ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾನು ಆರಂಭದಿಂದಲೂ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪರವಾಗಿದ್ದೇನೆ!

|
Google Oneindia Kannada News

ಬೆಂಗಳೂರು, ನ. 17: ಬೆಂಗಳೂರು ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಬಂಧನದಿಂದ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆ ಹುಟ್ಟುಹಾಕಿದೆ. ಪುಲಕೇಶಿನ ನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸದ ಮೇಲಿನ ದಾಳಿಗೆ ಸಂಬಂಧಿಸಿದಂತೆ ಸಂಪತ್ ರಾಜ್ ಅವರನ್ನು ವಶಕ್ಕೆ ಪಡೆದು ಸಿಸಿಬಿ ತನಿಖೆ ಮುಂದುವರೆಸಿದೆ.

ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಶಾಸಕ ಶ್ರೀನಿವಾಸಮೂರ್ತಿ ಅವರು ಬಹಿರಂಗವಾಗಿಯೆ ಆಗ್ರಹಿಸಿದ್ದರು. ಅದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇಂಥ ವಿಚಾರಗಳನ್ನು ಬಹಿರಂಗವಾಗಿ ಚರ್ಚೆ ಮಾಡುವುದಲ್ಲ, ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು ಎಂದಿದ್ದರು. ಜೊತೆಗೆ ಶ್ರೀನಿವಾಸಮೂರ್ತಿ ಅವರ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಸಂಪತ್ ರಾಜ್ ಬಂಧನ; ಅಖಂಡ ಶ್ರೀನಿವಾಸ ಮೂರ್ತಿ ಪ್ರತಿಕ್ರಿಯೆ ಏನು?ಸಂಪತ್ ರಾಜ್ ಬಂಧನ; ಅಖಂಡ ಶ್ರೀನಿವಾಸ ಮೂರ್ತಿ ಪ್ರತಿಕ್ರಿಯೆ ಏನು?

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ ಬಳಿಕ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಸೇರಿ ಶಾಸಕರಾಗಿದ್ದಾರೆ. ಇದು ಕೂಡ ಕಾಂಗ್ರೆಸ್ ಪಕ್ಷದ ಕೆಲವರ ಅಸಮಾಧಾನಕ್ಕೆ ಕಾರಣವಾಗಿದೆ. ಇದೀಗ ಸಂಪತ್ ರಾಜ್ ಅವರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.

ಸಂಪತ್ ರಾಜ್ ಆಗಲಿ ಅಥವಾ ಬೇರೆ ಯಾರೇ ಆಗಲಿ ಎಲ್ಲರೂ ಕಾನೂನನ್ನು ಗೌರವಿಸಬೇಕು. ಸರಕಾರ ಕಾನೂನು ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನೂ ನಾವು ನೋಡುತ್ತಿದ್ದೇವೆ. ನಾನು ಆರಂಭದಿಂದಲೂ ಶಾಸಕ ಅಖಂಡ ಅವರ ಪರವಾಗಿದ್ದೇನೆ. ಬೇರೆಯವರ ವೈಯಕ್ತಿಕ ಅಭಿಪ್ರಾಯ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಕೆ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಬಂಧನ ಕುರಿತು ಸದಾಶಿವನಗರ ನಿವಾಸದ ಬಳಿ ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅವರು ನನ್ನೊಂದಿಗೆ ಮಾತನಾಡಿಲ್ಲ

ಅವರು ನನ್ನೊಂದಿಗೆ ಮಾತನಾಡಿಲ್ಲ

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಈವರೆಗೂ ನನ್ನ ಬಳಿ ಬಂದು ಮಾತನಾಡಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ಅದರದೇ ಆದ ಪ್ರಕ್ರಿಯೆ ನಡೆಯುತ್ತಿದೆ. ಕೇವಲ ಒಬ್ಬರ ಅಭಿಪ್ರಾಯದ ಮೇಲೆ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದು ಶ್ರೀನಿವಾಸಮೂರ್ತಿ ಅವರ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ನ್ಯಾಯಬದ್ಧವಾಗಿ, ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವ ಎಲ್ಲರ ಪರವಾಗಿದ್ದೇನೆ. ನಾನು ಅಖಂಡ ಅವರ ಪರವಾಗಿಲ್ಲ ಎಂದು ಯಾರು ಹೇಳಿದರು? ಈ ಪ್ರಕರಣ ನಡೆದ ಕ್ಷಣದಿಂದಲೂ ಅವರ ಜತೆ ಇದ್ದೇವೆ. ನಾನು ನಮ್ಮ ಇತರ ನಾಯಕರು ಅವರ ಮನೆಗೆ ಹೋಗಿದ್ದೇವೆ. ಅವರ ಜತೆ ಚರ್ಚೆ ಮಾಡಿದ್ದೇವೆ. ಪೊಲೀಸರ ವೈಫಲ್ಯ ತೋರಿಸಿದ್ದೇವೆ. ಪೊಲೀಸರು ಬಿಜೆಪಿಯ ಒತ್ತಡಕ್ಕೆ ಮಣಿಯಬಾರದು ಅಂತಲೂ ಹೇಳಿದ್ದೇವೆ ಎಂದರು.

ಸಂಪತ್ ರಾಜ್ ಓಡಿ ಹೋಗಿರಲಿಲ್ಲ

ಸಂಪತ್ ರಾಜ್ ಓಡಿ ಹೋಗಿರಲಿಲ್ಲ

ಅಖಂಡ ಅವರು ಬೇರೆಯವರ ಬಳಿ ಮಾತನಾಡುವುದಕ್ಕಿಂತ ನನ್ನ ಬಳಿ ಬಂದು ಮಾತನಾಡಲಿ. ಯಾರದೇ ವೈಯಕ್ತಿಕ ಅಭಿಪ್ರಾಯ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಇದು ಬಿಜೆಪಿಯವರ ಕುತಂತ್ರ. ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ಹೆಸರು ತರಲು ಈ ಪ್ರಯತ್ನ ಮಾಡುತ್ತಿದೆ. ಸಂಪತ್‌ರಾಜ್ ಅವರನ್ನು ಟಾರ್ಗೆಟ್ ಮಾಡುತ್ತಿರುವುದು ನಿಜ. ಇದರಲ್ಲಿ ಮುಚ್ಚಿಡುವುದೇನಿಲ್ಲ.

ಅವರ ವಿರುದ್ಧದ ಆರೋಪ ಪಟ್ಟಿ ನೋಡಿದ್ದೇನೆ. ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕರಿಗೆ ತೊಂದರೆ ನೀಡಬೇಕು ಅಂತಾ ಈ ರೀತಿ ಮಾಡುತ್ತಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವ ಕಾರಣ ಹೆಚ್ಚಾಗಿ ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. ಸಂಪತ್ ರಾಜ್ ಎಲ್ಲಿಯೂ ಓಡಿ ಹೋಗಿರಲಿಲ್ಲ. ಅವರಿಗೆ ಆರೋಗ್ಯ ಸಮಸ್ಯೆ ಇತ್ತು. ಈಗ ಅವರು ಸಿಕ್ಕಿದ್ದಾರಲ್ಲ? ಎಂದು ಬಂಧನದ ಕುರಿತು ತಮ್ಮ ಹೇಳಿಕೆಯನ್ನು ಡಿಕೆಶಿ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಇನ್ನು ಹಲವು ವುಚಾರಗಳ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ಡಿಕೆ ಶಿವಕುಮಾರ್ ನೀಡಿದ್ದಾರೆ.

ಭತ್ತಕ್ಕೆ ಹೆಚ್ಚುವರಿ ಬೆಂಬಲ ಬೆಲೆ ಕೊಡಲಿ

ಭತ್ತಕ್ಕೆ ಹೆಚ್ಚುವರಿ ಬೆಂಬಲ ಬೆಲೆ ಕೊಡಲಿ

ಭತ್ತದ ಬೆಲೆ ಕುಸಿತದ ಬಗ್ಗೆ ನಾವು ಚರ್ಚೆ ನಡೆಸುತ್ತಿದ್ದೇವೆ. 900 ರೂಪಾಯಿಗೆ ಕುಸಿದಿದ್ದರೂ ಸರ್ಕಾರ ಆ ಬಗ್ಗೆ ಗಮನ ಹರಿಸುತ್ತಿಲ್ಲ. ಹೀಗಾಗಿ ರೈತರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲುತ್ತೇವೆ. ಭತ್ತ ಖರೀದಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಈ ಸಮಯದಲ್ಲಿ ಸರ್ಕಾರ ಭತ್ತಕ್ಕೆ ಹೆಚ್ಚುವರಿಯಾಗಿ ಕನಿಷ್ಠ 500 ರೂಪಾಯಿ ಬೆಂಬಲ ಬೆಲೆ ಘೋಷಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಒತ್ತಾಯ ಮಾಡುತ್ತೇವೆ ಎಂದು ಡಿಕೆಶಿ ಹೇಳಿದ್ದಾರೆ.

ವಿದ್ಯಾರ್ಥಿಗಳ ರಕ್ಷಣೆ ಸರ್ಕಾರದ ಹೊಣೆ

ವಿದ್ಯಾರ್ಥಿಗಳ ರಕ್ಷಣೆ ಸರ್ಕಾರದ ಹೊಣೆ

ಸರ್ಕಾರ ಸಾಕಷ್ಟು ವಿಮರ್ಶೆ ಮಾಡಿ ಕಾಲೇಜು ಆರಂಭದ ತೀರ್ಮಾನ ಕೈಗೊಂಡಿದೆ. ಸರ್ಕಾರಕ್ಕೆ ನಮ್ಮ ಸಲಹೆ ನೀಡಿದ್ದೇವೆ. ಅವರು ಏನು ಮಾಡುತ್ತಾರೋ ಮಾಡಲಿ. ಶಾಲೆ ಇರಲಿ ಅಥವಾ ಕಾಲೇಜ್ ಇರಲಿ ಪೋಷಕರಿಗೆ ನೆಮ್ಮದಿ, ಮಾರ್ಗದರ್ಶನ ನೀಡಬೇಕಿರುವುದು ಸರ್ಕಾರದ ಕರ್ತವ್ಯ.

ಮರಾಠ ಪ್ರಾಧಿಕಾರ ವಿಚಾರವಾಗಿ ಪಕ್ಷದಲ್ಲಿ ಚರ್ಚೆ ನಡೆಸಬೇಕಿದೆ. ಇನ್ನು ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗುವುದಿದೆ. ಬಸವಕಲ್ಯಾಣ, ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯೂ ಬರುತ್ತಿದ್ದು, ನಾವು ಪ್ರಮುಖವಾಗಿ ರೈತರ ಸಮಸ್ಯೆ ಪರಿಹಾರ ಹಾಗೂ ಅವರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲುತ್ತೇವೆ ಎಂದಿದ್ದಾರೆ.

Recommended Video

Nike ಬಿಟ್ಟು MPLಗೆ ಇನ್ಮುಂದೆ ಟೀಮ್ ಇಂಡಿಯಾದ ಉಡುಪುಗಳ ಜವಾಬ್ದಾರಿ | Oneindia Kannada

English summary
KPCC President D.K. Shivakumar on Novemeber 17 defended his party following the arrest of former mayor Sampath Raj in connection with the August Bengaluru riots. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X