ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ಶೂಟೌಟ್: ದರೋಡೆಕೋರ ಬಂಧನ

|
Google Oneindia Kannada News

ಬೆಂಗಳೂರು, ನವೆಂಬರ್ 26: ಜನರ ನಿದ್ದೆ ಗೆಡಿಸುತ್ತಿದ್ದ ದರೋಡೆಕೋರನ ಕಾಲಿಗೆ ಪೊಲೀಸರು ಗುಂಡು ಇಳಿಸಿದ್ದಾರೆ. ಬಾಗಲೂರಿನ ಪೊಲೀಸ್ ಇನ್‌ ಸ್ಪೆಕ್ಟರ್ ಪ್ರಶಾಂತ ವರಣಿ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲು ಹೋದೋಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಮುಂದಾಗಿದ್ದಾನೆ. ಆತ್ಮ ರಕ್ಷಣೆಗಾಗಿ ಹಾರಿಸಿದ ಗುಂಡು ದರೋಡೆಕಾರನ ಕಾಲಿಗೆ ಬಿದ್ದಿದ್ದು, ಅವನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಹೆಸರು ದಿನೇಶ್ ಅಲಿಯಾಸ್ ದೀನ ಬಂಧಿತ ಆರೋಪಿ. ಹಲವರು ದರೋಡೆ ಪ್ರಕರಣಗಳಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದ. ಖಚಿತ ಮಾಹಿತಿ ಮೇರೆಗೆ ಬೆಳಗಿನ ಜಾವ ಆರೋಪಿ ದಿನೇಶ್ ನನ್ನು ಬಂಧಿಸಲು ಹೋಗಿದ್ದಾರೆ. ಸಂಪಿಗೆಹಳ್ಳಿ ನಿರ್ಜನ ಪ್ರದೇಶದಲ್ಲಿ ಆತನನ್ನು ಹಿಡಿಯಲು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ. ಬಂಧಿಸಲು ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

Shootout in Sampigehalli, Bengaluru : Robber arrested

ಆಗ ಪೊಲೀಸ್ ಇನ್ಸ್ ಪೆಕ್ಟರ್ ಪ್ರಶಾಂತ್ ವರಣಿ ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿದ್ದು, ಅದು ಆರೋಪಿಯ ತೊಡೆಗೆ ಬಿದ್ದಿದೆ. ಗಾಯಗೊಂಡ ದರೋಡೆಕೋರ ದಿನೇಶ್ ನನ್ನು ಯಲಹಂಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗಾಯಾಳು ಪೊಲೀಸ್ ಸಿಬ್ಬಂದಿ ಚಿಕಿತ್ಸೆ ಪಡೆದಿದ್ದಾರೆ. ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

English summary
Bagaluru Police inspector Prashanth shot robber 's leg while he was escaping.The police tried to arrest the accused, when he tried to escape from the police. The bullet fired in self-defense fell to the robber's leg and arrested him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X