ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಟ್ರಾನ್ಸ್ ಫಾರ್ಮರ್‌ಗಳ ಸ್ಥಳಾಂತರ; ಬೆಸ್ಕಾಂ ಎಂಡಿಗೆ ಬುಲಾವ್!

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಮಾರ್ಚ್ 31: ಬೆಂಗಳೂರು ಮಹಾನಗರದ ಪಾದಚಾರಿ ಮಾರ್ಗಗಳಲ್ಲಿ ಅಳವಡಿಸಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ಪ್ರಕ್ರಿಯೆ ವಿಳಂಬಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಅಷ್ಟೇ ಅಲ್ಲದೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಗುರುವಾರ ಆದೇಶ ನೀಡಿದೆ.

ನಗರದಲ್ಲಿ ಪಾದಚಾರಿ ಮಾರ್ಗ ಹಾಗೂ ರಾಜಕಾಲುವೆಗಳ ಮೇಲಿರುವ ಟ್ರಾನ್ಸ್ ಫಾರ್ಮರ್ ತೆರವಿಗೆ ಆದೇಶಿಸುವಂತೆ ಕೋರಿ ನಿವೃತ್ತ ವಿಂಗ್ ಕಮಾಂಡರ್ ವಿ.ಜಿ. ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿತು.

ವಿದ್ಯುತ್ ಟ್ರಾನ್ಸ್ ಫಾರ್ಮರ್ ಸ್ಫೋಟ: ತಂದೆ ಸಾವು, ಸಾವು ಬದುಕಿನಲ್ಲಿ ಮಧುಮಗಳು ! ವಿದ್ಯುತ್ ಟ್ರಾನ್ಸ್ ಫಾರ್ಮರ್ ಸ್ಫೋಟ: ತಂದೆ ಸಾವು, ಸಾವು ಬದುಕಿನಲ್ಲಿ ಮಧುಮಗಳು !

ಬೆಸ್ಕಾಂ ವಾದ ಆಲಿಸಿದ ಬಳಿಕ ನ್ಯಾಯಪೀಠ, ಸಾಕಷ್ಟು ಸಮಯಾವಕಾಶ ನೀಡಿದ್ದರೂ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸಿಲ್ಲ. ಇದರಿಂದ, ಸಾರ್ವಜನಿಕರಿಗೆ ಅನನುಕೂಲವಾಗುವ ಜತೆಗೆ ಅವರೇ ಜೀವವನ್ನು ಅಪಾಯಕ್ಕೆ ದೂಡಿದಂತಾಗಿದೆ ಎಂದು ತರಾಟೆಗೆ ತೆಗೆದುಕೊಂಡಿತು.

Shifting Transformers in Bengaluru; High Court Summons Bescom MD

ಜೊತೆಗೆ ಅರ್ಜಿಯ ಮುಂದಿನ ವಿಚಾರಣೆಗೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಖುದ್ದು ಹಾಜರಾಗಿ ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ವಿಳಂಬಕ್ಕೆ ವಿವರಣೆ ನೀಡಬೇಕು ಎಂದು ತಾಕೀತು ಮಾಡಿ ವಿಚಾರಣೆಯನ್ನು ಏ.7ಕ್ಕೆ ಮುಂದೂಡಿತು.

ಇತ್ತೀಚೆಗೆ ಉಲ್ಲಾಳ ಸಮೀಪದ ಮಂಗನಹಳ್ಳಿಯಲ್ಲಿ ವಿದ್ಯುತ್ ಪರಿವರ್ತಕ ಸ್ಪೋಟಗೊಂಡು ಇಬ್ಬರು ಮೃತಪಟ್ಟ ಘಟನೆಯ ಬಗ್ಗೆ ನ್ಯಾಯಾಲಯ ಬೇಸರ ವ್ಯಕ್ತಪಡಿಸಿದೆ.

ಮೂರು ತಿಂಗಳ ಕಾಲಾವಕಾಶ:

ನಗರದಲ್ಲಿ ಪಾದಚಾರಿ ಮಾರ್ಗಗಳ ಮೇಲಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ತೆರವುಗೊಳಿಸಲು ಬಿಬಿಎಂಪಿ ಮತ್ತು ಬೆಸ್ಕಾಂಗೆ ಹೈಕೋರ್ಟ್ ಕಳೆದ ಸೆ. 15ರಂದು ಮೂರು ತಿಂಗಳ ಕಾಲಾವಕಾಶ ನೀಡಿತ್ತು.
ಬೆಸ್ಕಾಂ ಪರ ವಕೀಲರು, ನಗರದಲ್ಲಿ ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ಮೇಲಿರುವ ಟ್ರಾನ್ಸ್ ಫಾರ್ಮರ್‌ಗಳ ತೆರವು ವಿಚಾರವಾಗಿ ಬೆಸ್ಕಾಂ ಸಲ್ಲಿಸಿರುವ ಪ್ರಮಾಣಪತ್ರವನ್ನು ನ್ಯಾಯಪೀಠಕ್ಕೆ ಒದಗಿಸಿದರು.

ಅಲ್ಲದೆ, ನಗರದ ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ಮೇಲಿರುವ ಟ್ರಾನ್ಸ್‌ಫಾರ್ಮರ್‌ಗಳ ತೆರವುಗೊಳಿಸುವ ಸಂಬಂಧ ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ) ಮನೋಜ್ ಜೈನ್ ಅವರ ನೇತೃತ್ವದ ಬೆಸ್ಕಾಂ ಹಾಗೂ ಪಾಲಿಕೆಯ ಅಧಿಕಾರಿಗಳ ಉನ್ನತಮಟ್ಟದ ಸಮನ್ವಯ ಸಮಿತಿ ರಚಿಸಲಾಗಿದೆ. ಸಮಿತಿಯು ಸೆ.9ರಂದು ಸಭೆ ನಡೆಸಿದ್ದು, ಬಿಬಿಎಂಪಿ ಮತ್ತು ಬೆಸ್ಕಾಂನ ಎಲ್ಲಾ ಮುಖ್ಯ ಎಂಜಿನಿಯರ್‌ಗಳಿಂದ ತರಿಸಿಕೊಂಡ ವರದಿ ಪರಿಶೀಲಿಸಿ ಅಗತ್ಯ ನಿರ್ದೇಶನ ನೀಡಿದೆ ಎಂದು ತಿಳಿಸಿದರು.

ಅಲ್ಲದೆ, ಈಗಾಗಲೇ ನಗರದ ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ಮೇಲಿರುವ ಟ್ರಾನ್ಸ್ ಫಾರ್ಮರ್‌ಗಳನ್ನು ಸರ್ವೇ ನಡೆಸಿದೆ. ಹಾಗೆಯೇ, ಸ್ಥಳಾಂತರಿಸಬಹುದಾದ ಟ್ರಾನ್ಸ್‌ಫಾರ್ಮರ್‌ಗಳನ್ನು ಗುರುತಿಸಲಾಗಿದೆ. ಸ್ಥಳಾಂತರಿಸಲು ಸಾಧ್ಯವಾಗದ ಟ್ರಾನ್ಸ್‌ಫಾರ್ಮರ್‌ಗಳನ್ನು ಹೊಸ ವಿನ್ಯಾಸಕ್ಕೆ (ಸ್ಪನ್ ಪೋಲ್ ಬಳಸಿ ಅಳವಡಿಸುವುದು) ಪರಿವರ್ತಿಸಲು ನಿರ್ಧರಿಸಲಾಗಿದೆ.

ಈಗಾಗಲೇ ಸ್ಥಳಾಂತರ ಕಾರ್ಯವೂ ಆರಂಭಿಸಲಾಗಿದ್ದು, ಅದನ್ನು ಪೂರ್ಣಗೊಳಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.

Recommended Video

ಮರಳಿ ಫಾರ್ಮ್ ಗೆ ಬಂದ ರಾಬಿನ್ ಉತ್ತಪ್ಪ! | Oneindia Kannada

ಪ್ರಮಾಣ ಪತ್ರವನ್ನು ದಾಖಲಿಸಿಕೊಂಡ ನ್ಯಾಯಪೀಠ, ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ಕಾರ್ಯ ಪೂರ್ಣಗೊಳಿಸಲು ಮೂರು ತಿಂಗಳ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
The High Court of Karnataka has directed the Managing Director (MD) of Bangalore Electricity Supply Company Limited (BESCOM) to be present before it on April 7 to explain the inordinate delay in shifting power transformers from public footpaths.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X