ಬೆಂಗಳೂರು : ಬಾರ್ ಮಾಲೀಕನ ಮೇಲೆ ಗುಂಡಿನ ದಾಳಿ
ಬೆಂಗಳೂರು, ಆಗಸ್ಟ್ 17 : ಬಾರ್ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ನಡೆದಿದೆ. ಬಾರ್ ಮಾಲೀಕ ಪ್ರಾಣಾಪಾಯದಿಂದ ಪಾರಾಗಿದ್ದು, ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರೆಸಿಡೆನ್ಸಿ ರಸ್ತೆಯಲ್ಲಿರುವ ಟೈಮ್ಸ್ ಬಾರ್‌ನಲ್ಲಿ ಭಾನುವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಬಾರ್‌ಗೆ ಬಂದಿದ್ದ ಇಬ್ಬರು ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದಾರೆ. [ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಗುಂಡಿನ ದಾಳಿ]

ಬಾರ್‌ಗೆ ಬಂದು ಮದ್ಯ ಕುಡಿದ ಇಬ್ಬರು ನಂತರ ಮಾಲೀಕ ಸತೀಶ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಎರಡು ಸುತ್ತು ಗುಂಡಿನ ದಾಳಿ ನಡೆಸಿದ್ದು ಸತೀಶ್ ಅವರ ಬೆನ್ನಿಗೆ ಒಂದು ಗುಂಡು ಹೊಕ್ಕಿದೆ. ತಕ್ಷಣ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. [ಹೊಸಕೋಟೆ ಬಳಿ ಶೂಟೌಟ್, 7 ಲಕ್ಷ ದರೋಡೆ]
ಸಂದೀಪ್ ಪಾಟೀಲ್ ಭೇಟಿ : ಕೇಂದ್ರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ. ಬಾರ್‌ನಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.












Click it and Unblock the Notifications