Property Tax: ಬೆಂಗಳೂರಿನ 6 ಲಕ್ಷ ಆಸ್ತಿದಾರರಿಗೆ ಕಾದಿದೆ ಶಾಕ್: ಡಿ.ಕೆ ಶಿವಕುಮಾರ್ ವಾರ್ನಿಂಗ್!
Property Tax: ಬೆಂಗಳೂರಿನ ಆಸ್ತಿದಾರರು ಹಾಗೂ ಅಕ್ರಮ ಕಟ್ಟಡಗಳನ್ನು ನಿರ್ಮಾಣ ಮಾಡಿರುವವರಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶಾಕ್ ಕೊಟ್ಟಿದ್ದಾರೆ. ಅಲ್ಲದೇ ಇದರೊಂದಿಗೆ ಬೆಂಗಳೂರಿನ ಕೆಲವು ಆಸ್ತಿದಾರರಿಗೂ ಶಾಕ್ ನೀಡಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕಳೆದ ವರ್ಷಗಳಿಗಿಂತ ಈ ಬಾರಿ ಆಸ್ತಿದಾರರಿಂದ ಪರಿಣಾಮಕಾರಿಯಾಗಿ ಆಸ್ತಿ ತೆರಿಗೆ ಸಂಗ್ರಹ ಮಾಡುವುದಕ್ಕೆ ಮುಂದಾಗಿದೆ. ಇದಕ್ಕಾಗಿ ಇ ಖಾತಾ ಹಾಗೂ ಒಟಿಎಸ್‌ನಂತಹ ಪ್ರಮುಖ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಆದರೆ, ಆಸ್ತಿದಾರರಿಗೆ ಅನುಕೂಲ ಮಾಡಿಕೊಟ್ಟರೂ ಕೆಲವು ಆಸ್ತಿದಾರರು ಆಸ್ತಿ ತೆರಿಗೆ ಪಾವತಿ ಮಾಡುತ್ತಿಲ್ಲ ಎಂದು ಡಿ.ಕೆ ಶಿವಕುಮಾರ್ ಅವರು ಗರಂ ಆಗಿದ್ದಾರೆ. ಅಲ್ಲದೇ ವಾರ್ನಿಂಗ್ ಸಹ ಮಾಡಲಾಗಿದೆ.
ಬೆಂಗಳೂರಿನಲ್ಲಿ ಈ ಹಿಂದೆ ಅಂದಾಜು 7 ಲಕ್ಷ ಮನೆಗಳು / ಆಸ್ತಿದಾರರು ಆಸ್ತಿ ತೆರಿಗೆ ಕಟ್ಟಿರಲಿಲ್ಲ. ಇದೀಗ ಓಟಿಎಸ್ ಹಾಗೂ ಇ - ಖಾತಾ ಯೋಜನೆಗಳನ್ನು ಜಾರಿ ಮಾಡಿದ ಮೇಲೆ 1 ಲಕ್ಷ ಆಸ್ತಿದಾರರು (ಮನೆಗಳು) ಆಸ್ತಿ ತೆರಿಗೆ ವ್ಯಾಪ್ತಿಗೆ ಸೇರ್ಪಡೆಯಾಗಿವೆ. ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ. ಇದೇ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓ.ಟಿ.ಎಸ್) ಮಾಡಿಕೊಡಲಾಯಿತು. ಅಕ್ರಮ ಕಟ್ಟಡಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಈಚೆಗೆ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರ ಮಾಡಲಾಗಿದೆ . ಜೊತೆಗೆ ಕಂದಾಯ ಬಡಾವಣೆಗಳಲ್ಲಿ ಇರುವ ಖಾಸಗಿ ರಸ್ತೆಗಳನ್ನೂ ಸಹ ಸರ್ಕಾರಿ ರಸ್ತೆಗಳು ಎಂದು ಘೋಷಣೆ ಮಾಡುವುದಾಗಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಅಕ್ರಮ ಕಟ್ಟಡಗಳಿಗೆ ಸಂಕಷ್ಟ: ಇನ್ನು ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿರುವ ಆಸ್ತಿದಾರರಿಗೆ ಈಗ ಭಾರೀ ದೊಡ್ಡ ಸಂಕಷ್ಟ ಎದುರಾಗಿದೆ. ನಗರದಲ್ಲಿ ಉತ್ತಮ ತೆರಿಗೆ ಸಂಗ್ರಹವಾಗಬೇಕು. ಆದರೆ, ಕೆಲವರು ಆಸ್ತಿ ತೆರಿಗೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ನಗರದಲ್ಲಿ ನೀರು ಹಾಗೂ ರಸ್ತೆ ಸೇರಿದಂತೆ ಅನೇಕ ಮೂಲಸೌಕರ್ಯಗಳನ್ನು ನೀಡಿದ್ದೇವೆ. ಆದರೆ ಹಲವರು ಆಸ್ತಿದಾರರು ಇದಕ್ಕೆ ತಕ್ಕಂತೆ ತೆರಿಗೆ ಪಾವತಿ ಮಾಡುತ್ತಿಲ್ಲ. ಅಲ್ಲದೇ ಬಿಬಿಎಂಪಿಯಿಂದ ಅನುಮತಿ ನೀಡಿದ್ದಕ್ಕಿಂತ ಹೆಚ್ಚು ವಿಸ್ತೀರ್ಣದ ಹಾಗೂ ಮಹಡಿಗಳನ್ನು ಅಕ್ರಮವಾಗಿ ಕಟ್ಟಿಕೊಂಡಿದ್ದಾರೆ.
ಬೆಂಗಳೂರಿನಲ್ಲಿರುವ ಈ ರೀತಿಯ ಅಕ್ರಮ ಕಟ್ಟಡಗಳನ್ನು ಎ.ಐ ತಂತ್ರಜ್ಞಾನದ ಮೂಲಕ ಪತ್ತೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುವುದು. ಇದರಿಂದ ಕಟ್ಟಡವನ್ನು ಎಷ್ಟು ವಿಸ್ತೀರ್ಣ, ಎತ್ತರ ಕಟ್ಟಿದ್ದಾರೆ ಎಂಬುದು ತಿಳಿಯುತ್ತದೆ. ಜತೆಗೆ ಪ್ರತಿಯೊಂದು ಮನೆಯ ದಾಖಲೆಯೂ ಸಿಗುತ್ತದೆ ಎಂದು ಅವರು ಹೇಳಿದ್ದಾರೆ.

ಬಿಬಿಎಂಪಿಯು ಇ ಖಾತಾ ಜಾರಿ ಮಾಡಿದ ಮೇಲೆ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗೆ ಉಳಿದವರು ಹಾಗೂ ಇಲ್ಲಿಯ ವರೆಗೆ ಯಾವುದೇ ಖಾತಾವನ್ನು ಮಾಡಿಸಿಕೊಳ್ಳದೆ ಇರುವವರು ಖಾತಾ ಮಾಡಿಸಿಕೊಳ್ಳುತ್ತಿದ್ದಾರೆ. ಅಂದಾಜು 7ರಿಂದ 8 ಲಕ್ಷ ಆಸ್ತಿಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗೆ ಉಳಿದಿವೆ ಎಂದು ಬಿಬಿಎಂಪಿಯ ಕಂದಾಯ ವಿಭಾಗದ ಅಧಿಕಾರಿಗಳು ಅಂದಾಜಿಸಿದ್ದರು. 1 ಲಕ್ಷ ಆಸ್ತಿದಾರರು ಸೇರ್ಪಡೆ ಆಗಿರುವುದರಿಂದ ಬಿಬಿಎಂಪಿಗೆ ಪ್ರತಿ ವರ್ಷ 1 ಕೋಟಿಗೂ ಹೆಚ್ಚು ಆದಾಯ ಹೆಚ್ಚುವರಿ ಸಂಗ್ರಹವಾಗುವ ನಿರೀಕ್ಷೆ ಇದೆ.












Click it and Unblock the Notifications