ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿರಾ, ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಸಭೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್.01: ಕರ್ನಾಟಕದಲ್ಲಿ ಉಪ ಚುನಾವಣೆ ಕಣ ರಂಗೇರಿದೆ. ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರಿದಿದೆ.

ಶಿರಾ ಮತ್ತು ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಗುರುವಾರ ಭಾರತೀಯ ಜನತಾ ಪಕ್ಷವು ಮಹತ್ವದ ಸಭೆ ನಡೆಸಲಿದೆ. ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸಂಜೆ 5 ಗಂಟೆಗೆ ಕೋರ್ ಕಮಿಟಿ ಸಭೆ ನಡೆಯಲಿದೆ.

ಶಿರಾ ಉಪ ಚುನಾವಣೆ; ಎಲ್ಲಾ ಪಕ್ಷಗಳಿಗೂ ಪರೀಕ್ಷೆಯ ಕಾಲ!ಶಿರಾ ಉಪ ಚುನಾವಣೆ; ಎಲ್ಲಾ ಪಕ್ಷಗಳಿಗೂ ಪರೀಕ್ಷೆಯ ಕಾಲ!

ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಮುನಿರತ್ನರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಇನ್ನೊಂದು ಕಡೆಯಲ್ಲಿ ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಯಾರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಬೇಕು ಎನ್ನುವುದೇ ಸವಾಲಾಗಿದೆ.

Shira, RR Nagar By-Election: BJP Core Committee Meeting For Candidate Selection


ಬೆಂಗಳೂರಿನ ಆರ್ ಆರ್ ನಗರ ವಿಧಾನಸಭೆ:

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮುನಿರತ್ನ ರಾಜೀನಾಮೆಯಿಂದ ಈ ಕ್ಷೇತ್ರದ ತೆರವಾಗಿತ್ತು. ಎರಡು ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮುನಿರತ್ನ ಅವರು ಎರಡೂ ಬಾರಿ ವಿಜಯ ಪತಾಕೆ ಹಾರಿಸಿದ್ದರು. ಈ ಬಾರಿ ಅದೇ ಮುನಿರತ್ನ ಅವರು ಬಿಜೆಪಿ ಅಭ್ಯರ್ಥಿಯಾಗಿ ಕರಣಕ್ಕಿಳಿಯುವ ಸಾಧ್ಯತೆಗಳಿವೆ. ಇನ್ನೊಂದು ಕಡೆ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರವು ಸಂಸದ ಡಿ ಕೆ ಸುರೇಶ್ ಅವರ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಈ ಹಿನ್ನೆಲೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಕೂಡಾ ತೀವ್ರ ಕುತೂಹಲ ಕೆರಳಿಸಿದೆ.

ಶಿರಾ ವಿಧಾನಸಭಾ ಕ್ಷೇತ್ರದ ಕಥೆ:

ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕಾಗಿ ಉಪ ಚುನಾವಣೆ ಘೋಷಿಸಲಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗಬೇಕು ಎನ್ನುವುದರ ಬಗ್ಗೆ ಇಂದಿನ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಮುಂಬರುವ ನವೆಂಬರ್.03ರಂದು ಉಪ ಚುನಾವಣೆಗೆ ಮತದಾನ ನಡೆಯಲಿದೆ.

English summary
Shira, RR Nagar By-Election: BJP Core Committee Meeting For Candidate Selection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X