ಬೆಂಗಳೂರಿನಲ್ಲಿ ಟ್ರಾನ್ಸ್ ಫಾರ್ಮರ್‌ಗಳ ಸ್ಥಳಾಂತರ; ಬೆಸ್ಕಾಂ ಎಂಡಿಗೆ ಬುಲಾವ್!
ಬೆಂಗಳೂರು, ಮಾರ್ಚ್ 31: ಬೆಂಗಳೂರು ಮಹಾನಗರದ ಪಾದಚಾರಿ ಮಾರ್ಗಗಳಲ್ಲಿ ಅಳವಡಿಸಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ಪ್ರಕ್ರಿಯೆ ವಿಳಂಬಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಅಷ್ಟೇ ಅಲ್ಲದೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಗುರುವಾರ ಆದೇಶ ನೀಡಿದೆ.
ನಗರದಲ್ಲಿ ಪಾದಚಾರಿ ಮಾರ್ಗ ಹಾಗೂ ರಾಜಕಾಲುವೆಗಳ ಮೇಲಿರುವ ಟ್ರಾನ್ಸ್ ಫಾರ್ಮರ್ ತೆರವಿಗೆ ಆದೇಶಿಸುವಂತೆ ಕೋರಿ ನಿವೃತ್ತ ವಿಂಗ್ ಕಮಾಂಡರ್ ವಿ.ಜಿ. ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿತು.
ಬೆಸ್ಕಾಂ ವಾದ ಆಲಿಸಿದ ಬಳಿಕ ನ್ಯಾಯಪೀಠ, ಸಾಕಷ್ಟು ಸಮಯಾವಕಾಶ ನೀಡಿದ್ದರೂ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸಿಲ್ಲ. ಇದರಿಂದ, ಸಾರ್ವಜನಿಕರಿಗೆ ಅನನುಕೂಲವಾಗುವ ಜತೆಗೆ ಅವರೇ ಜೀವವನ್ನು ಅಪಾಯಕ್ಕೆ ದೂಡಿದಂತಾಗಿದೆ ಎಂದು ತರಾಟೆಗೆ ತೆಗೆದುಕೊಂಡಿತು.

ಜೊತೆಗೆ ಅರ್ಜಿಯ ಮುಂದಿನ ವಿಚಾರಣೆಗೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಖುದ್ದು ಹಾಜರಾಗಿ ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ವಿಳಂಬಕ್ಕೆ ವಿವರಣೆ ನೀಡಬೇಕು ಎಂದು ತಾಕೀತು ಮಾಡಿ ವಿಚಾರಣೆಯನ್ನು ಏ.7ಕ್ಕೆ ಮುಂದೂಡಿತು.
ಇತ್ತೀಚೆಗೆ ಉಲ್ಲಾಳ ಸಮೀಪದ ಮಂಗನಹಳ್ಳಿಯಲ್ಲಿ ವಿದ್ಯುತ್ ಪರಿವರ್ತಕ ಸ್ಪೋಟಗೊಂಡು ಇಬ್ಬರು ಮೃತಪಟ್ಟ ಘಟನೆಯ ಬಗ್ಗೆ ನ್ಯಾಯಾಲಯ ಬೇಸರ ವ್ಯಕ್ತಪಡಿಸಿದೆ.
ಮೂರು ತಿಂಗಳ ಕಾಲಾವಕಾಶ:
ನಗರದಲ್ಲಿ ಪಾದಚಾರಿ ಮಾರ್ಗಗಳ ಮೇಲಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ತೆರವುಗೊಳಿಸಲು ಬಿಬಿಎಂಪಿ ಮತ್ತು ಬೆಸ್ಕಾಂಗೆ ಹೈಕೋರ್ಟ್ ಕಳೆದ ಸೆ. 15ರಂದು ಮೂರು ತಿಂಗಳ ಕಾಲಾವಕಾಶ ನೀಡಿತ್ತು.
ಬೆಸ್ಕಾಂ ಪರ ವಕೀಲರು, ನಗರದಲ್ಲಿ ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ಮೇಲಿರುವ ಟ್ರಾನ್ಸ್ ಫಾರ್ಮರ್‌ಗಳ ತೆರವು ವಿಚಾರವಾಗಿ ಬೆಸ್ಕಾಂ ಸಲ್ಲಿಸಿರುವ ಪ್ರಮಾಣಪತ್ರವನ್ನು ನ್ಯಾಯಪೀಠಕ್ಕೆ ಒದಗಿಸಿದರು.
ಅಲ್ಲದೆ, ನಗರದ ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ಮೇಲಿರುವ ಟ್ರಾನ್ಸ್‌ಫಾರ್ಮರ್‌ಗಳ ತೆರವುಗೊಳಿಸುವ ಸಂಬಂಧ ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ) ಮನೋಜ್ ಜೈನ್ ಅವರ ನೇತೃತ್ವದ ಬೆಸ್ಕಾಂ ಹಾಗೂ ಪಾಲಿಕೆಯ ಅಧಿಕಾರಿಗಳ ಉನ್ನತಮಟ್ಟದ ಸಮನ್ವಯ ಸಮಿತಿ ರಚಿಸಲಾಗಿದೆ. ಸಮಿತಿಯು ಸೆ.9ರಂದು ಸಭೆ ನಡೆಸಿದ್ದು, ಬಿಬಿಎಂಪಿ ಮತ್ತು ಬೆಸ್ಕಾಂನ ಎಲ್ಲಾ ಮುಖ್ಯ ಎಂಜಿನಿಯರ್‌ಗಳಿಂದ ತರಿಸಿಕೊಂಡ ವರದಿ ಪರಿಶೀಲಿಸಿ ಅಗತ್ಯ ನಿರ್ದೇಶನ ನೀಡಿದೆ ಎಂದು ತಿಳಿಸಿದರು.
ಅಲ್ಲದೆ, ಈಗಾಗಲೇ ನಗರದ ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ಮೇಲಿರುವ ಟ್ರಾನ್ಸ್ ಫಾರ್ಮರ್‌ಗಳನ್ನು ಸರ್ವೇ ನಡೆಸಿದೆ. ಹಾಗೆಯೇ, ಸ್ಥಳಾಂತರಿಸಬಹುದಾದ ಟ್ರಾನ್ಸ್‌ಫಾರ್ಮರ್‌ಗಳನ್ನು ಗುರುತಿಸಲಾಗಿದೆ. ಸ್ಥಳಾಂತರಿಸಲು ಸಾಧ್ಯವಾಗದ ಟ್ರಾನ್ಸ್‌ಫಾರ್ಮರ್‌ಗಳನ್ನು ಹೊಸ ವಿನ್ಯಾಸಕ್ಕೆ (ಸ್ಪನ್ ಪೋಲ್ ಬಳಸಿ ಅಳವಡಿಸುವುದು) ಪರಿವರ್ತಿಸಲು ನಿರ್ಧರಿಸಲಾಗಿದೆ.
ಈಗಾಗಲೇ ಸ್ಥಳಾಂತರ ಕಾರ್ಯವೂ ಆರಂಭಿಸಲಾಗಿದ್ದು, ಅದನ್ನು ಪೂರ್ಣಗೊಳಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಪ್ರಮಾಣ ಪತ್ರವನ್ನು ದಾಖಲಿಸಿಕೊಂಡ ನ್ಯಾಯಪೀಠ, ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ಕಾರ್ಯ ಪೂರ್ಣಗೊಳಿಸಲು ಮೂರು ತಿಂಗಳ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿದ್ದನ್ನು ಇಲ್ಲಿ ಸ್ಮರಿಸಬಹುದು.
Recommended Video
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ










Click it and Unblock the Notifications