ಚನ್ನಪಟ್ಟಣ ಆಯ್ತು ಈಗ ಶಿಗ್ಗಾವಿ ಬೈ ಎಲೆಕ್ಷನ್ ಕಸರತ್ತು: ಮಾಜಿ ಸಿ.ಎಂ ಮಗನಿಗೆ ಟಿಕೆಟ್?
ಚನ್ನಪಟ್ಟಣ ಬೈ ಎಲೆಕ್ಷನ್ ಟಿಕೆಟ್ ನೀಡುವ ವಿಚಾರ ಮೈತ್ರಿ ಪಕ್ಷಗಳಾದ ಬಿಜೆಪಿ -ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಲ್ಲಿ ಒಂದು ಹಂತಕ್ಕೆ ಬಂದಿದೆ. ಚನ್ನಪಟ್ಟಣ ಬೈ ಎಲೆಕ್ಷನ್ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯನ್ನು ಇನ್ನು ಎರಡು ದಿನದಲ್ಲಿ ಘೋಷಿಸುವುದಾಗಿ ಬಿಜೆಪಿ ಹೇಳಿದೆ. ಕಾಂಗ್ರೆಸ್‌ನಿಂದ ನಾನೇ ಸ್ಪರ್ಧೆ ಮಾಡ್ತೀನಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇದೀಗ ಶಿಗ್ಗಾವಿ ಉಪ ಚುನಾವಣಾ ಕಣ ರಂಗೇರುತ್ತಿದೆ.
ಚನ್ನಪಟ್ಟಣದಂತೆ ಶಿಗ್ಗಾವಿಯಲ್ಲೂ ಉಪ ಚುನಾವಣೆ ನಡೆಯಲಿದೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣೆಗೆ ಸ್ಪರ್ಧಿಸಿ ಗೆದಿದ್ದರು. ಅದರ ಬೆನ್ನಲ್ಲೇ ಲೋಕಸಭೆ ಚುನಾವಣೆಗೂ ಸ್ಪರ್ಧಿಸಿ ಗೆದ್ದು, ಸಂಸದರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ, ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನವು ತೆರವಾಗಿದ್ದು, ಈ ಕ್ಷೇತ್ರದಲ್ಲೂ ಉಪ ಚುನಾವಣೆ ನಡೆಯಲಿದೆ. ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬೈ ಎಲೆಕ್ಷನ್ ನಡೆಯಲಿದ್ದು, ಚನ್ನಪಟ್ಟಣದ ನಂತರ ಇದೀಗ ಶಿಗ್ಗಾವಿಯಲ್ಲಿ ಚುನಾವಣಾ ಕಾವು ಜೋರಾಗಿದೆ. ಅಲ್ಲದೇ ಈ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿಯೊಬ್ಬರ ಪುತ್ರ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗಿದೆ.

ಶಿಗ್ಗಾವಿ ಬೈ ಎಲೆಕ್ಷನ್‌ನಲ್ಲಿ ಬೊಮ್ಮಾಯಿ ಪುತ್ರ ಸ್ಪರ್ಧೆ ?
ಶಿಗ್ಗಾವಿ ಬೈ ಎಲೆಕ್ಷನ್‌ನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಮತ್ತು ಉದ್ಯಮಿ ಭರತ್ ಅವರು ಶಿಗ್ಗಾವಿ ಉಪ ಚುನಾವಣಾ ಕಣದಲ್ಲಿ ಸ್ಪರ್ಧಿಸಲು ತೆರೆಮರೆಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಈ ಭಾಗದಲ್ಲಿ ಸಮೀಕ್ಷೆಗಳು ಸಹ ನಡೆದಿವೆ. ಭರತ್ ಬೊಮ್ಮೆಯಿಗೆ ಜನ ಬೆಂಬಲವಿದ್ದು, ಅವರಿಗೆ ಟಿಕೆಟ್ ಕೊಡುವ ಬಗ್ಗೆ ಬಿಜೆಪಿ ಹೈಕಮಾಂಡ್ ನಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎನ್ನಲಾಗುತ್ತಿದೆ.
ಶಿಗ್ಗಾವಿ ಶಾಸಕರಾಗಿ ಆಯ್ಕೆಯಾಗಿದ್ದ ಬಸವರಾಜ ಬೊಮ್ಮಾಯಿ ಅವರು, ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸಂಸದರಾಗಿ ಆಯ್ಕೆಯಾಗಿದ್ದಾರೆ. ಬೊಮ್ಮಾಯಿ ಹಾಗೂ ಭರತ್ ವಿವಿಧ ಸಮುದಾಯ ಹಾಗೂ ವರ್ಗದ ಜನರನ್ನು ಭೇಟಿ ಮಾಡಿ ಮಾತನಾಡುತ್ತಿದ್ದು, ಭರತ್ ಬೈ ಎಲೆಕ್ಷನ್‌ನಲ್ಲಿ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ.
ಕರ್ನಾಟಕದಲ್ಲಿ ಎಲ್ಲೆಲ್ಲೆ ನಡೆಯಲಿದೆ ಉಪಚುನಾವಣೆ
ಕರ್ನಾಟಕದಲ್ಲಿ ಇದೀಗ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ. ಅದರಲ್ಲಿ ಈಗಾಗಲೇ ಹೈವೋಲ್ಟೇಜ್ ಕಣವಾಗಿರುವ ಚನ್ನಪಟ್ಟಣ, ಉತ್ತರ ಕರ್ನಾಟಕದ ಶಿಗ್ಗಾವಿ ಹಾಗೂ ಸಂಡೂರ್ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ.
ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಈ ತುಕರಾಮ್ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದಿದ್ದಾರೆ. ಈ ಮೂರು ನಾಯಕರು ಪ್ರತಿನಿಧಿಸುತ್ತಿದ್ದ ವಿಧಾನಸಭಾ ಕ್ಷೇತ್ರಗಳು ತೆರವಾಗಿವೆ. ಈ ಮೂರು ಕ್ಷೇತ್ರಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಮೂರು ಜನ ಶಾಸಕರಾಗಿ ಆಯ್ಕೆಯಾಗಿ ವಿಧಾನಸಭಾ ಕ್ಷೇತ್ರದಲ್ಲಿ ಈ ಮೂರು ಕ್ಷೇತ್ರಗಳನ್ನು ಪ್ರತಿನಿಧಿಸಿದ್ದರು.












Click it and Unblock the Notifications