Property Tax: ಬೆಂಗಳೂರಲ್ಲಿ ಆಸ್ತಿ ತೆರಿಗೆ ಬಾಕಿದಾರರಿಗೆ ಶಾಕ್‌: 640 ಆಸ್ತಿಗಳಿಗೆ ಹರಾಜು ನೋಟಿಸ್!

ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಬಿಬಿಎಂಪಿಯು ಇದೀಗ ಮತ್ತೊಂದು ಶಾಕ್‌ ಕೊಟ್ಟಿದೆ. ಬೆಂಗಳೂರಿನಲ್ಲಿ ಸುದೀರ್ಘ ಅವಧಿಯಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿದಾರರ ಆಸ್ತಿಗಳನ್ನು ಹರಾಜು ಹಾಕುವುದಕ್ಕೆ ಬಿಬಿಎಂಪಿಯು ಮುಂದಾಗಿದೆ.

ಬೆಂಗಳೂರಿನಲ್ಲಿ ಕಳೆದ ಹಲವು ವರ್ಷಗಳಿಂದ ಹಲವು ಆಸ್ತಿದಾರರು ಬಿಬಿಎಂಪಿಗೆ ಆಸ್ತಿ ತೆರಿಗೆ ಪಾವತಿ ಮಾಡದೆ ಆಸ್ತಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಈ ರೀತಿ ಇರುವವರಿಗೆ ಬಿಬಿಎಂಪಿಯು ಬಿಸಿ ಮುಟ್ಟಿಸುತ್ತಿದೆ. ಈ ಹಿಂದೆ ಬಿಬಿಎಂಪಿಯು ಪ್ರಾಯೋಗಿಕ ನೋಟಿಸ್‌ ಜಾರಿ ಮಾಡಿತ್ತು. ಇದರ ಬೆನ್ನಲ್ಲೇ ಬೆಂಗಳೂರಿನ ಎಂಟು ವಲಯಗಳಿಂದ ತಲಾ 10 ಆಸ್ತಿದಾರರಿಗೆ ದೊಡ್ಡ ಶಾಕ್‌ ಕೊಟ್ಟಿದೆ.

Shock for Those With Property Tax Arrears in Bengaluru Auction Notice for 640 Properties

ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಾಗೂ ಹಲವು ಬಾರಿ ನೋಟಿಸ್‌ ಜಾರಿ ಮಾಡಿದರೂ ಯಾವುದೇ ಪ್ರತಿಕ್ರಿಯೆ ನೀಡದ ಆಸ್ತಿಗಳನ್ನು ಹರಾಜು ಹಾಕುವುದಕ್ಕೆ ಬಿಬಿಎಂಪಿಯು ಮುಂದಾಗಿದೆ. ಪ್ರಾಥಮಿಕವಾಗಿ ಕೆಲವರಿಗೆ ಈ ಸಂಬಂಧ ನೋಟಿಸ್‌ ಜಾರಿ ಮಾಡಲಾಗಿತ್ತು.

ಅದರಲ್ಲಿ ಹಲವರು ಉತ್ತಮವಾಗಿ ಸ್ಪಂದಿಸಿದ ಹಿನ್ನೆಲೆಯಲ್ಲಿ ಇದೀಗ ಇನ್ನಷ್ಟು ಆಸ್ತಿದಾರರಿಗೆ ನೋಟಿಸ್‌ ಕೊಡುವುದಕ್ಕೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಮುಂದಾಗಿದೆ. ಬೆಂಗಳೂರಿನ ಎಂಟು ವಲಯಗಳಿಂದ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 640 ಆಸ್ತಿ ತೆರಿಗೆ ಬಾಕಿದಾರರ ಪಟ್ಟಿಯನ್ನು ರೆಡಿ ಮಾಡಿಕೊಳ್ಳಲಾಗಿದ್ದು. ಮುಂದಿನ ವಾರದಲ್ಲಿ ಈ ಎಲ್ಲಾ ಆಸ್ತಿಗಳಿಗೂ ಆಸ್ತಿ ಹರಾಜು ನೋಟಿಸ್ ಜಾರಿ ಮಾಡುವುದಕ್ಕೆ ನಿರ್ಧರಿಸಿದೆ.

ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಬಿಬಿಎಂಪಿಯು 2023 - 2024ನೇ ಸಾಲಿನಲ್ಲಿ ಹೊಸ ದಾಖಲೆ ಸೃಷ್ಟಿ ಮಾಡಿದೆಯಾದರೂ. ಬೆಂಗಳೂರಿನಲ್ಲಿ ಇನ್ನೂ ಸಾವಿರಾರು ಜನ ಆಸ್ತಿದಾರರು ಅವರ ಆಸ್ತಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಹೀಗಾಗಿ ನೋಟಿಸ್‌ ಹಾಗೂ ಆಸ್ತಿ ಹರಾಜಿಗೆ ಪಾಲಿಕೆ ಮುಂದಾಗಿದೆ.

ಈಚೆಗೆ ಬಿಬಿಎಂಪಿಯು ಬೆಂಗಳೂರಿನ ಎಂಟು ವಲಯಗಳಲ್ಲಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಸ್ಥಿರಾಸ್ತಿ ಹರಾಜು ಹಾಕುವ ಎಚ್ಚರಿಕೆಯನ್ನು ಕೊಟ್ಟು ಪ್ರಾಯೋಗಿಕವಾಗಿ ನೋಟಿಸ್ ಕೊಟ್ಟಿತ್ತು. ಈ ರೀತಿ ನೋಟಿಸ್‌ ಜಾರಿ ಮಾಡಿದ ಬೆನ್ನಲ್ಲೇ ಹಲವರು ಆಸ್ತಿ ತೆರಿಗೆ ಬಾಕಿಯನ್ನು ಪಾವತಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಸಕ್ಸಸ್‌ನ ಹಿನ್ನೆಲೆಯಲ್ಲಿ ಇನ್ನಷ್ಟು ಆಸ್ತಿಗಳಿಗೆ ನೋಟಿಸ್‌ ಜಾರಿ ಮಾಡುವುದಕ್ಕೆ ಪಾಲಿಕೆ ಮುಂದಾಗಿದೆ.

ನೋಟಿಸ್‌ ಬಂದ ಮೇಲೆ ಎಚ್ಚೆತ್ತುಕೊಂಡರು!

ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಹಾಗೂ ಹಲವು ಬಾರಿ ನೋಟಿಸ್ ಕೊಟ್ಟರೂ ಕ್ಯಾರೇ ಎನ್ನದ ಬೆಂಗಳೂರಿನ ಕೆಲವು ಆಸ್ತಿದಾರರು ಸ್ಥಿರಾಸ್ತಿಯನ್ನು ಹರಾಜು ಮಾಡಲಾಗುವುದು ಎನ್ನುವ ಎಚ್ಚರಿಕೆಯ ನೋಟಿಸ್ ಕೊಟ್ಟ ಬೆನ್ನಲ್ಲೇ ಆಸ್ತಿ ತೆರಿಗೆ ಪಾವತಿ ಮಾಡಿದ್ದಾರೆ ಎಂದು ಬಿಬಿಎಂಪಿಯ ಕಂದಾಯ ವಿಭಾಗದ ಅಧಿಕಾರಿಗಳು ಹೇಳಿದ್ದಾರೆ. ಇನ್ನು ಬಿಬಿಎಂಪಿಯು ಆಸ್ತಿ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ಕೊಡುತ್ತಿದೆ. ಇದರೊಂದಿಗೆ ಆಸ್ತಿದಾರರ ಮೊಬೈಲ್‌ ಸಂಖ್ಯೆಗೆ ಆಸ್ತಿ ಹರಾಜು ಹಾಕುವ ಬಗ್ಗೆ ಮೆಸೇಜ್‌ ಕಳುಹಿಸುವುದಕ್ಕೂ ಬಿಬಿಎಂಪಿ ಮುಂದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+