ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಎಪಿಯ ಶಿವಾನಂದ ಸರ್ಕಲ್ ಸ್ಟೀಲ್ ಬ್ರಿಡ್ಜ್ ಪ್ರತಿಭಟನೆ: ಕೋರ್ಟ್‌ನಿಂದ ಸಮನ್ಸ್ ಜಾರಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 27: ಬೆಂಗಳೂರಿನ ಶಿವಾನಂದ ವೃತ್ತದ ಸ್ಟೀಲ್‌ ಬ್ರಿಡ್ಜ್‌ನಲ್ಲಿನ ಕಳಪೆ ಕಾಮಗಾರಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಆಮ್‌ ಆದ್ಮಿ ಪಾರ್ಟಿ ಮುಖಂಡರ ವಿರುದ್ಧ ಪೊಲೀಸ್‌ ಇಲಾಖೆಯು ಪ್ರಕರಣ ದಾಖಲಿಸಿಕೊಂಡಿತ್ತು. ಇದೀಗ ಎಸಿಎಂಎಂ ನ್ಯಾಯಾಲಯದ ಸಮನ್ಸ್‌ ಜಾರಿಗೊಳಿಸಿದೆ.

ಬಿಬಿಎಂಪಿಯೇ ಕಾಮಗಾರಿಯಲ್ಲಿ ಸಣ್ಣಪುಟ್ಟ ಲೋಪದೋಷವಾಗಿದ್ದನ್ನು ಒಪ್ಪಿಕೊಂಡಿತ್ತು. ಸ್ಟೀಲ್ ಬ್ರಿಡ್ಜ್‌ ನಿರ್ಮಾಣದಿಂದಾಗಿ ಜನರಿಗೆ ಸಾಕಷ್ಟು ಅನುಕೂಲವಾಗಿದ್ದರು. ಕಾಮಗಾರಿಯಲ್ಲಿನ ಲೋಪ ದೋಷಗಳಿಗೆ ಸಂಬಂಧಿಸಿದಂತೆ ಆಮ್‌ ಆದ್ಮಿ ಚಕಾರವನ್ನು ಎತ್ತಿತ್ತು. ಬ್ರಿಡ್ಜ್‌ ಕಾಮಾಗಾರಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರವಾದ ಆರೋಪವನ್ನು ಮಾಡಲಾಗಿತ್ತು.

ಶಿವಾನಂದ ಸ್ಟೀಲ್‌ ಬ್ರಿಡ್ಜ್‌ನಲ್ಲಿ ಹಲವು ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಆಗಸ್ಟ್‌ 29, 2022ರಂದು ಆಮ್‌ ಆದ್ಮಿ ಪಾರ್ಟಿ ಮುಖಂಡರು '40% ಕಮಿಷನ್‌ ಮೇಲ್ಸೇತುವೆ' ಹೆಸರಿನಲ್ಲಿ ವಿನೂತನ ಪ್ರತಿಭಟನೆ ನಡೆಸಿದ್ದರು. ಇದರಲ್ಲಿ ಭಾಗವಹಿಸಿದ್ದ ಕರ್ನಾಟಕ ಆಮ್‌ ಆದ್ಮಿ ಪಕ್ಷದ ಮುಖಂಡರಾದ ಮೋಹನ್‌ ದಾಸರಿ, ಜಗದೀಶ್‌ ವಿ ಸದಂ, ಸುರೇಶ್‌ ರಾಥೋಡ್‌, ಕುಶಲ ಸ್ವಾಮಿ , ಚನ್ನಪ್ಪಗೌಡ ನೆಲ್ಲೂರು, ಉಷಾ ಮೋಹನ್‌, ಶಾಶಾವಲಿ ಸೇರಿದಂತೆ ಒಟ್ಟು 18 ನಾಯಕರ ವಿರುದ್ಧ ಸಮನ್ಸ್‌ ಜಾರಿಯಾಗಿದೆ.

ಈ ನಡುವೆ ಬೆಂಗಳೂರಿನ ವಾಹನ ಸವಾರರಿಗೆ ಗುಣಮಟ್ಟದ ರಸ್ತೆ ಕಲ್ಪಿಸಿಕೊಡಲು ಬಿಜೆಪಿ ವಿಫಲವಾಗಿದೆ. ಹೀಗಿದ್ದರೂ ನೂತನ ಪಾರ್ಕಿಂಗ್‌ ನೀತಿ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಆಮ್‌ ಆದ್ಮಿ ಪಕ್ಷ ಹೋರಾಟ ನಡೆಸಿದೆ.

 ಬಿಜೆಪಿಗೆ ಆಮ್‌ ಆದ್ಮಿ ಪಾರ್ಟಿಯ ಭಯ

ಬಿಜೆಪಿಗೆ ಆಮ್‌ ಆದ್ಮಿ ಪಾರ್ಟಿಯ ಭಯ

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ, "ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಅವ್ಯವಹಾರವನ್ನು ಪ್ರಶ್ನಿಸುವ ಹಾಗೂ ಅದರ ವಿರುದ್ಧ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ರಾಜ್ಯದ ಭ್ರಷ್ಟ ಬಿಜೆಪಿ ಸರ್ಕಾರವು ಪೊಲೀಸ್‌ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವದ ಕತ್ತು ಹಿಸುಕುವ ಪ್ರಯತ್ನ ಮಾಡುತ್ತಿದೆ. ನಾವು ಶಾಂತಿಯುತವಾಗಿ ಪ್ರತಿಭಟನೆ ಮಾಡಿದ್ದರೂ ಮೊಕದ್ದಮೆ ದಾಖಲಿಸಿಕೊಂಡಿರುವುದು ಖಂಡನೀಯ. ರಾಜ್ಯ ಬಿಜೆಪಿಯು ಆಮ್‌ ಆದ್ಮಿ ಪಾರ್ಟಿಯ ಭಯದಿಂದ ಬಳಲುತ್ತಿರುವುದು ಇದರಿಂದ ಸ್ಪಷ್ಟವಾಗಿದೆ" ಎಂದು ಹೇಳಿದರು.

 ಸಮನ್ಸ್‌ಗೆ ಬೆದರಲ್ಲ ಎಂದ ಎಎಪಿ

ಸಮನ್ಸ್‌ಗೆ ಬೆದರಲ್ಲ ಎಂದ ಎಎಪಿ

ಶಿವಾನಂದ ಸ್ಟೀಲ್ ಬ್ರೀಡ್ಜ್ ಗೆ ಸಂಬಂಧಿಸಿದಂತೆ '40% ಕಮಿಷನ್‌ ಮೇಲ್ಸೇತುವೆ' ಹೆಸರಿನಲ್ಲಿ ವಿನೂತನ ಪ್ರತಿಭಟನೆ ನಡೆಸಿದ್ದರು. ಇದರಲ್ಲಿ ಭಾಗವಹಿಸಿದ್ದ ಕರ್ನಾಟಕ ಆಮ್‌ ಆದ್ಮಿ ಪಕ್ಷದ ಮುಖಂಡರಾದ ಮೋಹನ್‌ ದಾಸರಿ, ಜಗದೀಶ್‌ ವಿ ಸದಂ, ಸುರೇಶ್‌ ರಾಥೋಡ್‌, ಕುಶಲ ಸ್ವಾಮಿ , ಚನ್ನಪ್ಪಗೌಡ ನೆಲ್ಲೂರು, ಉಷಾ ಮೋಹನ್‌, ಶಾಶಾವಲಿ ಸೇರಿದಂತೆ ಒಟ್ಟು 18 ನಾಯಕರ ವಿರುದ್ಧ ಸಮನ್ಸ್‌ ಜಾರಿಯಾಗಿದೆ. ಬಿಜೆಪಿಯ ಪೊಲೀಸರ ಮೂಲಕ ಪ್ರಕರಣ ದಾಖಲಿಸಿದ್ದಾರೆ. ನಾವು ಇದಕ್ಕೆಲ್ಲಾ ಹೆದರಲ್ಲ ಹೋರಾಡುತ್ತೇವೆ ಎಂದ ಎಎಪಿ ಸ್ಪಷ್ಟ ಪಡಿಸಿದೆ.

 ಅವೈಜ್ಞಾನಿಕ ಹಂಪುಗಳನ್ನು ನಿರ್ಮಾಣ

ಅವೈಜ್ಞಾನಿಕ ಹಂಪುಗಳನ್ನು ನಿರ್ಮಾಣ

"ಶಿವಾನಂದ ವೃತ್ತದ ಸ್ಟೀಲ್‌ ಸೇತುವೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ ಕಳಪೆ ಗುಣಮಟ್ಟದ ಬೇರಿಂಗ್, ಶಾಕ್‌ ಅಬ್ಸರ್ವರ್‌ ಬಳಸಿ ನಿರ್ಮಿಸಿರುವ ಅನುಮಾನ ಮೂಡುತ್ತದೆ. ಸೇತುವೆಯಲ್ಲಿ ಸುಮಾರು 20 ಮೀಟರ್‌ಗೊಮ್ಮೆ ಜಾಯಿಂಟ್‌ಗಳಿದ್ದು, ಅಲ್ಲಿ ವಾಹನ ಸವಾರರಿಗೆ ಕಿರಿಕಿರಿಯಾಗುವಂತಹ ಅವೈಜ್ಞಾನಿಕ ಹಂಪುಗಳನ್ನು ನಿರ್ಮಿಸಲಾಗಿದೆ" ಎಂದು ಮೋಹನ್ ದಾಸರಿ ತಿಳಿಸಿದ್ದಾರೆ.

 ಅಕ್ರಮವನ್ನು ಮುಚ್ಚಿಡುವ ಪ್ರಯತ್ನ

ಅಕ್ರಮವನ್ನು ಮುಚ್ಚಿಡುವ ಪ್ರಯತ್ನ

"ಶಿವಾನಂದ ಸ್ಟೀಲ್ ಬ್ರೀಡ್ಜ್ ಮೇಲೆ ಲಘು ವಾಹನ ಸಂಚರಿಸಿದರೂ ಸೇತುವೆಯು ವೈಬ್ರೇಟ್‌ ಆಗುತ್ತಿದೆ. ಕಳಪೆ ಕಾಮಗಾರಿಯಿಂದಾಗಿ ದೋಷ ಕಂಡುಬಂದ ಹಿನ್ನೆಲೆಯಲ್ಲೊ ಸ್ಟೀಲ್‌ ಬ್ರಿಡ್ಜ್‌ ಮೇಲಿನ ಸಂಚಾರಕ್ಕೆ ಸರ್ಕಾರವೇ ನಿರ್ಬಂಧ ಹೇರಿದೆ. ಇದರ ವಿರುದ್ಧ ದನಿ ಎತ್ತಿದ್ದಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದು ಅಕ್ರಮವನ್ನು ಮುಚ್ಚಿಡುವ ಪ್ರಯತ್ನ" ಎಂದು ಮೋಹನ್‌ ದಾಸರಿ ಹೇಳಿದರು.

English summary
The police department had registered a case against the Aam Aadmi Party leaders who had protested against the poor work on the steel bridge in Shivananda Circle, Bengaluru. Now VII ACMM court summons has been issued, Know More,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X