ಟ್ರಾಫಿಕ್ ಪೊಲೀಸರಿಂದ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ: ಪ್ರತಿಭಟನೆ

ಬೆಂಗಳೂರು, ಸೆಪ್ಟೆಂಬರ್ 1: ಕ್ಷುಲ್ಲಕ ಕಾರಣಕ್ಕೆ ಟ್ರಾಫಿಕ್ ಪೊಲೀಸ್ ಇನ್‌ಸ್ಪೆಕ್ಟರ್ ಕಾಂಗ್ರೆಸ್ ಮುಖಂಡರೊಬ್ಬರ ಮೇಲೆ ಹಲ್ಲೆ ನಡೆಸಿದ ಕಾರಣಕ್ಕಾಗಿ ನೂರಾರು ಬೆಂಬಲಿಗರು ಹಠಾತ್ ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದಿದೆ.

ಶನಿವಾರ ಟ್ರಾಫಿಕ್ ಇನ್‌ಸ್ಪೆಕ್ಟರ್ ಎಡ್ವಿನ್ ಪ್ರದೀಪ್ ಎಂಬುವವರು ಮಾಜಿ ಸಚಿವ ರೋಷನ್ ಬೇಗ್ ಅವರ ಆಪ್ತ ಎನ್ನಲಾದ ಸಾದಿಕ್ ಎಂಬುವವರ ಜತೆ ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ನಡೆದು ಈ ವೇಳೆ ಇನ್‌ಸ್ಪೆಕ್ಟರ್ ಅವರು ಸಾದಿಕ್ ಮೇಲೆ ಹಲ್ಲೆ ನಡೆಸಿದರು ಎಂಬ ಮಾಹಿತಿ ಲಭ್ಯವಾಗಿದೆ.

Shivaji Nagar tense: Traffic inspector allegedly assault on Congress leader

ವಿಷಯ ತಿಳಿದು ಹಲವಾರು ಕಾಂಗ್ರೆಸ್ ಮುಖಂಡರು ಹಾಗೂ ಸಾದಿಕ್ ಬೆಂಬಲಿಗರು ರಸ್ತೆ ತಡೆದು ಹಠಾತ್ ಪ್ರತಿಭಟನೆ ನಡೆಸಿದರು.ತಪ್ಪಿತಸ್ಥ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದರು. ಇದರಿಂದ ಕೆಲ ಶಿವಾಜಿನಗರ ಪ್ರದೇಶದಲ್ಲಿ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+