. 22ರಂದು ಕಾಂಗ್ರೆಸ್ ಸೇರ್ಪಡೆ?

ಇದೇ ಫೆಬ್ರುವರಿ 22ರಂದು ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂಬ ಮಾಹಿತಿಯಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶರತ್ 'ಕೈ' ಹಿಡಿಯಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶರತ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಬಳಿಕ ಹೊಸಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದೆ. ಆ ಮೂಲಕ ಮುಂದಿನ ಚುನಾವಣೆ ತಯಾರಿ ಕೂಡ ಆರಂಭವಾಗಲಿದೆ ಎನ್ನಲಾಗಿದೆ.

English summary
Hoskote MLA Sharath Bachegowda will final discussion with state Congress incharge Ranjeep Surjewala about joining the Congress party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X