ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಹರ್ಷ ಕೊಲೆ ಪ್ರಕರಣ ಎನ್‌ಐಎ ಚಾರ್ಚ್‌ಶೀಟ್ ಸಲ್ಲಿಕೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್, 03: ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಕೇಸ್ ಇಡೀ ರಾಜ್ಯದಲ್ಲಿ ಸಂಚಲನವನ್ನುಂಟು ಮಾಡಿತ್ತು. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿಯೇ ತೆಗೆದುಕೊಂಡಿತ್ತು. ಪ್ರಾಥಮಿಕ ತನಿಖೆಯನ್ನು ನಡೆಸಿದ ನಂತರ ತನಿಖೆಯ ಜವಾಬ್ದಾರಿಯನ್ನು ರಾಷ್ಟ್ರೀಯ ತನಿಖಾ ದಳದ ಹೆಗಲಿಗೆ ಹಾಕಿತ್ತು. ಇದೀಗ ಎನ್ ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ್ದು. ರಾಜ್ಯದಲ್ಲಿ ಅಲ್ಲೋಲ ಕಲ್ಲೋಲವನ್ನುಂಟು ಮಾಡಿತ್ತು. ಹಿಂದೂಗಳಿಗೆ ರಕ್ಷಣೆಯಿಲ್ಲ ಎಂಬ ಕೂಗು ಕೇಳಿಬಂದಿತ್ತು. ಸಚಿವರಾಗಿದ್ದ ಈಶ್ವರಪ್ಪ ಸ್ವತಃ ಹರ್ಷ ಸಾವಿನಿಂದ ಉಂಟಾಗಿದ್ದ ಪ್ರಕ್ಷುಬ್ಧ ವಾತಾವರಣದಲ್ಲಿಯೂ ಶವ ಮೆರವಣಿಗೆಯನ್ನು ಮಾಡಿದ್ದರು.

ಸರ್ಕಾರ ಹರ್ಷನ ಕೊಲೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿತ್ತು. ಇದಕ್ಕಾಗಿಯೇ ಹರ್ಷನ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ( ಎನ್‌ಐಎ)ಗೆ ವಹಿಸಲಾಗಿತ್ತು. ಆದರೆ ಎನ್‌ಐಎ ತನಿಖೆ ವೇಳೆ ಆತಂಕದ ಮಾಹಿತಿ ಬೆಳಕಿಗೆ ಬಂದಿದ್ದು, ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ‌. ಅಷ್ಟಕ್ಕೂ ಎಷ್ಟು ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ ಎಂಬುದರ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ.

 750 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

750 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಫೆಬ್ರವರಿ 20 ರಂದು ರಾತ್ರಿ ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಕೇಸ್, ರಾಜಕೀಯ ವಲಯದಲ್ಲೇ ಭಾರಿ ಸಂಚಲನವನ್ನುಂಟು ಮಾಡಿತ್ತು. ಹಿಜಾಬ್ ವಿವಾದದ ಮಧ್ಯೆಯೇ ನಡೆದ ಹತ್ಯೆ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ತನಿಖೆ ನಡೆಸಿ ಆರೋಪಿಗಳನ್ನ ಬಂಧಿಸಿತ್ತು. ಈ ಮಧ್ಯೆಯೇ ಸರ್ಕಾರ ಎನ್ ಐಎಗೆ ಸರ್ಕಾರ ಕೇಸ್ ಹಸ್ತಾಂತರಿಸಿತ್ತು. ಸದ್ಯ ತನಿಖೆ ಕೈಗೊಂಡಿದ್ದ ಎನ್‌ಐಎ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ 750 ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ನ್ನು ಸಲ್ಲಿಕೆ ಮಾಡಿದ್ದಾರೆ.

 ಹರ್ಷನನ್ನು ಹತ್ಯೆ ಮಾಡಲು ಹದಿನೈದು ದಿನ ಸ್ಕೆಚ್

ಹರ್ಷನನ್ನು ಹತ್ಯೆ ಮಾಡಲು ಹದಿನೈದು ದಿನ ಸ್ಕೆಚ್

ಎನ್ ಐ ಎ ವಿಶೇಷ ನ್ಯಾಯಾಲಯಕ್ಕೆ ಹತ್ತು ಮಂದಿ ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಇನ್ನು ದೋಷಾರೋಪಣೆ ಪಟ್ಟಿಯಲ್ಲಿ ಆರೋಪಿಗಳಿಗೆ ಹಿಂದೂ ಸಂಘಟನೆಯ ಕಾರ್ಯಕರ್ತನ ಹತ್ಯೆ ಮಾಡೋದು ಉದ್ದೇಶ ಆಗಿತ್ತು. ಪ್ಲಾನ್ ಮಾಡಿಕೊಂಡು ಹದಿನೈದು ದಿನದಿಂದ ಹರ್ಷನ ಹತ್ಯೆಗೆ ಕಾದು ಕುಳಿತುಕೊಂಡಿದ್ದರು. ಹರ್ಷ ಹಿಂದೂ ಸಂಘಟನೆಯಲ್ಲಿ ಆಕ್ಟೀವ್ ಇದ್ದು, ಹಳೆಯ ದ್ವೇಷ ಇಟ್ಟುಕೊಂಡು ಹತ್ಯೆ ಮಾಡೋಕೆ ಪ್ರಕರಣದ ಎ1 ಆರೋಪಿ ಆಯ್ಕೆ ಮಾಡಿದ್ದ. ಇದಲ್ಲದೆ ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿದ್ದು ತಮಗೆ ವಿರೋಧಿಯಾಗಿರೋ ಹರ್ಷ ಕೊಲೆ ಮಾಡುವ ಮೂಲಕ ಜಿಲ್ಲೆಯಲ್ಲಿ ಭಯ ಹುಟ್ಟಿಸೋದು ಆರೋಪಿಗಳ ಉದ್ದೇಶ ಆಗಿತ್ತು ಎಂಬುದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ.

 ಕೋಮು ಸೌಹಾರ್ದತೆ ಕದಡುವ ಉದ್ದೇಶ

ಕೋಮು ಸೌಹಾರ್ದತೆ ಕದಡುವ ಉದ್ದೇಶ

ಎನ್ ಐ ಎ ಅಧಿಕಾರಿಗಳು ಬಂಧಿತ 10 ಮಂದಿ ಆರೋಪಿಗಳ ಹೇಳಿಕೆಗಳ ಜೊತೆ ತಾಂತ್ರಿಕ ಸಾಕ್ಷ್ಯಗಳನ್ನ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯದ ತನಿಖೆಯಲ್ಲಿ ಆರೋಪಿಗಳು ಕೋಮುಸೌಹಾರ್ದತೆ ಕದಡುವುದರ ಜೊತೆಗೆ ಗಲಾಟೆಯನ್ನುಂಟು ಮಾಡುವುದು ಉದ್ದೇಶದ ವಿಚಾರ ಬೆಳಕಿಗೆ ಬಂದಿದೆ‌.ಇನ್ನೂ ತನಿಖೆ ಮುಂದುವರೆದಿದ್ದು, ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ‌.

 ಹಿಂದೂ ಕಾರ್ಯಕರ್ತನ ಕೊಲೆಯ ಉದ್ದೇಶ

ಹಿಂದೂ ಕಾರ್ಯಕರ್ತನ ಕೊಲೆಯ ಉದ್ದೇಶ

ಹರ್ಷ ಸಕ್ರಿಯ ಹಿಂದೂ ಕಾರ್ಯಕರ್ತನಾಗಿದ್ದನು. ಶಿವಮೊಗ್ಗ ಕೋಮು ಸೂಕ್ಷ್ಮ ಪ್ರದೇಶವಾಗಿದ್ದರಿಂದ ಹಿಂದೂವನ್ನು ಕೊಂದರೇ ಭಯದ ವಾತಾವರಣ ನಿರ್ಮಾಣ ಮಾಡಬಹುದು ಎಂದು ದುಷ್ಟರ ಕೂಟ ಒಗ್ಗಟ್ಟಾಗಿತ್ತು. ಇದರಿಂದಲೇ ಹರ್ಷನನ್ನು ಹದಿನೈದು ದಿನಗಳ ಕಾಲ ಗಮನಿಸಿ ಕೊಲೆಯನ್ನು ಮಾಡಲಾಗಿದೆ. ಮೊದಲ ಚಾರ್ಚ್‌ ಶೀಟ್ ಸಲ್ಲಿಕೆಯಾಗಿದ್ದು ತನಿಖೆಯನ್ನು ಮುಂದುವರೆಸಲಾಗಿದೆ.

English summary
The Bajrang Dal activist Harsha's murder case in Shimoga had created a stir in the entire state. The state government had taken the case seriously. After conducting the preliminary investigation, the responsibility of the investigation was placed on the shoulders of the National Investigation Agency. Now the NIA officials have submitted the charge sheet to the court, Know More,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X