ಬೆಂಗಳೂರಲ್ಲಿ ಈ ನಿಯಮ ಉಲ್ಲಂಘನೆ ಮಾಡಿರುವ ಆಸ್ತಿ ಮಾಲೀಕರಿಗೆ ಶಾಕ್: ಕಟ್ಟಡಗಳ ಭಾಗ ನೆಲಸಮ!
ಬೆಂಗಳೂರಿನಲ್ಲಿ ನಕ್ಷೆ ಮಂಜೂರಾತಿ ನಿಯಮ ಉಲ್ಲಂಘನೆ ಮಾಡುವ ಕಟ್ಟಡಗಳ ಮೇಲೆ ಕ್ರಮ ತೆಗೆದುಕೊಳ್ಳುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ನಕ್ಷೆ ಮಂಜೂರಾತಿಗೆ ವ್ಯತಿರಿಕ್ತವಾಗಿ ನಿರ್ಮಾಣವಾಗಿರುವ ಕಟ್ಟಡದ ಹೆಚ್ಚುವರಿ ಭಾಗದ ತೆರವು ಕಾರ್ಯಚರಣೆ ಕೈಗೊಳ್ಳಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ತಿಳಿಸಿದೆ.
ಬೆಂಗಳೂರು ಪೂರ್ವ ನಗರ ಪಾಲಿಕೆಯ ಹೂಡಿ ವಿಭಾಗ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಪಡೆದುಕೊಂಡು ಮಂಜೂರಾತಿ ನಕ್ಷೆಗೆ ವ್ಯತಿರಿಕ್ತವಾಗಿ ಹೆಚ್ಚುವರಿ ಮಹಡಿಗಳನ್ನು ನಿರ್ಮಿಸಿದ್ದ ಕಟ್ಟಡಗಳ ಅನಧಿಕೃತ ಭಾಗವನ್ನು ಕಾರ್ಯಾಚರಣೆಯ ಮೂಲಕ ತೆರವು ಮಾಡಲಾಯಿತು ಎಂದು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್ ಅವರು ತಿಳಿಸಿದ್ದಾರೆ.

ನಕ್ಷೆ ಮಂಜೂರಾತಿಗೆ ವ್ಯತಿರಿಕ್ತವಾಗಿ ನಿರ್ಮಾಣಗೊಂಡಿದ್ದ ಕಟ್ಟಡಗಳ ವಿವರಗಳು
ಕಟ್ಟಡದ ಮಾಲೀಕರು:ಮಾಲಿನಿ ವಿಜಯಕುಮಾರ್, ಸ್ವತ್ತಿನ ಸಂಖ್ಯೆ: 03, ಬೃಂದಾವನ ಬಡಾವಣೆ
30 x 40 ನಿವೇಶನದಲ್ಲಿ ತಳ ಮಹಡಿ, ನೆಲ ಮಹಡಿ, ಒಂದು ಮತ್ತು ಎರಡನೇ ಮಹಡಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆದಿದ್ದು, ಹೆಚ್ಚುವರಿಯಾಗಿ ಮೂರು ಮತ್ತು ನಾಲ್ಕನೇ ಮಹಡಿಯನ್ನು ನಿರ್ಮಿಸಿರುವುದು ಕಂಡುಬಂದಿರುತ್ತದೆ.ಹೆಚ್ಚುವರಿ ಯಾಗಿ ನಿರ್ಮಾಣಗೊಂಡಿರುವ ಕಟ್ಟಡದ ಭಾಗವನ್ನು ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ.
ಕಟ್ಟಡದ ಮಾಲೀಕರು: ಶಿವಪ್ರಕಾಶ್ ಸ್ವತ್ತಿನ ಸಂಖ್ಯೆ: 25ಎ, ವೈಟ್ ರೋಸ್ ಬಡಾವಣೆ. 30x 50 ನಿವೇಶನದಲ್ಲಿ ತಳ ಮಹಡಿ, ನೆಲ ಮಹಡಿ, ಒಂದು ಮತ್ತು ಎರಡನೇ ಮಹಡಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆದಿದ್ದು, ಹೆಚ್ಚುವರಿಯಾಗಿ ಮೂರು ಮತ್ತು ನಾಲ್ಕನೇ ಮಹಡಿಯನ್ನು ನಿರ್ಮಿಸಿರುವುದು ಕಂಡುಬಂದಿರುತ್ತದೆ. ಹೆಚ್ಚುವರಿ ಯಾಗಿ ನಿರ್ಮಾಣಗೊಂಡಿರುವ ಕಟ್ಟಡದ ಭಾಗವನ್ನು ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.
ಎರಡು ಕಟ್ಟಡದ ಮಾಲೀಕರಿಗೆ ಹೆಚ್ಚುವರಿಯಾಗಿ ನಿರ್ಮಾಣಗೊಂಡಿರುವ ಅನಧಿಕೃತ ಕಟ್ಟಡದ ಭಾಗ ತೆರವುಗೊಳಿಸುವ ಸಂಬಂಧ ಬಿಬಿಎಂಪಿ ಕಾಯ್ದೆ 2020 ರಂತೆ ಕಲಂ 248(1), (2) & (3) ರಂತೆ ವಿವಿಧ ದಿನಾಂಕದಂದು, ಕಾರಣ ಕೇಳಿ ನೋಟಿಸ್, ತಾತ್ಕಲಿಕ ಆದೇಶ, ಮತ್ತು ಸ್ಥಿರೀಕರಣ ಆದೇಶದ ನೋಟಿಸ್‌ನ್ನು ಜಾರಿ ಮಾಡಿ ಅನಧಿಕೃತ ಕಟ್ಟಡದ ಭಾಗಗಳನ್ನು ತೆರೆವುಗೊಳಿಸಲು ತಿಳಿಸಲಾಗಿತ್ತು. ಆದರೂ ಕಟ್ಟಡದ ಮಾಲೀಕರು ಅನಧಿಕೃತ ಕಟ್ಟಡದ ಭಾಗವನ್ನು ತೆರವುಗೊಳಿಸಲು ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಲಾಗಿದೆ.
ನೈಸರ್ಗಿಕ ನ್ಯಾಯದ ಅಡಿಯಲ್ಲಿ ಕಟ್ಟಡ ಮಾಲೀಕರಿಗೆ ಹೆಚ್ಚಿನ ಕಾಲಾವಕಾಶಗಳನ್ನು ನೀಡಿದ್ದರೂ ಸಹಾ, ಸ್ವತ್ತಿನ ಮಾಲೀಕರು ಯಾವುದೇ ಕ್ರಮಗಳನ್ನು ಜರುಗಿಸದೇ ಇರುವುದರಿಂದ ಸ್ಥಿರೀಕರಣ ಆದೇಶದಂತೆ ಎರಡು ಕಟ್ಟಡಗಳ ಅನಧಿಕೃತ ಭಾಗವನ್ನು ಕಾರ್ಯಪಾಲಕ ಅಭಿಯಂತರರ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಟಿ.ಸಿ ರವಿಕುಮಾರ್, ಕಾರ್ಯಪಾಲಕ ಎಂಜಿನಿಯರರು ಹೂಡಿ ವಿಭಾಗ, ಮೊ:9448676356.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications