Get Updates
Get notified of breaking news, exclusive insights, and must-see stories!

ಸರ್ವ ಧರ್ಮದವರ ಪರ ನಿಂತ ಶಿವಾಜಿ ಹೆಸರಲ್ಲಿ ರಾಜಕೀಯ ಸರಿಯಲ್ಲ: ಶಿವರಾಜ್ ತಂಗಡಗಿ

ಬೆಂಗಳೂರು: ಛತ್ರಪತಿ ಶಿವಾಜಿ ಮಹಾರಾಜರ ಅವರ ಆಡಳಿತ ಅವಧಿಯಲ್ಲಿ ಎಲ್ಲಾ ಧರ್ಮದವರಿಗೂ ಧಾರ್ಮಿಕ ಸ್ವಾತಂತ್ರ್ಯ ಇತ್ತು. ರಾಜರಾಗಿ ಅವರು ಎಲ್ಲಾ ಧರ್ಮಗಳ ಪರ ನಿಂತಿದ್ದರು. ಅಂಥಹ ಮಹಾರಾಜರು ಒಂದು ಧರ್ಮಕ್ಕೆ ಮಾತ್ರ ಸೀಮಿತವಾದವರಲ್ಲ. ಅವರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಗೋಸಾಯಿ ಮಹಾಸಂಸ್ಥಾನ ಮಠದ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿದ್ದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.‌

Shivaji Maharaj

ಶಿವಾಜಿ ಮಹಾರಾಜರ ಅವರ ಆಡಳಿತ ಅವಧಿಯಲ್ಲಿ ಎಲ್ಲಾ ಧರ್ಮದವರಿಗೂ ಧಾರ್ಮಿಕ ಸ್ವಾತಂತ್ರ್ಯ ಇತ್ತು. ಸರ್ವ- ಧರ್ಮ ಸಹಿಷ್ಣುತೆಗೆ ಶಿವಾಜಿಯ ಆಡಳಿತ ಮಾದರಿಯಾಗಿತ್ತು. ಎಲ್ಲಾ ಸಮುದಾಯದ ಗೌರವಾನ್ವಿತ ವ್ಯಕ್ತಿಗಳಿಗೆ ಅವರು ತಮ್ಮ ಆಡಳಿತ ವ್ಯವಸ್ಥೆಯಲ್ಲಿ ತೊಡಗಿಸಿದ್ದರು. ಇಂದು ಅವರ ಹೆಸರನ್ನು ಕೇಸರಿಕರಣಗೊಳಿಸುತ್ತಿದ್ದು, ಅದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಪ್ರತಿಯೊಬ್ಬರು ಶಿವಾಜಿ ಅವರ ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳಬೇಕು. ಇಡೀ‌ ದೇಶದಲ್ಲಿ ಶಿವಾಜಿ ಮಹಾರಾಜರು ತನ್ನದೇ ಆದ ಇತಿಹಾಸವನ್ನು ಸೃಷ್ಟಿ ಮಾಡಿದ್ದರು. ಶಿವಾಜಿ ಅವರು ಕರ್ನಾಟಕ ಭಾಷೆ ಹಾಗೂ ರಾಜ್ಯದ ಮೇಲೆ ಅಪಾರವಾದ ಪ್ರೇಮವನ್ನಿರಿಸಿಕೊಂಡಿದ್ದರು. ವಿಜಯನಗರ ಸಾಮ್ರಾಜ್ಯ ಪತನವೇಳೆ ಅದರ ಅವಶೇಷಗಳನ್ನು ಕಂಡು, ಔರಂಗಜೇಬನ ವಿರುದ್ಧ ಧಿಕ್ಕಾರ ಕೂಗಿದ್ದರು ಎಂದು ಸ್ಮರಿಸಿದರು.

ವಿದೇಶಿ ವ್ಯಾಸಂಗದ ಮೊತ್ತು 50 ಲಕ್ಷ ರೂ.ಗೆ ಹೆಚ್ಚಳ

ಇಂದಿನ ಸಂದರ್ಭದಲ್ಲಿ‌ ಸಾಹು ಮಹಾರಾಜರನ್ನು ನಾವು ನೆನೆಯುವ ಅಗತ್ಯವಿದೆ. ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿಯನ್ನು ಜಾರಿಗೆ ತಂದವರು ಸಾಹು ಮಹಾರಾಜರು. ತುಳಿತಕ್ಕೆ ಒಳಗಾದ ಸಮಾಜವನ್ನು ಮೇಲೆತ್ತಿದ್ದ ಮೊಟ್ಟ ಮೊದಲ ರಾಜ ಸಾಹು ಮಹಾರಾಜರು. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ವಿದೇಶಿ ವ್ಯಾಸಂಗ ಮಾಡಲು ನೆರವು ನೀಡಿದ್ದರು. ಹೀಗಾಗಿ ಬಡವರ ಮಕ್ಕಳು ವಿದೇಶಿ ವ್ಯಾಸಂಗಕ್ಕೆ ಮಾಡಲು ನೀಡಲಾಗುತ್ತಿದ್ದ ಮೊತ್ತವನ್ನು ರೂ. 25 ಲಕ್ಷದಿಂದ ರೂ. 50 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.

ಸಾಂಬಾಜಿ ಅವರ ಸಮಾಧಿ‌ ನಾನು ಪ್ರತಿನಿಧಿಸುವ ಕನಕಗಿರಿ ಕ್ಷೇತ್ರದಲ್ಲಿ ಇದೆ ಎಂಬುದನ್ನು ನನ್ನ ಗಮನಕ್ಕೆ ಬಂದಿದೆ.‌ ಖಾಸಗಿ ಸ್ಥಳದಲ್ಲಿ ಸಾಂಬಾಜಿ ಅವರ ಸಮಾಧಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾನೂನು ತೊಡಕ್ಕನ್ನು ಬಗೆಹರಿಸಿಕೊಂಡು ಸಮಾಧಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.‌

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+