ಬೆಂಗಳೂರಿನ ಈ ಆಸ್ತಿದಾರರಿಗೆ ಶಾಕ್: ಕಟ್ಟಡ ಮಾಲೀಕರಿಗೆ ನೋಟಿಸ್!
ಬೆಂಗಳೂರಿನಲ್ಲಿ ಕೆಲವು ನಿರ್ದಿಷ್ಟ ಆಸ್ತಿ ಮಾಲೀಕರಿಗೆ ಶಾಕ್ ನೀಡುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮುಂದಾಗಿದ್ದಾರೆ. ಹೊಸ ಬಿಬಿಎಂಪಿ ಆಯುಕ್ತರಾದ ಮಹೇಶ್ವರ್ ರಾವ್ ಅವರು ಕೆಲವೊಂದು ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು ಬೆಂಗಳೂರಿನಲ್ಲಿ ಕೆಲವು ಆಸ್ತಿದಾರರಿಗೆ ನೋಟಿಸ್ ನೀಡುವುದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಿಬಿಎಂಪಿಯು ಯಾವ ಆಸ್ತಿದಾರರಿಗೆ ನೋಟಿಸ್ ಜಾರಿ ಮಾಡಲಿದೆ ಎನ್ನುವ ವಿವರ ಇಲ್ಲಿದೆ.
ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರ ನಿರ್ದೇಶನವನ್ನು ವಲಯ ಆಯುಕ್ತರು ಪಾಲಿಸುತ್ತಿದ್ದಾರೆ. ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತ ಸ್ನೇಹಲ್ ಅವರು ಜಲಮಡಂಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೂರ್ವ ವಲಯ ವ್ಯಾಪ್ತಿಯ ಇಂದಿರಾನಗರದ 12ನೇ ಮುಖ್ಯ ರಸ್ತೆಯಿಂದ ಗಣಪತಿ ಎನ್‌ಕ್ಲೇವ್ ವರೆಗೆ ಪಾದಚಾರಿ ಮಾರ್ಗ ಪರಿಶೀಲನೆ ನಡೆಸುವ ವೇಳೆ ಮಾತನಾಡಿದ ಅವರು, ಮಳೆಗಾಲದ ವೇಳೆ ಒಳಚರಂಡಿಗಳ ಕವರ್ ಸ್ಲ್ಯಾಬ್‌ಗಳಿಂದ ನೀರು ಉಕ್ಕಿ ಹರಿಯಲಿದೆ. ಆದ್ದರಿಂದ ರಸ್ತೆ ಭಾಗದಲ್ಲಿ ಒಳಚರಂಡಿಗಳ ಮೇಲ್ಭಾಗದಲ್ಲಿ ಅಳವಡಿಸಿರುವ ಕವರ್ ಸ್ಲ್ಯಾಬ್‌ಗಳು ದುರಸ್ತಿಯಾಗಿದ್ದರೆ ಬದಲಾಯಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಅನುಪಯುಕ್ತ ವಿದ್ಯುತ್ ಕಂಬಗಳ ತೆರವಿಗೆ ಸೂಚನೆ: ಇಂದಿರಾನಗರದ 100 ಅಡಿ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಹಳೆಯ ಹಾಗೂ ಬಳಕೆಯಲ್ಲಿಲ್ಲದ ವಿದ್ಯುತ್ ಕಂಬಗಳಿದ್ದು, ಅದರಿಂದ ಪಾದಚಾರಿಗಳಿಗೆ ಅಡಚಣೆಯಾಗುತ್ತಿದೆ. ಆದ್ದರಿಂದ ಅವುಗಳನ್ನು ತ್ವರಿತವಾಗಿ ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಇನ್ನು ಇಂದಿರಾನಗರದಿಂದ ಕೋರಮಂಗಲದ ಕಡೆ ಹೋಗುವ ದೊಮ್ಮಲೂರು ಮೇಲ್ಸೇತುವೆಯ ಮೇಲೆ ಪಾದಚಾರಿ ಮಾರ್ಗವಿಲ್ಲದಿರುವುದನ್ನು ಗಮನಿಸಿ, ಇದರಿಂದ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಉಂಟಾಗಿದೆ. ದೊಮ್ಮಲೂರು ಮೇಲ್ಸೇತುವೆ ಮೇಲೆ ಪಾದಚಾರಿ ಮಾರ್ಗ ನಿರ್ಮಾಣ ಮಾಡುವುದು ಅಥವಾ ಹಳೆಯ ವಿಮಾನ ನಿಲ್ದಾಣದ ರಸ್ತೆಗೆ ಪಾದಚಾರಿ ಮೇಲ್ಸೇತುವೆ (ಸ್ಕೈವಾಕ್) ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಪಾದಚಾರಿಯನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಗುರುತಿಸಿ, ಒತ್ತುವರಿ ತೆರವುಗೊಳಿಸಲು. ರಸ್ತೆಯಲ್ಲಿ ಉಂಟಾಗಿರುವ ರಸ್ತೆ ಗುಂಡಿಗಳಿಂದ ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಕೂಡಲೇ ಎಲ್ಲಾ ಗುಂಡಿಗಳನ್ನು ಮುಚ್ಚಲು ಸೂಚಿಸಿದರು. ಇದರೊಂದಿಗೆ ರಸ್ತೆಗೆ ಚಾಚಿಕೊಂಡಿರುವ, ಒಣಗಿದ ಅಪಾಯಕಾರಿ ಮರ ಹಾಗೂ ರೆಂಬೆ -ಕೊಂಬೆಗಳನ್ನು ಗುರುತಿಸಿ ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ.
ಈ ಕಟ್ಟಡ ಮಾಲೀಕರಿಗೆ ನೋಟಿಸ್: ನಗರದಲ್ಲಿ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಪಾದಚಾರಿ ಮಾರ್ಗಗಳಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳು ಹಾಕಿದ್ದು, ಇದರಿಂದ ನಾಗರಿಕರ ಓಡಾಟಕ್ಕೆ ಸಾಕಷ್ಟು ಸಮಸ್ಯೆಯಾಗಲಿದೆ. ಈ ಸಂಬಂಧ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಿ, ದಂಡ ವಿಧಿಸಲು ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇದು ಎಲ್ಲಾ ವಲಯಗಳಲ್ಲೂ ಅನ್ವಯವಾಗುವ ಸಾಧ್ಯತೆ ಇದೆ.
3 ಕಿ.ಮೀ ಪಾದಚಾರಿ ಮಾರ್ಗ ಪರಿಶೀಲನೆ: ಪೂರ್ವ ವಲಯ ವ್ಯಾಪ್ತಿಯ ಸೋನಿ ಸಿಗ್ನಲ್‌ನಿಂದ ದೊಮ್ಮಲೂರು ಮೇಲ್ಸೇತುವೆ ಮೂಲಕ ಕೋರಮಂಗಲದ ಗಣಪತಿ ಎನ್‌ಕ್ಲೇವ್ ವರೆಗೆ 3.00 ಕಿ.ಮೀ ಪಾದಚಾರಿ ಮಾರ್ಗ ಪರಿಶೀಲನೆ ನಡೆಸಿದ ಅವರು ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಸೇರಿದಂತೆ ದುರಸ್ತಿಯ ಅಗತ್ಯವಿರುವ ಜಾಗಗಳಲ್ಲಿ ದುರಸ್ತಿ ಕಾರ್ಯ, ಅನಧಿಕೃತ ಕೇಬಲ್‌ಗಳ ತೆರವು, ಅನಧಿಕೃತ ಬ್ಯಾನರ್ ಗಳ ತೆರವು, ಮಳೆ ಬಂದಾಗ ರಸ್ತೆಗಳಲ್ಲಿ ನೀರು ನಿಲ್ಲುವ ಜಾಗಗಳಲ್ಲಿ ಸಮಸ್ಯೆಗೆ ಪರಿಹಾರ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.












Click it and Unblock the Notifications